ರಾಜ್ಯರಾಜ್ಯದಲ್ಲಿ-7ನೇ-ತರಗತಿವರೆಗದಲ್ಲಿ 7ನೇ ತರಗತಿವರೆಗೆ ಸಿಬಿಎಸ್‌ಸಿ ಜಾರಿಗೆ ಚಿಂತನೆ

ಹಾಸನ: ರಾಜ್ಯದ ಪ್ರತಿ ತಾಲೂಕಿನಲ್ಲೂ 1ರಿಂದ 7ನೇ ತರಗತಿವರೆಗೆ ಕನಿಷ್ಠ ಒಂದು ಶಾಲೆಯಲ್ಲಿ ಸಿಬಿಎಸ್‌ಸಿ ಪಠ್ಯಕ್ರಮ ಜಾರಿಗೊಳಿಸಲು ಚಿಂತಿಸಲಾಗಿದ್ದು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಚರ್ಚಿಸಿ ಅಗತ್ಯ ನೆರವು ನೀಡಲಾಗುವುದು ಎಂದು ಲೋಕೋಪಯೋಗಿ, ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಡಿ.ರೇವಣ್ಣ ಮಾಹಿತಿ ನೀಡಿದರು.

ರವೀಂದ್ರ ನಗರದಲ್ಲಿ ಈಡಿಗರ ಸಂಘದ ನೂತನ ವಿದ್ಯಾರ್ಥಿ ನಿಲಯಕ್ಕೆ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡಿದರು.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿಯಾಗಿದ್ದಾಗ ಸಚಿವ ಜಾಲಪ್ಪ ಸೇರಿ ಈ ಸಮಾಜದ ವಿದ್ಯಾರ್ಥಿನಿಲಯಕ್ಕೆ ಬೆಂಗಳೂರಿನ ಬಳಿ 14 ಎಕರೆ ಜಾಗ ನೀಡಿದ್ದರು. ಎಲ್ಲಾ ಸಮಾಜಕ್ಕೆ ಸಮಾನತೆ ನೀಡುವ ನಿಟ್ಟಿನಲ್ಲಿ ಕೆಲಸ ಮಾಡಿದ್ದಾರೆ. ಸಮಾಜದಲ್ಲಿ ಎಲ್ಲರೂ ಸಮಾನತೆಯಿಂದ ಬಾಳಬೇಕು. ಅದಕ್ಕಾಗಿ ಈಗಾಗಲೇ 20 ಸಮುದಾಯಗಳ ಅಭಿವೃದ್ಧಿಗೆ ಯೋಜನೆ ಸಿದ್ಧಗೊಳ್ಳುತ್ತಿದೆ ಎಂದು ತಿಳಿಸಿದರು. ಸಮಾಜದ ವಿದ್ಯಾರ್ಥಿ ನಿಲಯ ಮತ್ತು ಸಮುದಾಯ ಭವನ ನಿರ್ಮಾಣಕ್ಕೆ ಸಹಾಯಧನ ನೀಡಲಾಗುತ್ತದೆ. ಇದರ ಜೊತೆಗೆ ಈ ಸಮಾಜದಲ್ಲಿನ ಮಠ ಮಾನ್ಯಗಳು ಸಹ ಸಮಾಜದಲ್ಲಿನ ಹಿತ ಕಾಪಾ ಡುವ ನಿಟ್ಟಿನಲ್ಲಿ ಕೆಲಸವನ್ನು ಮಾಡಬೇಕು ಎಂದು ಇದೇ ವೇಳೆ ಮನವಿ ಮಾಡಿದರು.

ಕಳೆದ 10 ವರ್ಷಗಳಲ್ಲಿ ರಾಜ್ಯದಲ್ಲಿ 108 ಪ್ರಥಮ ದರ್ಜೆ ಕಾಲೇಜುಗಳಿಗೆ ಸ್ವಂತ ಕಟ್ಟಡವಿರಲಿಲ್ಲ. ಜೆಡಿಎಸ್ ಸರ್ಕಾರ ಬಂದ ಮೇಲೆ 108 ಕಾಲೇಜು ಕಟ್ಟಡ ನಿರ್ಮಾಣಕ್ಕೆ 600 ಕೋಟಿ ರೂ. ಅನುದಾನ ನೀಡಲಾಗಿದೆ. ಜಿಲ್ಲೆಯ 8 ತಾಲೂಕುಗಳಲ್ಲಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ನಿರ್ಮಾಣಕ್ಕೆ 40 ಕೋಟಿ ರೂ. ನೀಡಲಾಗಿದೆ. ಅಲ್ಲದೆ ರಾಜ್ಯದಲ್ಲಿ ಪ್ರೌಢಶಾಲೆ ಹಾಗೂ ಪಿಯು ಕಾಲೇಜು ಕಟ್ಟಡಕ್ಕೆ 450 ಕೋಟಿ ರೂ. ಸೇರಿದಂತೆ ಒಟ್ಟು 1,050 ಕೋಟಿ ರೂ. ಗಳನ್ನು ಶೈಕ್ಷಣಿಕ ಅಭಿವೃದ್ಧಿಗೆ ಮೀಸಲಿ ಡಲಾಗಿದೆ ಎಂದು ಹೇಳಿದರು.

ಇದೇ ತಿಂಗಳು 23ಕ್ಕೆ ಜಿಲ್ಲೆಗೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಇದಕ್ಕೂ ಮೊದಲು ಸೆ.20ಕ್ಕೆ 2 ಏತ ನೀರಾವರಿಗಳ ಕಾಮಗಾರಿಗೆ ಚಾಲನೆ ನೀಡಲಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು. ಕಾರ್ಯಕ್ರಮದಲ್ಲಿ ಈಡಿಗರ ಸಂಘದ ರಾಜ್ಯಾಧ್ಯಕ್ಷ ಡಾ.ಎಂ.ತಿಮ್ಮೇ ಗೌಡ, ಜಿಲ್ಲಾಧ್ಯಕ್ಷ ಟಿ.ಶಿವಕುಮಾರ್, ಗೌರವಾಧ್ಯಕ್ಷ ಗೋವರ್ಧನ್ ಕುಮಾರ್, ಕೆಪಿಸಿಸಿ ಸಹ ಕಾರ್ಯದರ್ಶಿ ಸಿ.ವಿ.ರಾಜಪ್ಪ, ಸಾರ್ವಜನಿ ಶಿಕ್ಷಣ ಇಲಾಖೆ ಉಪ Àನಿರ್ದೇಶಕ ಮಂಜುನಾಥ್ ಇತರರಿದ್ದರು.