9 ಮಂದಿ ಒಳಗೊಂಡ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ
ಮೈಸೂರು

9 ಮಂದಿ ಒಳಗೊಂಡ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ

June 23, 2018

ಬೆಂಗಳೂರು: ರಾಜ್ಯ ಸರ್ಕಾರದ ವಿರೋಧದ ನಡುವೆಯೂ ಕಾವೇರಿ ನದಿ ನೀರು ಹಂಚಿಕೆಗಾಗಿ ಕೇಂದ್ರ ಸರ್ಕಾರವು 9 ಮಂದಿ ಇರುವ ಕಾವೇರಿ ನೀರು ನಿರ್ವ ಹಣಾ ಮಂಡಳಿಯನ್ನು ರಚಿಸಿದೆ. ಈ ಸಂಬಂಧ ಕೇಂದ್ರ ಜಲ ಸಂಪನ್ಮೂಲ ಸಚಿವಾಲಯವು ಇಂದು ಅಧಿಕೃತ ಆದೇಶ ಹೊರಡಿಸಿದ್ದು, ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ನವೀನ್ ಕುಮಾರ್ ಅವರನ್ನು ಅಧ್ಯಕ್ಷರನ್ನಾಗಿ ನೇಮಿಸಿದೆ.

ಈ ಸಮಿತಿಯ ಸದಸ್ಯ ಕಾರ್ಯದರ್ಶಿಯಾಗಿ ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಮತ್ತೋರ್ವ ಮುಖ್ಯ ಇಂಜಿನಿಯರ್ ಕೆ.ಎಸ್.ಗೋಯಲ್ ಅವರನ್ನು ಸದಸ್ಯ ಕಾರ್ಯ ದರ್ಶಿಯಾಗಿ ನೇಮಕ ಮಾಡಲಾಗಿದೆ. ಅಧ್ಯಕ್ಷರು ಹಾಗೂ ಸದಸ್ಯ ಕಾರ್ಯದರ್ಶಿ ಅಲ್ಲದೇ 7 ಸದಸ್ಯರನ್ನು ಕಾವೇರಿ ನೀರು ನಿರ್ವಹಣಾ ಮಂಡಳಿಗೆ ನೇಮಕ ಮಾಡಲಾಗಿದ್ದು, ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಿಗೆ ಪ್ರಾತಿನಿಧ್ಯ ನೀಡಲಾಗಿದೆ. ಕರ್ನಾಟಕವು ತನ್ನ ಪ್ರತಿನಿಧಿಯನ್ನು ಸೂಚಿಸದೇ ಇರುವುದರಿಂದ ರಾಜ್ಯದ ಪ್ರತಿನಿಧಿಯಾಗಿ ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಎಂದು ಆದೇಶದಲ್ಲಿ ಉಲ್ಲೇಖಿಸ ಲಾಗಿದೆ. ಇನ್ನುಳಿದಂತೆ ತಮಿಳುನಾಡಿನ ಜಲ ಸಂಪನ್ಮೂಲ ಇಲಾಖೆ ಮುಖ್ಯ ಇಂಜಿನಿಯರ್ ಆರ್.ಸೆಂಥಿಲ್ ಕುಮಾರ್, ಪುದುಚೇರಿಯ ಲೋಕೋಪ ಯೋಗಿ ಇಲಾಖೆ ಮುಖ್ಯ ಇಂಜಿನಿಯರ್ ವಿ.ಷಣ್ಮುಗ ಸುಂದರಂ, ಕೇರಳ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಕೆ.ಎ.ಜೋಷಾಯ್, ವಿಜ್ಞಾನಿ ಡಾ. ಎಂ.ಮಹಾಪಾತ್ರ, ಕೇಂದ್ರ ಜಲ ಸಂಪನ್ಮೂಲ ಇಲಾಖೆಯ ಮುಖ್ಯ ಇಂಜಿನಿಯರ್ ಎನ್.ಎಂ.ಕೃಷ್ಣಮುನ್ನಿ ಅವರನ್ನು ಸದಸ್ಯರನ್ನಾಗಿ ನೇಮಕ ಮಾಡಲಾಗಿದ್ದು, ಕಾವೇರಿ ನೀರು ನಿರ್ವಹಣಾ ಮಂಡಳಿ ಕಚೇರಿಯು ಬೆಂಗಳೂರಿನಲ್ಲಿ ಕಾರ್ಯ ನಿರ್ವಹಿಸಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Translate »