ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ
ಮೈಸೂರು

ಕಾವೇರಿ ನೀರು ಹಂಚಿಕೆ ವಿಚಾರ: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ

June 26, 2018
  • ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಕೇಶ್ ಸಿಂಗ್, ಹೆಚ್.ಎನ್. ಪ್ರಸನ್ನ ಹೆಸರು ಶಿಫಾರಸ್ಸು

ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪಿಗೆ ತಲೆ ಬಾಗಿದ ರಾಜ್ಯ ಸರ್ಕಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ರಾಜ್ಯದ ಇಬ್ಬರು ಪ್ರತಿನಿಧಿ ಗಳ ಹೆಸರನ್ನು ಶಿಫಾರಸ್ಸು ಮಾಡಿದೆ. ರಾಜ್ಯ ಸರ್ಕಾರವನ್ನು ಕಡೆಗಾಣಿಸಿ, ನಿರ್ವ ಹಣಾ ಪ್ರಾಧಿಕಾರ ಜುಲೈ 2 ರಂದು ಮೊದಲ ಸಭೆ ನಿಗದಿ ಮಾಡಿರುವ ಹಿನ್ನೆಲೆಯಲ್ಲಿ ತರಾತುರಿಯಾಗಿ ಈ ನೇಮಕಾತಿಯಾಗಿದೆ.

ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಕೇಶ್‍ಸಿಂಗ್ ಹಾಗೂ ಕಾವೇರಿ ಜಲ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹೆಚ್.ಎನ್. ಪ್ರಸನ್ನ ಅವರನ್ನು ಸದಸ್ಯರನ್ನಾಗಿ ನಿಯೋಜಿಸಲು ಸರ್ಕಾರ ತೀರ್ಮಾನಿಸಿ, ಕಳೆದ 23 ರಂದೇ ಪ್ರಸ್ತಾವನೆ ಯನ್ನು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗಿದೆ. ಶಿಫಾರಸ್ಸಿನ ಜೊತೆಗೆ ಪ್ರಾಧಿಕಾರ ರಚನೆ ಯಿಂದ ರಾಜ್ಯಕ್ಕಾಗಿರುವ ಅನ್ಯಾಯ ಮತ್ತು ತಮ್ಮನ್ನು ಕಡೆಗಾಣಿಸಿ, ಪ್ರಾಧಿಕಾರ ರಚಿಸಿರು ವುದಕ್ಕೆ ತೀವ್ರ ಆಕ್ಷೇಪ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಹಾಗೂ ಜಲಸಂಪ ನ್ಮೂಲ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆಯಲಾಗಿದೆ. ರಾಜ್ಯವನ್ನು ಕಡೆ ಗಾಣಿಸಿ, ಕೇಂದ್ರ ಸರ್ಕಾರ ಪ್ರಾಧಿಕಾರ ರಚಿಸಿ, ಮೊದಲ ಸಭೆ ಕರೆದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಇಂದು ವಿಧಾನಸೌಧದಲ್ಲಿ ಅಡ್ವೋಕೆಟ್ ಜನರಲ್, ಕಾನೂನು ಹಾಗೂ ನೀರಾವರಿ ತಜ್ಞರ ಜೊತೆ ಸಮಾಲೋಚನೆ ನಡೆಸಿದರು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಕಾನೂನಿಗೆ ತಲೆ ಬಾಗುತ್ತೇವೆ. ಆದರೆ ಕೇಂದ್ರ ಸರ್ಕಾರ ರಾಜ್ಯವನ್ನು ಕಡೆಗಾಣಿಸಿ, ಏಕಾಏಕಿ ಪ್ರಾಧಿ ಕಾರ ರಚನೆ ಮಾಡಿದೆ ಎಂದರು. ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‍ನ ನಿರ್ದೇಶನದಂತೆ ರಾಜ್ಯದ ಅಭಿಪ್ರಾಯ ವನ್ನು ಆಲಿಸದೆ ರಚನೆ ಮಾಡಿರುವುದನ್ನು ರಾಜ್ಯ ಸರ್ಕಾರ ತೀವ್ರ ವಿರೋಧ ವ್ಯಕ್ತಪಡಿ ಸಿದೆ. ಪ್ರಾಧಿಕಾರ ರಚನೆಗೂ ಮುನ್ನ ಸಂಸತ್ತಿನ ಉಭಯ ಸದನಗಳಲ್ಲೂ ಈ ಸಂಬಂಧ ವಿಸ್ತøತ ಚರ್ಚೆಯಾಗಬೇಕಿತ್ತು. ಆದರೆ ಕೇಂದ್ರ ಏಕಪಕ್ಷೀಯ ನಿರ್ಧಾರ ಕೈಗೊಂಡಿದೆ.

ಕಳೆದ 18 ರಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಜಲಸಂಪನ್ಮೂಲ ಸಚಿವ ನಿತಿನ್ ಗಡ್ಕರಿ ಅವರಿಗೆ

ಪತ್ರ ಬರೆದು, ತಾರತಮ್ಯ ನಿವಾರಣೆ ಮಾಡಬೇಕೆಂದು ಮನವಿ ಮಾಡಲಾಗಿತ್ತು. ರಾಜ್ಯದ ಮನವಿಯನ್ನು ಕೇಂದ್ರ ಪುರಸ್ಕರಿಸಿಲ್ಲ ಎಂದು ತಿಳಿಸಿದರು.

ಈ ಸಂಬಂಧ ಸರ್ವ ಪಕ್ಷಗಳ ಮುಖಂಡರು ಹಾಗೂ ರಾಜ್ಯದ ಸಂಸದರೊಟ್ಟಿಗೆ ಸಮಾಲೋಚನೆ ನಡೆಸಿ, ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು. ಕಾವೇರಿ ನ್ಯಾಯಮಂಡಳಿ ನೀಡಿದ ತೀರ್ಪನ್ನು ಪ್ರಶ್ನಿಸಿ ಅನ್ಯಾಯಕ್ಕೊಳಗಾದ ಕರ್ನಾಟಕ ಮತ್ತು ಕೇರಳ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದವು. ಈ ಸಂಬಂಧ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿಯನ್ನೊಳಗೊಂಡ ತ್ರಿಸದಸ್ಯ ಪೀಠ ರಾಜ್ಯಕ್ಕೆ ಹೆಚ್ಚುವರಿಯಾಗಿ 20 ಟಿಎಂಸಿ ನೀರನ್ನು ನೀಡಿದ್ದಲ್ಲದೆ, ಅದೇ ಪ್ರಮಾಣದಲ್ಲಿ ತಮಿಳುನಾಡಿಗೂ ರಾಜ್ಯದಿಂದ ಹರಿಯುವ ನೀರಿನ ಪ್ರಮಾಣ ಕಡಿಮೆ ಮಾಡಿತ್ತು.

ಕಾವೇರಿ ಜಲವಿವಾದಕ್ಕೆ ಸಂಬಂಧಿಸಿದಂತೆ ಪ್ರತಿ ವರ್ಷವೂ ನ್ಯಾಯಾಲಯದ ಮೆಟ್ಟಿಲು ಹತ್ತುವುದು ಬೇಡ ಎಂದು ಇಂತಿಷ್ಟು ದಿನದಲ್ಲೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರಚನೆ ಮಾಡಬೇಕು. ಪ್ರಾಧಿಕಾರ ರಚನೆಗೊಂಡ ನಂತರ ಜಲಾನಯನ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಜಲಾಶಯಗಳು ಮತ್ತು ಬೆಳೆ ಪದ್ಧತಿ ಇದರ ವ್ಯಾಪ್ತಿಗೆ ಬರುತ್ತದೆ. ನೀರಿನ ಲಭ್ಯತೆಯನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಸಂಬಂಧಪಟ್ಟ ರಾಜ್ಯಗಳಿಗೆ ನೀರು ಹರಿಸಲಿದೆ ಎಂದು ರಾಜ್ಯ ಸರ್ಕಾರದ ವಿರೋಧದ ನಡುವೆಯು ಈ ಮಹತ್ವದ ತೀರ್ಪು ನೀಡಿತ್ತು. ರಾಜ್ಯ ವಿಧಾನಸಭಾ ಚುನಾವಣೆ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಪ್ರಾಧಿಕಾರ ರಚನೆಗೆ ವಿಳಂಬ ಧೋರಣೆ ಅನುಸರಿಸಿತ್ತು. ಮತ್ತೆ ಸುಪ್ರೀಂಕೋರ್ಟ್ ಕೇಂದ್ರಕ್ಕೆ ಗಡುವು ನೀಡಿ, ರಚನೆಗೆ ಆದೇಶ ಮಾಡಿತ್ತು. ಕರ್ನಾಟಕದಲ್ಲಿ ಆಡಳಿತ ವ್ಯವಸ್ಥೆ ಬದಲಾವಣೆ ಗೊಂಡಿದ್ದರಿಂದ ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಗಮನಹರಿಸಿರಲಿಲ್ಲ. ಕೇಂದ್ರ ಸರ್ಕಾರ ಮಂಡಳಿಗೆ ತಮ್ಮ ಪ್ರತಿನಿಧಿಗಳ ಹೆಸರನ್ನು ಶಿಫಾರಸ್ಸು ಮಾಡುವಂತೆ ಸಲಹೆ ಮಾಡಿದ್ದರೂ, ಅದಕ್ಕೆ ರಾಜ್ಯ ಮಣೆ ಹಾಕಿರಲಿಲ್ಲ. ನ್ಯಾಯಾಲಯದ ಗಡುವು ಅಂತಿಮಗೊಳ್ಳುತ್ತಿದ್ದ ಹಿನ್ನೆಲೆಯಲ್ಲಿ ರಾಜ್ಯವನ್ನು ಕಡೆಗಾಣಿಸಿ ಕೇಂದ್ರ ಸರ್ಕಾರ ಪ್ರಾಧಿಕಾರ ರಚನೆ ಮಾಡಿಯೇ ಬಿಟ್ಟಿದೆ.

Translate »