ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು ನಾಮಕರಣ
ಕೊಡಗು

ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ, ಇಂದಿರಾ ಕ್ಯಾಂಟೀನ್‍ಗೆ ಕಾವೇರಿ ಹೆಸರು ನಾಮಕರಣ

August 14, 2021

ಮಡಿಕೇರಿ, ಆ.13- ನಾಗರಹೊಳೆ ರಾಷ್ಟ್ರೀಯ ಅಭಯಾ ರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವುದು ಸೂಕ್ತ. ರಾಜೀವ್ ಗಾಂಧಿ ಹೆಸರು ತೆಗೆದು ಕಾರ್ಯಪ್ಪ ಅವರ ಹೆಸರು ನಾಮ ಕರಣ ಮಾಡಲಿ ಎಂದು ಮಡಿಕೇರಿ ಶಾಸಕ ಅಪ್ಪಚ್ಚು ರಂಜನ್ ಸರಕಾರವನ್ನು ಆಗ್ರಹಿಸಿದ್ದಾರೆ.
ಮಡಿಕೇರಿಯಲ್ಲಿ ಸುದ್ದಿಗಾರರೊಂ ದಿಗೆ ಮಾತನಾಡಿದ ಅಪ್ಪಚ್ಚು ರಂಜನ್, ರಾಜೀವ್ ಗಾಂಧಿ, ಇಂದಿರಾಗಾಂಧಿ ಮತ್ತು ನೆಹರು ಹೆಸರಲ್ಲಿ ಹಲವು ಸಂಸ್ಥೆಗಳಿವೆ. ಆದರೆ ದೇಶದ ಸೇನೆಯ ಮೊದಲ ಫೀಲ್ಡ್ ಮಾರ್ಷಲ್ ಆಗಿದ್ದ ಕೊಡಗಿನ ಕಾರ್ಯಪ್ಪ ಅವರು ಮೂರು ಸೇನಾಪಡೆ ಗಳ ಮುಖ್ಯಸ್ಥರಾಗಿದ್ದವರು. ಅವರಿಗೆ ಗೌರವ ಕೊಡಲು ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಕಾರ್ಯಪ್ಪ ಅವರ ಹೆಸರಿಡುವುದು ಸೂಕ್ತ. ಈ ಬಗ್ಗೆ ಸರ್ಕಾರಕ್ಕೂ ನಾನು ಆಗ್ರಹಿಸುತ್ತೇನೆ. ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವರಾದ ಅಮಿತ್ ಶಾ ಅವರಿಗೂ ಈ ಕುರಿತು ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಕಾವೇರಿ ಹೆಸರಿಡಿ: ಕೊಡಗಿನಲ್ಲಿ ಹುಟ್ಟಿ ನಾಡಿನುದ್ದಕ್ಕೂ ಹರಿಯುವ ಕಾವೇರಿಯ ಹೆಸರನ್ನು ಇಂದಿರಾ ಕ್ಯಾಂಟೀನ್‍ಗೆ ಇಡಬೇಕು ಎಂದು ರಂಜನ್ ಒತ್ತಾಯಿಸಿದರು. ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಅವರು ಇಂದಿರಾ ಕ್ಯಾಂಟೀನ್‍ಗೆ ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿ ರುವುದನ್ನು ಅಲ್ಲಗಳೆದಿರುವ ಶಾಸಕ ಅಪ್ಪಚ್ಚುರಂಜನ್, ಸಿ.ಟಿ.ರವಿ ಅವರು ಅನ್ನಪೂರ್ಣೇಶ್ವರಿ ಹೆಸರು ಸೂಚಿಸಿರ ಬಹುದು. ಆದರೆ ಕಾವೇರಿ ಹೆಸರಿಡುವುದು ಒಳ್ಳೆಯದು ಎಂದು ಹೊಸ ಬೇಡಿಕೆ ಮುಂದಿಟ್ಟರು.

ಕಾವೇರಿ ನದಿಯಿಂದ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಕರ್ನಾಟಕ, ತಮಿಳುನಾಡು ಮತ್ತು ಪಾಂಡಿಚೇರಿ ಸೇರಿ ಮೂರು ರಾಜ್ಯಗಳಿಗೆ ನೀರು ಸಿಗುತ್ತದೆ. ಕರ್ನಾಟಕ, ತಮಿಳು ನಾಡಿಗೆ ಕಾವೇರಿ ಮಾತೆ ಕೊಡುಗೆ ದೊಡ್ಡದಿದೆ. ಸಾಕಷ್ಟು ರೈತರು ಕಾವೇರಿ ನೀರು ಬಳಸಿ ಕೃಷಿ ಮಾಡುತ್ತಾರೆ. ಅದರಿಂದ ಬೆಳೆದ ಅನ್ನವನ್ನು ಇಂದಿರಾ ಕ್ಯಾಂಟಿನ್‍ಗಳಲ್ಲಿ ಊಟ ಮಾಡುತಿದ್ದೇವೆ. ಹೀಗಾಗಿ ಕಾವೇರಿ ಹೆಸರಿಡುವುದು ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇಂದಿರಾ ಹೆಸರನ್ನು ತೆಗೆದು ಕಾವೇರಿ ಕ್ಯಾಂಟೀನ್ ಹೆಸರಿಡಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದು ಇದೇ ಸಂದರ್ಭ ಹೇಳಿದರು.
ಮೇಕೆದಾಟು ಆಗಲೇಬೇಕು: ಮೇಕೆದಾಟು ನಮ್ಮ ರಾಜ್ಯದ ಸಂಪತ್ತು, ನಾವು ಅಲ್ಲಿ ಅಣೆಕಟ್ಟೆ ನಿರ್ಮಾಣ ಮಾಡಲು ತಮಿಳುನಾಡಿನವರನ್ನು ಕೇಳ ಬೇಕಾದ ಅಗತ್ಯವಿಲ್ಲ. ಹೀಗಾಗಿ ಸರ್ಕಾರ ಮೇಕೆದಾಟು ಕಾಮಗಾರಿ ಯನ್ನು ಮಾಡಲೇಬೇಕು ಎಂದು ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದರು. ಮೇಕೆದಾಟು ಯೋಜನೆ ಮಾಡುವುದ ರಿಂದ ರಾಜ್ಯದ ಸಾವಿರಾರು ರೈತರಿಗೆ ಅನುಕೂಲವಾಗ ಲಿದೆ. ಬರೋಬ್ಬರಿ 60 ಸಾವಿರ ಎಕರೆ ಪ್ರದೇಶಕ್ಕೆ ನೀರು ಣಿಸಬಹುದು. ಆದ್ದರಿಂದ ಸರ್ಕಾರ ಕೂಡಲೇ ಯೋಜನೆ ಕಾಮಗಾರಿಗೆ ಮುಂದಾಗಲಿ ಎಂದು ಆಗ್ರಹಿಸಿದರು.

ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ.ರವಿ ಅವರು ನದಿಗಳು ರಾಷ್ಟ್ರೀಯ ಸಂಪತ್ತು ಎಂದು ಹೇಳಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅಪ್ಪಚ್ಚು ರಂಜನ್, ಕಾವೇರಿ ಕೂಡ ರಾಷ್ಟ್ರೀಯ ಸಂಪತ್ತು. ಆದರೆ ಕಾವೇರಿ ನೀರನ್ನು ನಾವು ಎಷ್ಟನ್ನು ಬಳಸಿಕೊಂಡು ಎಷ್ಟನ್ನು ತಮಿಳುನಾಡಿಗೆ ಕೊಡಬೇಕೆಂದು ನಿರ್ಧಾರವಾಗಿದೆ. ಕೇಂದ್ರವೇ ಅದನ್ನು ನಿರ್ಧರಿಸಿರುವಾಗ ಮೇಕೆದಾಟು ವಿಚಾರದಲ್ಲೂ ಅದೇ ರೀತಿ ಆಗುತ್ತದೆ. ಕೇಂದ್ರ ನೀರಾವರಿ ಸಲಹಾ ಸಮಿತಿಯ ನಿರ್ದೇಶನದಂತೆ ಮೇಕೆದಾಟು ಯೋಜನೆ ಕಾಮಗಾರಿ ಆರಂಭವಾಗಲಿ ಎಂದು ಮಡಿಕೇರಿಯಲ್ಲಿ ಶಾಸಕ ಅಪ್ಪಚ್ಚು ರಂಜನ್ ಒತ್ತಾಯಿಸಿದರು.

 

Translate »