ಬೆಂಗಳೂರು, ಜೂ.16 (ಕೆಎಂಶಿ)- ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಹೋದ್ಯೋಗಿ ರಾಸಾಯನಿಕ ಸಚಿವ ಡಿ.ವಿ.ಸದಾನಂದಗೌಡ ಅವರನ್ನು ತಮ್ಮ ನಿವಾಸಕ್ಕೆ ಕರೆಸಿಕೊಂಡು ಕರ್ನಾಟಕ ದಲ್ಲಿನ ಪಕ್ಷದ ಸರ್ಕಾರ ಹಾಗೂ ರಾಜಕೀಯ ಪರಿ ಸ್ಥಿತಿ ಕುರಿತು ಮಾಹಿತಿ ಪಡೆದಿದ್ದಾರೆ. ಪ್ರಧಾನಿಯವರು ನಿನ್ನೆಯಷ್ಟೇ ಉತ್ತರ ಪ್ರದೇಶ ಮತ್ತು ಕರ್ನಾಟಕದಲ್ಲಿನ ನಾಯಕತ್ವ ಕುರಿತಂತೆ ಗೃಹ ಸಚಿವ ಅಮಿತ್ ಷಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಡ್ಡಾ ಅವರ ಜೊತೆ ಸಮಾಲೋಚನೆ ನಡೆಸಿದ್ದರು. ಇದರ ಬೆನ್ನಲ್ಲೇ ತಮಗೆ ಅಪಾರ ನಂಬಿಕೆಗೆ ಅರ್ಹರಾಗಿ ರುವ…
ಮಹಿಳಾ ಸಾಂತ್ವನ ಕೇಂದ್ರ ಬಂದ್ ನಿರ್ಧಾರ ಹಿಂದಕ್ಕೆ
June 17, 2021ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ಬೆಂಗಳೂರು, ಜೂ.16(ಕೆಎಂಶಿ)- ರಾಜ್ಯದ 74 ಮಹಿಳಾ ಸಾಂತ್ವನ ಸಹಾಯ ವಾಣಿಗಳನ್ನು ಬಂದ್ ಮಾಡಿರುವ ಆದೇಶ ಹಿಂತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಮಹಿಳಾ ಸಾಂತ್ವನ ಕೇಂದ್ರಗಳ ಒಕ್ಕೂಟದ ಪದಾಧಿ ಕಾರಿಗಳು ಸಿಎಂ ಭೇಟಿ ಮಾಡಿ ಮನವಿ ಮಾಡಿದ ಸಂದರ್ಭದಲ್ಲಿ ಕೂಡಲೇ ಆದೇಶ ಹಿಂತೆಗೆದು ತಿದ್ದುಪಡಿ ಆದೇಶ ಹೊರಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ನೊಂದ ಮಹಿಳೆಯರ ಸಾಂತ್ವನಕ್ಕಾಗಿ ಸ್ವತಃ ರಾಜ್ಯ ಸರ್ಕಾರ 2001ರಲ್ಲಿ ಸ್ವಯಂ ಸೇವಾ ಸಂಘ ಸಂಸ್ಥೆಗಳ ಮೂಲಕ 194…
ಡಿಸೆಂಬರ್ ಒಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ
June 17, 2021ಬೆಂಗಳೂರು,ಜೂ.16(ಕೆಎಂಶಿ)-ಮಹಾಮಾರಿ ಕೋವಿಡ್ ನಿಂದ ಜೀವ ಕಾಪಾ ಡುವ ಲಸಿಕೆಯ ಬಗ್ಗೆ ನಡೆಯುತ್ತಿರುವ ರಾಜ ಕೀಯ ಮೇಲಾಟ ಅತ್ಯಂತ ದುರದೃಷ್ಟಕರ. ಆದರೆ ಡಿಸೆಂಬರ್ ಒಳಗಾಗಿ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಸರ್ಕಾರ ಲಸಿಕೆ ನೀಡಿಯೇ ನೀಡುತ್ತದೆ ಎಂದು ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರೂ ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದರು. ನಗರದಲ್ಲಿಂದು ವಕೀಲರಿಗೆ ಆಯೋಜಿಸಿದ್ದ ವಿಶೇಷ ಲಸಿಕೆ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಅವರು ಮಾತನಾಡಿ ದರು. ಕೋವಿಡ್ ಮಾರಿಯನ್ನು ನಮ್ಮ ಹತ್ತಿರಕ್ಕೆ ಬರದಂತೆ ತಡೆಯಲು ಇರುವ ಏಕೈಕ…
ಇಂದು ರಾಜ್ಯಕ್ಕೆ ಅರುಣ್ ಸಿಂಗ್ ಕಮಲದಲ್ಲಿ ಕಳವಳ
June 16, 2021ಬೆಂಗಳೂರು,ಜೂ.15-ನಾಯಕತ್ವ ಬದಲಾವಣೆ ಚರ್ಚೆಯ ನಡುವೆಯೇ ಕರ್ನಾಟಕ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಬುಧವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಜೂನ್ 18ರಂದು ರಾಜ್ಯ ಕೋರ್ ಕಮಿಟಿ ಸಭೆ ನಡೆಯ ಲಿದ್ದು, ಕುತೂಹಲಕ್ಕೆ ಕಾರಣವಾಗಿದೆ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರೇ ಮುಂದುವರೆಯಲಿದ್ದಾರೆ. ನಾಯಕತ್ವ ಬದಲಾವಣೆ ಇಲ್ಲ ಎಂದು ಈಗಾಗಲೇ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ. ಆದರೆ ಅರವಿಂದ ಬೆಲ್ಲದ್ ಸೋಮವಾರ ದೆಹಲಿಯಲ್ಲಿ ಹಲವು ನಾಯಕರನ್ನು ಭೇಟಿ ಮಾಡಿದ್ದು, ಪ್ರಶ್ನೆಗಳನ್ನು ಹುಟ್ಟು ಹಾಕಿದೆ. 3 ದಿನಗಳ ಭೇಟಿಯಾಗಿ ಅರುಣ್‍ಸಿಂಗ್ ಬುಧವಾರ ಸಂಜೆ ಬೆಂಗಳೂರಿಗೆ ಬರ ಲಿದ್ದಾರೆ….
ಜನರ ತಲೆ ಮೇಲೆ ಚಪ್ಪಡಿ ಎಳೆದ ಕೇಂದ್ರ, ರಾಜ್ಯ: ಸಿದ್ದರಾಮಯ್ಯ ಆಕ್ರೋಶ
June 11, 2021ಬೆಂಗಳೂರು, ಜೂ.10(ಕೆಎಂಶಿ)-ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸ್ಸೋ ಇಚ್ಛೆ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಚಪ್ಪಡಿ ಎಳೆದಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹೇಳುವ ಅಚ್ಛೇ ದಿನ್ ಇದೇ ಏನು? ಎಂದು ಪ್ರಶ್ನಿಸಿ ದರು. ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ…
ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ಯಡಿಯೂರಪ್ಪ ವಿಡಿಯೋ ಸಂವಾದ ಸೋಂಕಿಗೆ ಬಲಿಯಾದ ಕಾರ್ಯಕರ್ತೆಯರಿಗೆ 30 ಲಕ್ಷ ಪರಿಹಾರ
June 10, 2021ಬೆಂಗಳೂರು,ಜೂ.9(ಕೆಎಂಶಿ)-ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬುಧ ವಾರ ರಾಜ್ಯದ ವಿವಿಧ ಜಿಲ್ಲೆಗಳ ಅಂಗನವಾಡಿ ಕಾರ್ಯಕರ್ತೆಯರೊಂದಿಗೆ ವಿಡಿಯೋ ಸಂವಾದ ನಡೆಸಿ, ಅವರ ಕಾರ್ಯನಿರ್ವಹಣೆ, ಸಮಸ್ಯೆಗಳು, ಸವಾಲುಗಳು ಮತ್ತು ಇತರ ವಿಷಯಗಳ ಕುರಿತು ಚರ್ಚಿಸಿದರು. ಕೋವಿಡ್-19 ಸೋಂಕಿನ ನಿಯಂ ತ್ರಣದಲ್ಲಿ ತಳಹಂತದಲ್ಲಿ ಅಂಗನವಾಡಿ ಕಾರ್ಯ ಕರ್ತೆಯರೂ, ಗಮನಾರ್ಹ ಸೇವೆ ಸಲ್ಲಿಸುತ್ತಿದ್ದಾರೆ. ಆರು ವರ್ಷದೊಳಗಿನ ಮಕ್ಕಳು, ಗರ್ಭಿಣಿ, ಬಾಣಂತಿಯರ ಆರೋಗ್ಯ ರಕ್ಷಣೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಅತೀ ಮುಖ್ಯವಾದುದು ಎಂದು ಮುಖ್ಯಮಂತ್ರಿ ಗಳು ಅಭಿಪ್ರಾಯಪಟ್ಟರು. ಮೂರನೇ ಅಲೆಯಲ್ಲಿ ಕೋವಿಡ್-19 ಸೋಂಕು ಮಕ್ಕಳ ಮೇಲೆ ಹೆಚ್ಚಿನ…
ಭಾಸ್ಕರ್ ಶೆಟ್ಟಿ ಕೊಲೆ ಪ್ರಕರಣ; ಪತ್ನಿ ಸೇರಿ ಮೂವರಿಗೆ ಜೀವಾವಧಿ ಜೈಲು ಶಿಕ್ಷೆ
June 10, 2021ಉಡುಪಿ,ಜೂ.9-ಉಡುಪಿಯ ಇಂದ್ರಾಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ್ ಶೆಟ್ಟಿ (52) ಹತ್ಯೆ ಪ್ರಕರಣದಲ್ಲಿ ಭಾಗಿಯಾಗಿದ್ದ ಮೃತರ ಪತ್ನಿ ಮತ್ತು ಮಗ ಸೇರಿದಂತೆ ಮೂವರನ್ನು ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಮಂಗಳ ವಾರ ಅಪರಾಧಿಗಳೆಂದು ತೀರ್ಪು ನೀಡಿದೆ. ಅಲ್ಲದೆ ಮೂವರಿಗೂ ಜೀವಿ ತಾವಧಿ ಜೈಲು ಶಿಕ್ಷೆ ವಿಧಿಸಲಾಗಿದೆ. ಭಾಸ್ಕರ್ ಶೆಟ್ಟಿ ಪತ್ನಿ ರಾಜೇಶ್ವರಿ ಶೆಟ್ಟಿ, ಮಗ ನವನೀತ್ ಶೆಟ್ಟಿ ಮತ್ತು ನಂದಳಿಕೆ ಮೂಲದ ಜ್ಯೋತಿಷಿ ನಿರಂಜನ್ ಭಟ್ ಅಪರಾಧಿ ಎಂದು ನ್ಯಾಯಾಲಯ ಪರಿಗಣಿಸಿ ಜೀವಾವಧಿ ಶಿಕ್ಷೆ ವಿಧಿಸಿದೆ. ಇದೇ ಪ್ರಕರಣದಲ್ಲಿ…
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್ ಮಾತುಕತೆ ನಂತರ ನಾಯಕತ್ವ ತ್ಯಜಿಸಲು ಯಡಿಯೂರಪ್ಪ ಸಮ್ಮತಿ?
June 9, 2021ಬೆಂಗಳೂರು, ಜೂ.8(ಕೆಎಂಶಿ)- ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಲು ಬಿ.ಎಸ್.ಯಡಿಯೂರಪ್ಪ ಸಮ್ಮತಿಸಿದ್ದಾರೆ. ಕರ್ನಾಟಕದಲ್ಲಿನ ನಾಯಕತ್ವ ಗೊಂದಲ ನಿವಾರಿಸಲು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಭೂಪೇಂದ್ರ ಯಾದವ್, ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ, ಸುದೀರ್ಘ ಸಮಾಲೋಚನೆ ನಡೆಸಿದ ಸಂದರ್ಭದಲ್ಲಿ ಯಡಿ ಯೂರಪ್ಪ ಅಧಿಕಾರದಿಂದ ಕೆಳಗಿಳಿಯುವ ಮಾತುಗಳನ್ನಾಡಿ ದ್ದಾರೆ ಎಂದು ಮೂಲಗಳು ತಿಳಿಸಿವೆ. ಭೂಪೇಂದ್ರ ಯಾದವ್, ಯಡಿಯೂರಪ್ಪನವರ ಸಂದೇಶ ವನ್ನು ವರಿಷ್ಠರಿಗೆ ರವಾನಿಸುತ್ತಿದ್ದಂತೆ ಜೂನ್ 14 ರಂದು ಬಿಜೆಪಿಯ ಸಂಸದೀಯ ಮಂಡಳಿ ಸಭೆ ಕರೆದು, ಮುಂದಿನ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಹೇಳಲಾಗಿದೆ. ಈ ಮಧ್ಯೆ…
ಹೈಕಮಾಂಡ್ ಬಯಸಿದರೆ ರಾಜೀನಾಮೆ
June 7, 2021ಬೆಂಗಳೂರು, ಜೂ.6- ಹೈಕಮಾಂಡ್ ಸೂಚಿಸಿದರೆ ರಾಜೀನಾಮೆ ನೀಡಲು ಸಿದ್ಧವಿರುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಇದರೊಂ ದಿಗೆ ರಾಜ್ಯದ ನಾಯಕತ್ವ ಬದಲಾವಣೆಗೆ ಚಾಲನೆ ದೊರೆ ತಿದೆ ಎಂಬ ಮಾಧ್ಯಮ ವರದಿಗೆ ಪುಷ್ಟಿ ಸಿಕ್ಕಂತಾಗಿದೆ. ಭಾನುವಾರ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯ ಮಂತ್ರಿಗಳು, ನನ್ನ ಮೇಲೆ ಹೈಕಮಾಂಡ್ ವಿಶ್ವಾಸವಿಟ್ಟಿದೆ. ವರಿಷ್ಠರು ವಿಶ್ವಾಸವಿಟ್ಟು ಎಷ್ಟು ದಿನದವರೆಗೆ ಮುಂದುವರೆ ಯಲು ಹೇಳುತ್ತಾರೋ ಅಷ್ಟು ದಿನದವರೆಗೆ ಮುಂದು ವರೆಯುತ್ತೇನೆ. ಅವರು ಸೂಚಿಸಿದ ತಕ್ಷಣ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುತ್ತೇನೆ. ಇದರಲ್ಲಿ ನನಗೆ ಯಾವುದೇ ರೀತಿಯ ಗೊಂದಲವಿಲ್ಲ…
ವೈಜ್ಞಾನಿಕವಾಗಿ, ಹಂತ ಹಂತದ ಅನ್‍ಲಾಕ್ ಪ್ರಕ್ರಿಯೆಗೆ ತಜ್ಞರ ಒಲವು
June 7, 2021ಬೆಂಗಳೂರು,ಜೂ.6-ಕೋವಿಡ್-19 ಅನ್ನು ನಿರ್ಬಂಧಿಸಲು ರಾಜ್ಯ ಸರ್ಕಾರ ಲಾಕ್‍ಡೌನ್ ಅನ್ನು ವಿಸ್ತರಿಸಿದ್ದು, ಮುಂದಿನ ದಿನಗಳಲ್ಲಿ ಹಂತಹಂತವಾಗಿ, ಗ್ರೇಡ್ ಮಾದರಿಯಲ್ಲಿ, ಸಮಯ ಮಿತಿಯೊಳಗೆ ಅನ್‍ಲಾಕ್ ಪ್ರಕ್ರಿಯೆಗೆ ಸರ್ಕಾರ ಚಾಲನೆ ನೀಡಬೇಕೆಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಅನ್‍ಲಾಕ್ ಪ್ರಕ್ರಿಯೆ ಯನ್ನು ಪರಿಣಾಮಕಾರಿ ಯಾಗಿ ನಡೆಸಿದರೆ ಕೊರೊನಾ 3ನೇ ಅಲೆಯಿಂದ ಅಷ್ಟೊಂದು ದುಷ್ಪರಿಣಾಮ ಬೀರಲಿಕ್ಕಿಲ್ಲ ಎಂಬ ಅಭಿ ಪ್ರಾಯ ತಜ್ಞರದ್ದು. ಕೋವಿಡ್-19 ಬಗ್ಗೆ ಕಾಲಕಾಲಕ್ಕೆ ಸೂಚನೆ, ಸಲಹೆ ನೀಡುವ ತಾಂತ್ರಿಕ ಸಲಹಾ ಸಮಿತಿ ವರದಿ ನೀಡಿದ ಮೇಲೆ ರಾಜ್ಯದಲ್ಲಿ ಪಾಸಿಟಿವ್ ಪ್ರಕರಣಗಳ ದರ ಶೇ.5ಕ್ಕಿಂತ…