News

ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ  ಉದ್ಯೋಗ ಕಲ್ಪಿಸಲಿದೆ `ಫ್ಯೂಚರ್ ಡಿಜಿಟಲ್ ಜಾಬ್ಸ್’
News

ಇಂಜಿನಿಯರಿಂಗ್, ಪಾಲಿಟೆಕ್ನಿಕ್ ವಿದ್ಯಾರ್ಥಿಗಳಿಗೆ ಉದ್ಯೋಗ ಕಲ್ಪಿಸಲಿದೆ `ಫ್ಯೂಚರ್ ಡಿಜಿಟಲ್ ಜಾಬ್ಸ್’

January 14, 2022

ಬೆಂಗಳೂರು, ಜ.13(ಕೆಎಂಶಿ)- ಸರ ಕಾರಿ ಎಂಜಿನಿಯರಿಂಗ್ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‍ಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಸೂಕ್ತ ಉದ್ಯೋಗಾ ವಕಾಶ ಕಲ್ಪಿಸಿಕೊಡುವ ಮಹತ್ವಾ ಕಾಂಕ್ಷೆಯುಳ್ಳ `ಫ್ಯೂಚರ್ ಡಿಜಿಟಲ್ ಜಾಬ್ಸ್’ ಕಾರ್ಯಕ್ರಮಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು ಗುರುವಾರ ಚಾಲನೆ ನೀಡಿದರು. ಇದರ ಅಂಗವಾಗಿ ರಾಜ್ಯ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ (ಕೆಡಿಇಎಂ) ಸಂಸ್ಥೆಗಳು ಒಡಂಬಡಿಕೆಗೆ ಸಹಿ ಹಾಕಿದವು. ವಿಧಾನಸೌಧದಲ್ಲಿ `ಫ್ಯೂಚರ್ ಡಿಜಿಟಲ್ ಜಾಬ್ಸ್’ ಉಪಕ್ರಮಕ್ಕೆ ಹಸಿರು ನಿಶಾನೆ ತೋರಿದ ಸಚಿವರು,…

ಕಿರುತೆರೆ ಪ್ರತಿಭೆ ಸಮನ್ವಿ ಅಪಘಾತದಲ್ಲಿ ಸಾವು
News

ಕಿರುತೆರೆ ಪ್ರತಿಭೆ ಸಮನ್ವಿ ಅಪಘಾತದಲ್ಲಿ ಸಾವು

January 14, 2022

ಬೆಂಗಳೂರು, ಜ.13-ಕಲರ್ಸ್ ಕನ್ನಡ ವಾಹಿನಿಯಲ್ಲಿ ಇತ್ತೀಚೆಗಷ್ಟೇ `ನನ್ನಮ್ಮ ಸೂಪರ್ ಸ್ಟಾರ್’ ರಿಯಾಲಿಟಿ ಶೋ ಆರಂಭ ಗೊಂಡಿದೆ. ಈ ಕಾರ್ಯಕ್ರಮಕ್ಕೆ 6 ವರ್ಷದ ಸಮನ್ವಿ ಸ್ಪರ್ಧಿಯಾಗಿ ತೆರಳಿದ್ದಳು. ಇಂದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಸಮನ್ವಿ ಮೃತಪಟ್ಟಿದ್ದಾಳೆ. ಇದು ಅವಳ ಅಭಿ ಮಾನಿಗಳಿಗೆ ದುಃಖ ತಂದಿದೆ. ಖ್ಯಾತ ಹರಿಕಥೆ ದಾಸ ಗುರುರಾಜಲು ನಾಯ್ಡುರ ಮೊಮ್ಮಗಳು ಸಮನ್ವಿ. ತಾಯಿ ಅಮೃತಾ ಜತೆ ಅವರು ಈ ರಿಯಾಲಿಟಿ ಶೋಗೆ ಬಂದಿದ್ದರು. ಇಂದು ಬೆಂಗಳೂರಿನ ಕೋಣನಕುಂಟೆಯ ವಾಜರಹಳ್ಳಿಯಲ್ಲಿ ಸ್ಕೂಟರ್ ಮೇಲೆ ಸಮನ್ವಿ ಹಾಗೂ ಅಮೃತಾ…

ಇಸ್ರೋ ಮುಖ್ಯಸ್ಥರಾಗಿ ಎಸ್.ಸೋಮನಾಥ್ ನೇಮಕ
News

ಇಸ್ರೋ ಮುಖ್ಯಸ್ಥರಾಗಿ ಎಸ್.ಸೋಮನಾಥ್ ನೇಮಕ

January 13, 2022

ಬೆಂಗಳೂರು,ಜ.12-ರಾಕೆಟ್ ವಿಜ್ಞಾನಿ ಎಸ್.ಸೋಮನಾಥ್ ಅವರನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ನೂತನ ಮುಖ್ಯಸ್ಥ ಮತ್ತು ಬಾಹ್ಯಾಕಾಶ ಇಲಾಖೆಯ ಕಾರ್ಯದರ್ಶಿಯಾಗಿ ನೇಮಿಸ ಲಾಗಿದೆ. ಹಾಲಿ ಮುಖ್ಯಸ್ಥ ಕೆ.ಶಿವನ್ ಅವರ ಸ್ಥಾನಕ್ಕೆ ಸೋಮನಾಥ್ ಅವರು ನೇಮಕಗೊಂಡಿದ್ದಾರೆ, ಶಿವನ್ ಅವರ ಅಧಿಕಾರಾವಧಿ ಜನವರಿ 14, 2022ರಂದು ಕೊನೆಗೊಳ್ಳಲಿದೆ. ಎಸ್.ಸೋಮನಾಥ್ ಅವರು ಜನವರಿ 2018ರಿಂದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರದ (ಗಿSSಅ) ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಬೆಂಗಳೂರಿನ ಇಂಡಿಯನ್ ಇನ್‍ಸ್ಟಿಟ್ಯೂಟ್ ಆಫ್ ಸೈನ್ಸ್ (IISಛಿ)ನ ಹಳೆಯ ವಿದ್ಯಾರ್ಥಿ ಸೋಮನಾಥ್, 1985ರಲ್ಲಿ ಭಾರತೀಯ…

ಬೆಂಗಳೂರಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್‍ನ `ಆರ್ಟಿಸ್ಟ್ರಿ’ ಸ್ಟೋರ್ ಪ್ರಾರಂಭ
News

ಬೆಂಗಳೂರಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್‍ನ `ಆರ್ಟಿಸ್ಟ್ರಿ’ ಸ್ಟೋರ್ ಪ್ರಾರಂಭ

January 12, 2022

ಬೆಂಗಳೂರು, ಜ.11-ದೇಶದಲ್ಲೇ ಅತ್ಯಂತ ದೊಡ್ಡ ಚಿನ್ನ ಮತ್ತು ವಜ್ರದ ರೀಟೇಲ್ ಜಾಲ ಗಳಲ್ಲಿ ಒಂದಾಗಿರುವ ಮಲಬಾರ್ ಗೋಲ್ಡ್ & ಡೈಮಂಡ್ಸ್ ಜ.7ರಂದು ಬೆಂಗಳೂರಿನ ಎಂಜಿ ರಸ್ತೆಯಲ್ಲಿ `ಮಲಬಾರ್ ಗೋಲ್ಡ್ & ಡೈಮಂಡ್ಸ್ ಆರ್ಟಿಸ್ಟ್ರಿ ಸ್ಟೋರ್’ ಅನ್ನು ವಿಜ್ಞಾನ ಮತ್ತು ತಂತ್ರಜ್ಞಾನ, ಉನ್ನತ ಶಿಕ್ಷಣ, ಐಟಿ, ಜೈವಿಕ ತಂತ್ರಜ್ಞಾನ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಉದ್ಘಾಟಿಸಿದರು. ಈ ವೇಳೆ ಮಾತನಾಡಿದ ಮಲಬಾರ್ ಗ್ರೂಪ್ ಅಧ್ಯಕ್ಷ ಎಂ.ಪಿ.ಅಹ್ಮದ್, ಜನವರಿ ತಿಂಗಳಲ್ಲಿ 22 ಹೊಸ ಸ್ಟೋರ್‍ಗಳನ್ನು ಆರಂ ಭಿಸುವ ಮೂಲಕ ನಾವು ಸಂಭ್ರಮದಿಂದ…

ಜನರ ಸಂಕಷ್ಟದ ನಡುವೆ ಬರೀ ಪ್ರಚಾರಕ್ಕಾಗಿ ಡಿಕೆಶಿ ಪಾದಯಾತ್ರೆ
News

ಜನರ ಸಂಕಷ್ಟದ ನಡುವೆ ಬರೀ ಪ್ರಚಾರಕ್ಕಾಗಿ ಡಿಕೆಶಿ ಪಾದಯಾತ್ರೆ

January 11, 2022

ಬೆಂಗಳೂರು, ಜ. 10(ಕೆಎಂಶಿ)- ಸಾಮಾನ್ಯ ಜನರು ಸಂಕಷ್ಟ ಅನುಭವಿಸಿದರೂ ಪರವಾಗಿಲ್ಲ, ತಮಗೆ ಪ್ರಚಾರ ಸಿಕ್ಕಿದರೆ ಸಾಕು ಎನ್ನುವ ದುರುದ್ದೇಶದಿಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಕೆದಾಟು ಯೋಜನೆಯ ಹೆಸರು ಹೇಳಿಕೊಂಡು ಪಾದಯಾತ್ರೆಯ ನಾಟಕ ವಾಡುತ್ತಿದ್ದಾರೆ. ಆದರೆ, ಇದು ಪಶ್ಚಾತ್ತಾಪದ ಯಾತ್ರೆಯಾಗಿದೆ ಎಂದು ರಾಮನಗರ ಜಿಲ್ಲಾ ಉಸ್ತುವಾರಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಕಟಕಿಯಾಡಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಅವರು, `ಕೋವಿಡ್ ನಿಯಮಾ ವಳಿಯನ್ನು ಉಲ್ಲಂಘಿಸಿರುವ ಕಾಂಗ್ರೆಸ್ಸಿನ 30ಕ್ಕೂ ಹೆಚ್ಚು ನಾಯಕರ ಮೇಲೆ…

ವೀಕೆಂಡ್ ಕಫ್ರ್ಯೂ ನಡುವೆಯೇ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಆರಂಭ
News

ವೀಕೆಂಡ್ ಕಫ್ರ್ಯೂ ನಡುವೆಯೇ ಕಾಂಗ್ರೆಸ್‍ನ ಮೇಕೆದಾಟು ಪಾದಯಾತ್ರೆ ಆರಂಭ

January 10, 2022

ಕನಕಪುರ, ಜ.9-ವೀಕೆಂಡ್ ಕಫ್ರ್ಯೂ ನಡುವೆಯೇ ಮೇಕೆ ದಾಟುವಿನ ಸಂಗಮದಿಂದ ಕಾಂಗ್ರೆಸ್‍ನ ಮಹತ್ವದ `ನೀರಿಗಾಗಿ ನಡಿಗೆ’, `ನಮ್ಮ ನೀರು-ನಮ್ಮ ಹಕ್ಕು’ ಪಾದಯಾತ್ರೆ ಭಾನುವಾರ ಬೆಳಗ್ಗೆ ಆರಂಭವಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಈ ಬೃಹತ್ ಪಾದಯಾತ್ರೆಯಲ್ಲಿ ಸಾಮಾಜಿಕ ಅಂತರವಿಲ್ಲದೆ ಕೋವಿಡ್ ನಿಯಮಗಳನ್ನು ಸ್ಪಷ್ಟವಾಗಿ ಉಲ್ಲಂಘಿಸ ಲಾಯಿತು. ಮಾಸ್ಕ್ ಹಾಕಿಕೊಳ್ಳಿ ಎಂದು ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ನೆರೆ ದಿದ್ದ ಸಾವಿರಾರು ಮಂದಿ ಕಾರ್ಯಕರ್ತರಿಗೆ ಸೂಚನೆ ನೀಡಿದ್ದರಾದರೂ, ಪಾದ ಯಾತ್ರೆಯ ನೇತೃತ್ವ ವಹಿಸಿದ್ದ ಡಿ.ಕೆ.ಶಿವಕುಮಾರ್ ಸ್ವತಃ…

ಇಂದಿನಿಂದ ಮೇಕೆದಾಟು ಪಾದಯಾತ್ರೆ
News

ಇಂದಿನಿಂದ ಮೇಕೆದಾಟು ಪಾದಯಾತ್ರೆ

January 9, 2022

ಕನಕಪುರ, ಜ. 8- ವಾರಾಂತ್ಯ ಕಫ್ರ್ಯೂ ನಡುವೆಯೇ ಕಾಂಗ್ರೆಸ್‍ನ ಮಹತ್ವದ ಮೇಕೆದಾಟು ಪಾದಯಾತ್ರೆ ಭಾನುವಾರ ಬೆಳಗ್ಗೆ 8.30ಕ್ಕೆ ಮೇಕೆದಾಟು ಸಮೀಪದ ಸಂಗಮದಲ್ಲಿ ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕೆಲ ಮಠಾಧೀಶರು, ಹ್ಯಾಟ್ರಿಕ್ ಹೀರೋ ಶಿವರಾಜ್‍ಕುಮಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಚಾಲನೆ ನೀಡಲಿದ್ದಾರೆ. ನೇತ್ರಾವತಿ ಮತ್ತು ಅರ್ಕಾವತಿ ನದಿಗಳು ಕಾವೇರಿಯೊಂದಿಗೆ ಸಂಗಮವಾಗುವ ಸ್ಥಳದಿಂದ ಪಾದಯಾತ್ರೆ ಆರಂಭವಾಗಲಿದ್ದು, ಈ ಕಾರ್ಯಕ್ರಮಕ್ಕಾಗಿ 66×33 ವಿಸ್ತೀರ್ಣದ ಬೃಹತ್ ವೇದಿಕೆ…

ಕೋವಿಡ್ ನಿಯಮ ಪಾಲನೆಯೊಂದಿಗೆ ಪಾದಯಾತ್ರೆ ನಡೆಸಿಯೇ ತೀರುತ್ತೇವೆ
News

ಕೋವಿಡ್ ನಿಯಮ ಪಾಲನೆಯೊಂದಿಗೆ ಪಾದಯಾತ್ರೆ ನಡೆಸಿಯೇ ತೀರುತ್ತೇವೆ

January 9, 2022

ಕನಕಪುರ, ಜ.8-ವೀಕೆಂಡ್ ಕಫ್ರ್ಯೂ ನಡುವೆಯೇ `ನೀರಿಗಾಗಿ ನಡಿಗೆ’, `ನಮ್ಮ ನೀರು, ನಮ್ಮ ಹಕ್ಕು’ ಹೆಸರಿನಲ್ಲಿ ಉದ್ದೇಶಿತ ಮೇಕೆದಾಟು ಪಾದಯಾತ್ರೆ ಯನ್ನು ಭಾನುವಾರ ಬೆಳಗ್ಗೆ 8.30ಕ್ಕೆ ಪ್ರಾರಂಭಿಸಲು ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಕೋವಿಡ್ ನಿಯಮಗಳ ಪಾಲನೆ ಯೊಂದಿಗೆ ಪಾದಯಾತ್ರೆ ನಡೆಸಲಿರು ವುದಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿಧಾನ ಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಘೋಷಿಸಿದ್ದಾರೆ. ಮೇಕೆದಾಟು ಪಾದಯಾತ್ರೆ ಹಿನ್ನೆಲೆಯಲ್ಲಿ ಕನಕಪುರ ದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸದಲ್ಲಿ ಶನಿವಾರ ಶಾಸಕಾಂಗ ಪಕ್ಷದ ಸಭೆ ನಡೆಸಿದ ನಂತರ ಜಂಟಿ ಸುದ್ದಿ ಗೋಷ್ಠಿ…

ನಾಯಂಡಹಳ್ಳಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು
News

ನಾಯಂಡಹಳ್ಳಿ ಬಳಿ ಹಳಿ ತಪ್ಪಿದ ಗೂಡ್ಸ್ ರೈಲು

January 8, 2022

ಬೆಂಗಳೂರು, ಜ.7-ಗೂಡ್ಸ್ ರೈಲೊಂದು ಹಳಿ ತಪ್ಪಿದ ಪರಿಣಾಮ ಬೆಂಗಳೂರು-ಮೈಸೂರು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿ ಪ್ರಯಾಣಿಕರು ಪರದಾಡಿದ ಪ್ರಸಂಗ ಇಂದು ಮಧ್ಯಾಹ್ನ ಸಂಭವಿಸಿದೆ. ಬೆಂಗಳೂರಿನ ನಾಯಂಡಹಳ್ಳಿ ಬಳಿ ಕಲ್ಲುಗಳನ್ನು ತುಂಬಿಕೊಂಡು ಬರುತ್ತಿದ್ದ ಗೂಡ್ಸ್ ರೈಲಿನ ಬೋಗಿಯೊಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ಹಳಿ ತಪ್ಪಿತು. ಇದರಿಂದ ರೈಲು ಹಳಿಗಳು ಕೂಡ ಸಣ್ಣ ಪ್ರಮಾಣದಲ್ಲಿ ಜಖಂಗೊಂಡವು. ತಕ್ಷಣ ಬೆಂಗಳೂರು-ಮೈಸೂರು ರೈಲುಗಳ ಸಂಚಾರವನ್ನು ಸುಮಾರು ಎರಡು ಗಂಟೆಗಳ ಕಾಲ ಸ್ಥಗಿತಗೊಳಿಸಲಾಯಿತು. ಇದರಿಂದ ಪ್ರಯಾಣಿಕರು ಪರದಾಡಿದರು. ವಿಷಯ ತಿಳಿದು ರೈಲ್ವೆ ಅಧಿಕಾರಿಗಳು ತಕ್ಷಣ…

ಜ. 26ರಿಂದ ರಾಜ್ಯದಲ್ಲಿ ಜೆಡಿಎಸ್ ‘ಜನತಾ ಜಲಧಾರೆ’
News

ಜ. 26ರಿಂದ ರಾಜ್ಯದಲ್ಲಿ ಜೆಡಿಎಸ್ ‘ಜನತಾ ಜಲಧಾರೆ’

January 8, 2022

ಬೆಂಗಳೂರು: ರಾಜ್ಯದ ಎಲ್ಲಾ ಭಾಗಗ ಳಿಗೂ ನೀರು ಒದಗಿಸುವ, ಲಭ್ಯ ನೀರನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಹಾಗೂ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ಜಾರಿ ಮಾಡುವ ಮಹಾ ಸಂಕಲ್ಪದೊಂದಿಗೆ ಜೆಡಿಎಸ್ ಪಕ್ಷದಿಂದ ರಾಜ್ಯ ವ್ಯಾಪಿ ಇದೇ ಜನವರಿ 26ರಿಂದ ‘ಜನತಾ ಜಲ ಧಾರೆ’ ವಿಶೇಷ ಕಾರ್ಯ ಕ್ರಮ ಹಮ್ಮಿಕೊಳ್ಳಲಾ ಗಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಪಕ್ಷದ ರಾಜ್ಯ ಕಚೇರಿಯಲ್ಲಿ ಇಂದು ಜನತಾ ಜಲಧಾರೆಗೆ ಹೊರಡಲಿರುವ ಗಂಗಾ ರಥವನ್ನು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ಮತ್ತು…

1 44 45 46 47 48 73
Translate »