ನವದೆಹಲಿ: ದೇಶದಲ್ಲಿ ಮತ್ತೆ ಕೊರೊನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಮಧ್ಯೆ, ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದಿದ್ದು, ಕೋವಿಡ್ ಪರಿಸ್ಥಿತಿ ಮತ್ತು ಲಸಿಕೆ ಅಭಿಯಾನದ ಬಗ್ಗೆ ಚರ್ಚಿಸಲಿದ್ದಾರೆ ಎಂದು ಸೋಮವಾರ ಮೂಲಗಳು ತಿಳಿಸಿವೆ. ಏ.8ರಂದು ಸಂಜೆ 6.30ಕ್ಕೆ ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫರೆನ್ಸ್ ಮೂಲಕ ಮುಖ್ಯಮಂತ್ರಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪ್ರಧಾನಿ ಮೋದಿ ಕಳೆದ ಮಾ.17ರಂದು ಸಿಎಂಗಳೊಂದಿಗೆ ಕೊನೆಯ ಸಂವಾದ ನಡೆಸಿದ್ದರು. ಈ ಸಂದರ್ಭದಲ್ಲಿ ಅವರು ದೇಶದ…
ಅಪರೂಪದ ಕಾಯಿಲೆಗಳ ಕುರಿತ ರಾಷ್ಟ್ರೀಯ ನೀತಿಗೆ ಕೇಂದ್ರ ಆರೋಗ್ಯ ಸಚಿವರ ಅನುಮೋದನೆ
April 5, 2021ನವದೆಹಲಿ,ಏ.4-ಅಪರೂಪದ ಕಾಯಿಲೆಗಳ ಕುರಿತ ರಾಷ್ಟ್ರೀಯ ನೀತಿ 2021ಕ್ಕೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಅನುಮೋದನೆ ನೀಡಿದೆ. ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಹರ್ಷವರ್ಧನ್ ಅವರು ಅನುಮೋದನೆ ನೀಡಿದ್ದು, ಈ ನೀತಿಯ ದಾಖಲೆಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾ ಲಯದ ವೆಬ್‍ಸೈಟ್‍ನಲ್ಲಿ ಅಪ್‍ಲೋಡ್ ಮಾಡಲಾಗಿದೆ. ಕೆಲವು ವರ್ಷಗಳಿಂದೀಚೆಗೆ ನಾನಾ ಭಾಗೀದಾರರು ಅಪ ರೂಪದ ಕಾಯಿಲೆಗಳ ನಿರ್ವಹಣೆ ಮತ್ತು ನಿಯಂತ್ರಣಕ್ಕೆ ಸಮಗ್ರ ನೀತಿ ಅವಶ್ಯಕತೆ ಇದೆ ಎಂದು ಬೇಡಿಕೆಯನ್ನು ಒಡ್ಡುತ್ತಲೇ ಇದ್ದರು….
ಎಸ್‍ಐಟಿ ತನಿಖಾ ವೈಖರಿಗೆ ಸಿಡಿ ಲೇಡಿ ಅಸಮಾಧಾನ
April 5, 2021ಬೆಂಗಳೂರು, ಏ.4-ಸಿಡಿ ಪ್ರಕರಣದಲ್ಲಿ ಎಸ್‍ಐಟಿ ಅಧಿಕಾರಿಗಳಿಂದ ಮಾಜಿ ಸಚಿವ ರಮೇಶ್ ಜಾರಕಿ ಹೊಳಿ ಅವರನ್ನು ರಕ್ಷಿಸುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿ ಸಂತ್ರಸ್ತ ಯುವತಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರಿಗೆ ಭಾನುವಾರ ಪತ್ರ ರವಾನಿಸಿದ್ದಾರೆ. ಯುವತಿ ತನ್ನ ಕೈಬರಹದಲ್ಲೇ ಬರೆದಿರುವ ಪತ್ರವನ್ನು ಆಕೆಯ ಪರ ವಕೀಲ ಜಗದೀಶ್‍ಕುಮಾರ್ ಮತ್ತು ವಕೀ ಲರೂ ಆಗಿರುವ ಕೆಪಿಸಿಸಿ ಕಾನೂನು ವಿಭಾಗದ ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದ ರಾಜ್ ಅವರು ಪೊಲೀಸ್ ಆಯುಕ್ತರ ಕಚೇರಿಗೆ ತಲುಪಿಸಿದರು. ಎಸ್‍ಐಟಿ…
ಅರುಣ್ ಸಿಂಗ್ ಇಡೀ ರಾಜ್ಯಕ್ಕೇ ಉಸ್ತುವಾರಿ, ಬರೀ ಸಿಎಂಗೆ ಅಲ್ಲ
April 3, 2021ವಿಜಯಪುರ, ಏ.2- ಸಚಿವರ ಖಾತೆಗಳಲ್ಲಿ ಹಸ್ತ ಕ್ಷೇಪ ಮಾಡುತ್ತಿರುವ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು, ಎಲ್ಲಾ ಮಂತ್ರಿ ಗಳು ಯಾಕೆ ಬೇಕು, ಎಲ್ಲಾ ಖಾತೆ ಗಳನ್ನು ನಿಮ್ಮ ಮಗ ವಿಜಯೇಂದ್ರಗೇ ವಹಿಸಿಕೊಡು ವುದು ಸೂಕ್ತ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಯಡಿಯೂರಪ್ಪ ಅವರು ತಮ್ಮ ಖಾತೆಯಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯಪಾಲರಿಗೆ ಹಾಗೂ ಪಕ್ಷದ ಹೈಕಮಾಂಡ್‍ಗೆ ಪತ್ರ ಬರೆದಿದ್ದ…
ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಸರ್ಕಾರದ ಮಾರ್ಗಸೂಚಿ ಎಲ್ಲರಿಗೂ ಅನ್ವಯವಾಗಲಿ
April 3, 2021ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹ ಸಚಿವ ಈಶ್ವರಪ್ಪ ಮುಖ್ಯಮಂತ್ರಿಗೆ ನಿಷ್ಠರಾಗಿಲ್ಲ ಬೆಂಗಳೂರು, ಏ.2(ಕೆಎಂಶಿ)- ಕೊರೊನಾ ಎರಡನೇ ಅಲೆ ಹೆಚ್ಚುತ್ತಿರುವ ಸಂದರ್ಭದಲ್ಲಿ ರಾಜ್ಯ ಸರ್ಕಾರ ಬಿಡು ಗಡೆ ಮಾಡಿರುವ ಮಾರ್ಗಸೂಚಿಗಳು ಎಲ್ಲರಿಗೂ ಅನ್ವಯವಾಗಬೇಕು. ಅದನ್ನು ಬಿಟ್ಟು ತಮಗೆ ಬೇಕಾ ದಾಗ ಮಾರ್ಗಸೂಚಿ ಬಿಡುಗಡೆ ಮಾಡಿ, ಬೇಡವಾ ದಾಗ ಅದನ್ನು ಸಡಿಲ ಮಾಡಬಾರದು. ಆ ರೀತಿ ಮಾಡಿ ದರೆ ನಾವು ರಾಜಕೀಯ ಹೊರಾಟ ಮಾಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಸರ್ಕಾರ ಮಾರ್ಗಸೂಚಿ ಮಾಡಲಿ, ಅದು ಅವರಿಗೂ ಹಾಗೂ…
16 ಐಎಎಸ್ ಅಧಿಕಾರಿಗಳ ವರ್ಗ ಸೆಸ್ಕ್ ಎಂಡಿಯಾಗಿ ಜಯವಿಭವಸ್ವಾಮಿ
April 1, 2021ಬೆಂಗಳೂರು, ಮಾ.31- ರಾಜ್ಯದ ಒಟ್ಟು 16 ಐಎಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದ್ದು, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ(ಸೆಸ್ಕ್) ವ್ಯವಸ್ಥಾಪಕ ನಿರ್ದೇಶಕರನ್ನಾಗಿ ಜಯ ವಿಭವಸ್ವಾಮಿ ಅವರನ್ನು ನಿಯೋಜಿಸಲಾಗಿದೆ. ಇವರಿಗೆ ಶ್ರೀ ಮಲೇಮಹದೇಶ್ವರ ಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಹೆಚ್ಚುವರಿ ಹೊಣೆ ವಹಿಸ ಲಾಗಿದೆ. ತುಮಕೂರು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಯಾಗಿ ಕೆ.ವಿದ್ಯಾಕುಮಾರಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ. ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿ ವಂದಿತಾ…
ಉಪ ಚುನಾವಣೆ; ಬೆಳಗಾವಿಯಲ್ಲಿ ಮಂಗಳಾ ಅಂಗಡಿ, ಮಸ್ಕಿಯಲ್ಲಿ ಪ್ರತಾಪ್‍ಗೌಡ ಪಾಟೀಲ್ ನಾಮಪತ್ರ ಸಲ್ಲಿಕೆ
March 31, 2021ಬೆಳಗಾವಿ, ಮಾ.30- ತೀವ್ರ ಕುತೂಹಲ ಕೆರಳಿಸಿರುವ ಬೆಳಗಾವಿ ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿರುವ ಮಂಗಳಾ ಅಂಗಡಿ ನಾಮಪತ್ರ ಸಲ್ಲಿಸಿದರು. ಮಾಜಿ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ದಿಂದಾಗಿ ತೆರವಾಗಿದ್ದ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಇಂದು ಸುರೇಶ್ ಅಂಗಡಿ ಅವರ ಧರ್ಮ ಪತ್ನಿ ಮಂಗಳಾ ಅಂಗಡಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಈ ವೇಳೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ, ಸಚಿವ ಕೆ.ಎಸ್. ಈಶ್ವರಪ್ಪ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ವಿಧಾನಸಭೆ ಉಪಸಭಾಧ್ಯಕ್ಷ…
ಹೂವಿನ ಹಾರ ಹಾಕುವವರು, ಕಲ್ಲು ಹೊಡೆಯುವವರು ಇರುತ್ತಾರೆ ರಾಜಕೀಯದಲ್ಲಿ ಇವೆಲ್ಲಾ ಸಹಜ: ಡಿಕೆಶಿ
March 29, 2021ಬೆಳಗಾವಿ,ಮಾ.28- ರಾಜಕೀಯದಲ್ಲಿ ಇದೆಲ್ಲಾ ಸಹಜ. ನಮಗೆ ಹೂವಿನ ಹಾರ ಹಾಕುವವರೂ ಇರುತ್ತಾರೆ, ಕಲ್ಲು ಹೊಡೆಯುವವರೂ ಇರುತ್ತಾರೆ. ಅದೇಕೆ, ಹಿಂದೆ ಮೊಟ್ಟೆ ಎಸೆಯುತ್ತಿದ್ದರು. ಹಾಗೆಯೇ ಇನ್ನೂ ಕೆಲವು ಸಂದರ್ಭದಲ್ಲಿ ಹೂವು, ಸೇಬಿನ ಹಾರವನ್ನು ಹಾಕುತ್ತಾರೆ ಎಂದು ಇಂದು ಬೆಳಗಾವಿಯಲ್ಲಿ ತಮಗೆ ಸಿಕ್ಕ ಪ್ರತಿಭಟನೆ ಸ್ವಾಗತಕ್ಕೆ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ಪ್ರತಿಭಟನೆ ಮೂಲಕ ನನಗೆ ಸ್ವಾಗತ ಮಾಡುತ್ತಿರುವುದಕ್ಕೆ ನನಗೆ ಬಹಳ ಸಂತೋಷವಾಗುತ್ತಿದೆ. ಅವರ ಸ್ವಾಗತ ಪ್ರೀತಿ ವಿಶ್ವಾಸಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಇಂತಹ ಸ್ವಾಗತವೇ ನಮಗೆ ದೊಡ್ಡ ಶಕ್ತಿಯಾಗುತ್ತದೆ….
ಡಿಕೆಶಿ ಕಾರಿನ ಮೇಲೆ ಚಪ್ಪಲಿ ಎಸೆತ
March 29, 2021ಬೆಳಗಾವಿ, ಮಾ.28- ರಾಸಲೀಲೆ ಸಿಡಿ ಪ್ರಕ ರಣದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವ ಕುಮಾರ್ ಹೆಸರು ಪ್ರಸ್ತಾಪದ ಮಾರನೇ ದಿನವೇ ಡಿ.ಕೆ.ಶಿವಕುಮಾರ್ ಇಂದು ಬೆಳಗಾವಿಗೆ ಆಗಮಿ ಸಿದರು. ಅವರಿಗೆ ರಮೇಶ್ ಜಾರಕಿಹೊಳಿ ಬೆಂಬ ಲಿಗರ ಭಾರೀ ಪ್ರತಿಭಟನೆ ಬಿಸಿ ತಟ್ಟಿತು. ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಬಂದಿ ಳಿದ ಡಿ.ಕೆ.ಶಿವಕುಮಾರ್, ಅಲ್ಲಿಂದ ಹೋಟೆಲ್‍ಗೆ ತೆರಳುವ ಸಂದರ್ಭದಲ್ಲಿ ರಮೇಶ್ ಜಾರಕಿಹೊಳಿ ಬೆಂಬಲಿಗರು ಡಿಕೆಶಿ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿ, ಚಪ್ಪಲಿ…
ಸಭೆ, ಸಮಾರಂಭ, ಮನರಂಜನೆ, ಧಾರ್ಮಿಕ ಕಾರ್ಯಗಳಿಗೆ ಕಡಿವಾಣ ಹಾಕಿ ಜಿಲ್ಲಾಡಳಿತಕ್ಕೆ ಸಚಿವ ಡಾ.ಸುಧಾಕರ್ ಸೂಚನೆ
March 25, 2021ಬೆಂಗಳೂರು, ಮಾ.24(ಕೆಎಂಶಿ)- ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಮುಂದಿನ ಒಂದು ತಿಂಗಳು ಹೆಚ್ಚಾಗುವ ಸಾಧ್ಯತೆ ಇದ್ದು, ಜಿಲ್ಲಾಡಳಿತ ಸಭೆ-ಸಮಾರಂಭ, ಮನ ರಂಜನೆ, ಧಾರ್ಮಿಕ ಕಾರ್ಯಕ್ರಮಗಳಿಗೆ ಕಡಿವಾಣ ಹಾಕಬೇಕು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ಸೂಚಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದಿನ 1 ತಿಂಗಳು ಅತ್ಯಂತ ಸವಾಲಿನ ಪರಿಸ್ಥಿತಿ ಎದುರಾಗುವ ಸಂಭವವಿದೆ, ಪಾಸಿಟಿವ್ ಪ್ರಕರಣಗಳ ಸಂಖ್ಯೆ ಶೇ.2ರಷ್ಟು ಹೆಚ್ಚಾಗುತ್ತಿದೆ, ಮನರಂಜನೆ, ಧಾರ್ಮಿಕ ಕಾರ್ಯಕ್ರಮ ಗಳು, ರಾಜಕೀಯ ಚಟುವಟಿಕೆಗಳು, ಸಭೆ-ಸಮಾರಂಭಗಳಿಗೆ ಅವಕಾಶ ನೀಡದಂತೆ ಕ್ರಮ ಕೈಗೊಳ್ಳಬೇಕೆಂದು…