ಬೆಂಗಳೂರು,ಮಾ.24(ಕೆಎಂಶಿ)-ಕೋವಿಡ್ ಎರಡನೇ ಅಲೆ ಹರಡುವ ಆತಂಕ ಎದುರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ರಾಜ್ಯದ 6 ಕೋಟಿ ಜನರಿಗೂ ಕೊರೊನಾ ಸೋಂಕು ತಡೆ ಲಸಿಕೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ನಿನ್ನೆ ನಾನು ಕೋವಿಡ್ ಲಸಿಕೆ ತೆಗೆದುಕೊಂಡಿದ್ದೇನೆ, ಜನರು ಆತಂಕ ಪಡುವ ಅಗತ್ಯವಿಲ್ಲ ಎಂದರು. ಸರ್ಕಾರ 45 ವರ್ಷ ಮೇಲ್ಪಟ್ಟವರಿಗೆ ಮಾತ್ರ ಲಸಿಕೆ ಹಾಕುವುದಾಗಿ ಹೇಳುತ್ತಿದೆ, ಸಣ್ಣ ಮಕ್ಕಳಿಗೂ ರೋಗ ಬರುವ ಸಾಧ್ಯತೆ ಇರುವುದರಿಂದ ಪೆÇೀಲಿಯೋ ಮಾದರಿಯಲ್ಲಿ ಕೋವಿಡ್ ಲಸಿಕೆಯನ್ನು…
ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಚಿರತೆ ಸಫಾರಿ
March 25, 2021ಬೆಂಗಳೂರು, ಮಾ.24-ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ ಶೀಘ್ರವೇ ಚಿರತೆ ಸಫಾರಿ ಯನ್ನು ಆರಂಭಿಸಲಾಗುವುದು ಎಂದು ಕರ್ನಾಟಕ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ಎಲ್.ಆರ್. ಮಹದೇವಸ್ವಾಮಿ ತಿಳಿಸಿದರು. ಬುಧವಾರ ಬೆಳಗ್ಗೆ ಉದ್ಯಾನಕ್ಕೆ ಭೇಟಿ ನೀಡಿದ ಅವರು, ಚಿರತೆ ಸಫಾರಿ ಆರಂಭ ಸಂಬಂಧ ಕೈಗೊಂಡಿರುವ ಸಿದ್ಧತಾ ಕಾರ್ಯಗಳನ್ನು ಪರಿಶೀಲಿಸಿದರು. ಉದ್ಯಾನದ ಆವರಣದಲ್ಲಿ ಈಗಾಗಲೇ ಟೈಗರ್, ಲಯನ್ ಮತ್ತು ಕರಡಿ ಸಫಾರಿ ವ್ಯವಸ್ಥೆ ಇದೆ. ಪ್ರವಾಸಿಗರನ್ನು ಮತ್ತಷ್ಟು ಸೆಳೆಯುವ ಉದ್ದೇಶದಿಂದ ಈಗ ಚಿರತೆ ಸಫಾರಿ ಯನ್ನು ಸಹ ಆರಂಭಿಸಲು ವ್ಯವಸ್ಥೆ ಮಾಡಲಾಗಿದೆ. ಅದ…
ಜನರ ನಿರೀಕ್ಷೆಯಂತೆ ಪ್ರವಾಸೋದ್ಯಮ ಅಭಿವೃದ್ಧಿ
March 23, 2021ಬೆಂಗಳೂರು,ಮಾ.22-ರಾಜ್ಯದಲ್ಲಿ ಪ್ರವಾಸೋದ್ಯಮ ಕ್ಷೇತ್ರ ಅಭಿವೃದ್ಧಿಗೆ ವಿಫುಲ ಅವಕಾಶಗಳಿದ್ದು, ಹತ್ತು ಹಲವು ವಿನೂತನ ಯೋಜನೆಗಳನ್ನು ಜಾರಿಗೆ ತರುವುದಾಗಿ ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಸಿ.ಪಿ.ಯೋಗೇಶ್ವರ್ ವಿಧಾನಪರಿಷತ್ತಿನಲ್ಲಿ ಹೆಚ್.ಎಂ.ರಮೇಶಗೌಡ ಹಾಗೂ ರಘು ಆಚಾರ್ ಅವರ ಪ್ರಶ್ನೆಗೆ ಉತ್ತರಿಸಿದರು. ಪ್ರವಾಸೋದ್ಯಮ ಇಲಾಖೆಯ ಮೇಲೆ ಜನತೆ ಬಹಳ ನಿರೀಕ್ಷೆಯಿಟ್ಟು ಕೊಂಡಿದ್ದಾರೆ. ಪ್ರವಾಸಿಗರ ನಿರೀಕ್ಷೆಗೆ ತಕ್ಕಂತೆ ಅವರ ಆಶೋತ್ತರ ಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸಾಗುತ್ತಿದ್ದೇನೆ. ಮುಖ್ಯಮಂತ್ರಿಗಳು ಆಯವ್ಯಯದಲ್ಲಿ ಹೆಚ್ಚು ಹಣವನ್ನು ಪ್ರವಾಸೋದ್ಯಮ ಇಲಾಖೆಗೆ ನೀಡಿದ್ದಾರೆ. ಈ ನಿಟ್ಟಿನಲ್ಲಿ ಹೆಚ್ಚು ಒತ್ತು ನೀಡಿ, ವಿನೂತನ…
ಕಚ್ಚಾ ವಸ್ತುಗಳ ಕೊರತೆ; ಔಷಧಿಗಳ ಬೆಲೆ ಏರಿಕೆ ಸಾಧ್ಯತೆ
March 22, 2021ಬೆಂಗಳೂರು, ಮಾ.21- ಕಚ್ಚಾ ವಸ್ತುಗಳ ಕೊರತೆ ಹಾಗೂ ಇನ್ನಿತರೆ ಕಾರಣಗಳಿಂ ದಾಗಿ ಅಗತ್ಯ ಔಷಧಿಗಳ ಬೆಲೆ ಏಪ್ರಿಲ್‍ನಿಂದ ಶೇ.20ರಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸಗಟು ದರ ಸೂಚ್ಯಂಕ (ಡಬ್ಲ್ಯುಪಿಐ)ವನ್ನು ಆಧರಿಸಿ ಔಷಧಿ ಬೆಲೆ ಪರಿಷ್ಕರಣೆಗೆ ಸರ್ಕಾರ ಅವಕಾಶ ನೀಡುತ್ತಿರುವ ಹಿನ್ನೆಲೆಯಲ್ಲಿ ಔಷಧ ಉತ್ಪಾದಕರು ದರ ಹೆಚ್ಚಿಸುವ ಸಾಧ್ಯತೆ ದಟ್ಟವಾಗಿದೆ. ಪರಿಣಾಮ ನೋವು ನಿವಾರಕ, ಸೋಂಕು ನಿವಾರಕ, ಹೃದಯ ಕಾಯಿಲೆ, ಆ್ಯಂಟಿ ಬಯಾಟಿಕ್ಸ್ ಇನ್ನಿತರ ಅಗತ್ಯ ಔಷಧಿಗಳ ದರ ಏಪ್ರಿಲ್‍ನಿಂದ ಶೇ.20 ಏರಿಕೆಯಾಗಬಹುದು ಎಂದು ತಿಳಿದುಬಂದಿದೆ….
ಮಾಜಿ ಸಚಿವೆ ಬಿ.ಟಿ.ಲಲಿತಾನಾಯಕ್‍ಗೆ ಕೊಲೆ ಬೆದರಿಕೆ ಪತ್ರ
March 22, 2021ಬೆಂಗಳೂರು, ಮಾ.21- ಬ್ರಾಹ್ಮಣ ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿ ಸುದ್ದಿಯಾಗಿದ್ದ ಮಾಜಿ ಸಚಿವೆ ಬಿ.ಟಿ. ಲಲಿತಾ ನಾಯಕ್ ಅವರಿಗೆ ಕೊಲೆ ಬೆದರಿಕೆ ಪತ್ರ ಬಂದಿದೆ. ಈ ಆಘಾತಕಾರಿ ವಿಚಾರವನ್ನು ಸ್ವತಃ ಬಿ.ಟಿ. ಲಲಿತಾನಾಯಕ್ ಅವರೇ ಬಹಿರಂಗಪಡಿಸಿದ್ದಾರೆ. ಹಿಳಾ ಬಂಡಾಯ ಸಾಹಿತಿಯಾಗಿ, ಪತ್ರಕರ್ತೆ ಹಾಗೂ ರಾಜಕಾರಣಿಯಾಗಿ ಗುರುತಿಸಿಕೊಂಡಿರುವ ಡಾ. ಬಿ.ಟಿ. ಲಲಿತಾ ನಾಯಕ್ ದಲಿತ ಮಹಿಳೆಯರ ಪರ ಧ್ವನಿಯೆತ್ತುವ ಮೂಲಕ ಪರಿಚಿತರು. ಮಾಜಿ ಸಚಿವ ಎಚ್.ಎಂ. ರೇವಣ್ಣ ಅವರಿಗೆ ನಲವತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಭಿನಂದನಾ ಸಮಾರಂಭ…
ಇನ್ನೂ 19 ಸಿಡಿ ಇದೆಯಂತೆ, ನಾಲಗೆ ಹಿಡಿತದಲ್ಲಿರಲಿ ಕಟೀಲ್‍ಗೆ ಸಿದ್ದರಾಮಯ್ಯ ತಿರುಗೇಟು
March 22, 2021ಬೆಂಗಳೂರು,ಮಾ.21-ಕಾಂಗ್ರೆಸ್ ಪಕ್ಷಕ್ಕೆ ರಾಜೀ ನಾಮೆ ನೀಡಲು ಸಿದ್ದ ರಾಮಯ್ಯ 90 ಜೊತೆ ಬಟ್ಟೆ ಖರೀದಿಸಿದ್ದಾರೆ ಎಂದು ಲೇವಡಿ ಮಾಡಿದ್ದ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಅವರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ಧಾರೆ. ಕಟೀಲ್ ಅವರ ಹೇಳಿಕೆಯ ಸುದ್ದಿಯನ್ನು ಉಲ್ಲೇ ಖಿಸಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಇನ್ನೂ 19 ಸಿಡಿ ಇದೆಯಂತೆ. ಎಲ್ಲವೂ ಹಿಡಿತದಲ್ಲಿರಲಿ, ನಾಲಗೆ ಕೂಡ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆ ಯುತ್ತಿರುವ ಬಿಜೆಪಿ ನಾಯಕರಿಗೆ ದಾನ ಮಾಡೋಣ…
ಆರೋಗ್ಯ ಇಲಾಖೆ ಸಿಬ್ಬಂದಿ ಮುಂದಿನ 50 ದಿನ ರಜೆ ಹಾಕದಂತೆ ಡಾ.ಸುಧಾಕರ್ ಮನವಿ
March 19, 2021ಬೆಂಗಳೂರು,ಮಾ.18(ಕೆಎಂಶಿ)-ರಾಜ್ಯದಲ್ಲಿ 2ನೇ ಕೋವಿಡ್ ಅಲೆ ಎರಗುವ ಸಾಧ್ಯತೆ ಇರುವುದರಿಂದ 50 ದಿನಗಳ ಕಾಲ ಆರೋಗ್ಯ ಇಲಾಖೆಯ ಯಾವುದೇ ಸಿಬ್ಬಂದಿ ರಜೆ ಹಾಕದೆ ಕರ್ತವ್ಯ ನಿರ್ವಹಿಸಬೇಕೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾನೂ ಸಹ ಮುಂದಿನ 50 ದಿನಗಳ ಕಾಲ ರಜೆ ಹಾಕದೆ ಕೆಲಸ ಮಾಡುತ್ತೇನೆ. ಅದೇ ರೀತಿ ಸಿಬ್ಬಂದಿ ಕೂಡ ರಜೆ ಹಾಕದೆ ಕೆಲಸ ಮಾಡಬೇಕು. ಕೊರೊನಾ ತಡೆಗಟ್ಟಲು ಎಲ್ಲರೂ ಕೈ ಜೋಡಿಸಬೇಕು ಎಂದು ಮನವಿ ಮಾಡಿದರು. ಕೆಲವು…
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಮತ್ತೆ ಸಂಕಷ್ಟ
March 18, 2021ಬೆಂಗಳೂರು: ಕೆಐಎಡಿಬಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಕೇಸ್‍ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‍ಶೀಟ್ ಆಧರಿಸಿ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ. ಹೂವಿ ನಾಯಕಹಳ್ಳಿಯಲ್ಲಿನ ಕೆಐಎ ಡಿಬಿಯ 20 ಎಕರೆ ಜಮೀ ನನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿ ಕೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ…
ಮೈಸೂರಿನಲ್ಲಿ ವಿಶ್ವದರ್ಜೆ ಕ್ರಿಕೆಟ್ ಮೈದಾನ ನಿರ್ಮಾಣ
March 18, 2021ಬೆಂಗಳೂರು,ಮಾ.16- ಮೈಸೂರಿನಲ್ಲಿ ಅಂತಾರಾಷ್ಟ್ರೀಯ ಮಟ್ಟದ ಕ್ರಿಕೆಟ್ ಕ್ರೀಡಾಂಗಣವನ್ನು ನಿರ್ಮಿಸುವ ಸಂಬಂಧ ಶೀಘ್ರದಲ್ಲೇ ಅಧಿಕಾರಿಗಳ ಸಭೆ ಕರೆದು ಚರ್ಚಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ನಾರಾಯಣಗೌಡ ಅವರು ವಿಧಾನಸಭೆಯಲ್ಲಿ ತಿಳಿಸಿದರು. ಪ್ರಶ್ನೋತ್ತರ ಅವಧಿಯಲ್ಲಿ ಶಾಸಕ ತನ್ವಿರ್ ಸೇಠ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಬೆಂಗಳೂರು ಹೊರತುಪಡಿಸಿದರೆ ಮೈಸೂರು 2ನೇ ಅತೀ ದೊಡ್ಡ ನಗರವಾಗಿದೆ. ಇಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕ್ರೀಡಾಪಟು ಗಳನ್ನು ಉತ್ತೇಜಿಸಲು ಅನುವಾಗುವಂತೆ ಕ್ರೀಡಾಂಗಣವನ್ನು ನಿರ್ಮಾಣ ಮಾಡಬೇಕೆಂಬುದು ಬಹುದಿನಗಳ ಬೇಡಿಕೆಯಾಗಿದೆ. ಶೀಘ್ರದಲ್ಲೇ ಅಧಿಕಾರಿಗಳು ಮತ್ತು ಜನಪ್ರತಿನಿಗಳ…
ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು
March 17, 2021ಬೆಂಗಳೂರು,ಮಾ.16-ಸಿಡಿ ಪ್ರಕರಣದಲ್ಲಿ ಈಗಾಗಲೇ ಸಂಕಷ್ಟಕ್ಕೆ ಸಿಲುಕಿ ಸಚಿವ ಸ್ಥಾನ ಕಳೆದುಕೊಂಡಿರುವ ರಮೇಶ್ ಜಾರಕಿಹೊಳಿ ವಿರುದ್ಧ ಮತ್ತೊಂದು ದೂರು ದಾಖಲಾಗಿದೆ. ಸಿಡಿಯಲ್ಲಿ ಸಂತ್ರಸ್ತ ಯುವತಿಯೊಂದಿಗೆ ಸಂಭಾಷಣೆ ನಡೆಸಿರುವ ರಮೇಶ್ ಜಾರಕಿಹೊಳಿ ಕನ್ನಡಿಗರ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ್ದಾರೆ. ಈ ಮೂಲಕ ಕನ್ನಡಿಗರಿಗೆ ಅಪಮಾನ ಮಾಡಿದ್ದಾರೆ ಎಂದು ಕನ್ನಡಿಗರ ರಕ್ಷಣಾ ವೇದಿಕೆ ಕಬ್ಬನ್ ಪಾರ್ಕ್ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಿಸಿದೆ. ಕರ್ನಾಟಕದಲ್ಲಿ ಹುಟ್ಟಿ, ಬೆಳೆದು ಕನ್ನಡಿಗರ ಬಗ್ಗೆ ರೀತಿ ಹೇಳುವುದು ಅವರಿಗೆ ಶೋಭೆಯಲ್ಲ. ಕೂಡಲೇ ಅವರನ್ನ ರಾಜ್ಯ ಸರ್ಕಾರ ಶಾಸಕ…