ಬೆಂಗಳೂರಲ್ಲಿ ಐಟಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: 1.35 ಕೋಟಿ ರೂ. ವಶ!
ಮೈಸೂರು

ಬೆಂಗಳೂರಲ್ಲಿ ಐಟಿ ಅಧಿಕಾರಿ ಮನೆ ಮೇಲೆ ಸಿಬಿಐ ದಾಳಿ: 1.35 ಕೋಟಿ ರೂ. ವಶ!

April 5, 2019

ಬೆಂಗಳೂರು: ರಾಜಕಾರಣಿಗಳು, ನಟರು ಹಾಗೂ ಗುತ್ತಿಗೆದಾರರಿಗೆ ಶಾಕ್ ನೀಡುತ್ತಿದ್ದ ಆದಾಯ ತೆರಿಗೆ ಇಲಾಖೆ ಅಧಿಕಾರಿಗೇ ಇಂದು ಸಿಬಿಐ ಅಧಿಕಾರಿ ಗಳು ಶಾಕ್ ನೀಡಿದ್ದು, ದಾಳಿ ವೇಳೆ ಬರೋಬ್ಬರಿ 1.35 ಕೋಟಿ ರೂಪಾಯಿಯನ್ನು ವಶಪಡಿಸಿಕೊಂಡಿದ್ದಾರೆ.
ಲಂಚ ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಬಲೆಗೆ ಬಿದ್ದಿದ್ದ ಐಟಿ ಅಧಿಕಾರಿ ನಾಗೇಶ್ ಅವರ ಮನೆ ಮೇಲೆ ಇಂದು ಸಿಬಿಐ ಅಧಿಕಾರಿಗಳು ದಾಳಿ ಮಾಡಿದ್ದರು. ಈ ವೇಳೆ 1.35 ಕೋಟಿ ನಗದು, ಮಹತ್ವದ ದಾಖಲೆಗಳು ಹಾಗೂ ಪೆನ್ ಡ್ರೈವ್ ಅನ್ನು ಅಧಿಕಾರಿಗಳು ವಶಪಡಿಸಿಕೊಂಡಿ ದ್ದಾರೆ. ಕಳೆದ ಮಾರ್ಚ್‍ನಲ್ಲಿ ಗುತ್ತಿಗೆದಾರ ಶ್ರೀನಿವಾಸ್ ಅವರ ಮನೆ ಮೇಲೆ ಐಟಿ ದಾಳಿ ನಡೆದಿತ್ತು. ಐಟಿ ಅಧಿ ಕಾರಿ ನಾಗೇಶ್ ಅವರು ಕೇಸ್ ಖುಲಾಸೆಗೊಳಿಸಲು 40 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ನಿನ್ನೆ 14 ಲಕ್ಷ ರೂಪಾಯಿ ನಗದು ಸ್ವೀಕರಿಸುತ್ತಿದ್ದ ವೇಳೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ, ಬಂಧಿಸಿದ್ದರು. ಐಟಿ ಅಧಿಕಾರಿ ಹಣಕ್ಕೆ ಬೇಡಿಕೆ ಇಟ್ಟ ಕುರಿತು ಗುತ್ತಿಗೆದಾರ ಶ್ರೀನಿವಾಸ್ ಸ್ನೇಹಿತನ ಸಲಹೆ ಮೇರೆಗೆ ಸಿಬಿಐ ಅಧಿಕಾರಿ ಗಳಿಗೆ ಮಾಹಿತಿ ನೀಡಿದ್ದರು. ಈ ಮಾಹಿತಿ ಅನ್ವಯ ಸ್ಥಳಕ್ಕೆ ಬಂದ ಸಿಬಿಐ ಅಧಿಕಾರಿಗಳು ಹಣ ಪಡೆಯುವ ವೇಳೆಯೇ ನಾಗೇಶ್‍ರನ್ನು ವಶಕ್ಕೆ ಪಡೆದಿದ್ದರು.

Translate »