ಸಿದ್ಧಾರ್ಥ ನಿಗೂಢ ನಾಪತ್ತೆ
ಮೈಸೂರು

ಸಿದ್ಧಾರ್ಥ ನಿಗೂಢ ನಾಪತ್ತೆ

July 31, 2019

ಬೆಂಗಳೂರು, ಜು.30(ಕೆಎಂಶಿ)-ಸುಮಾರು 50 ಸಾವಿರಕ್ಕೂ ಹೆಚ್ಚು ಕನ್ನಡಿಗರಿಗೆ ಉದ್ಯೋಗ ನೀಡಿದ ಕೆಫೆ ಕಾಫಿ-ಡೇ ಮಾಲೀಕ, ಉದ್ಯಮಿ, ಮಾಜಿ ಮುಖ್ಯ ಮಂತ್ರಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ. ಸಿದ್ಧಾರ್ಥ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ.
ಉದ್ಯಮದಲ್ಲಿ ಉಂಟಾದ ಅಪಾರ ನಷ್ಟ, ಆದಾಯ ತೆರಿಗೆ ಇಲಾಖೆಯ ಮಾಜಿ ನಿರ್ದೇಶಕರ ಕಿರುಕುಳ ಹಾಗೂ ಮುಂಬೈ ಮೂಲದ ರಾಷ್ಟ್ರಖ್ಯಾತಿಯ ಉದ್ಯಮಿಯೊಬ್ಬರ ಒತ್ತಡಕ್ಕೆ ಸಿದ್ಧಾರ್ಥ್ ಒಳಗಾಗಿ ದ್ದರು ಎನ್ನಲಾಗಿದೆ. ಮಂಗಳೂರಿನ ತೋಟ ನೋಡಲು ನಿನ್ನೆ ಬೆಳಿಗ್ಗೆ ನಗರದಿಂದ ತೆರಳಿದ ಸಿದ್ಧಾರ್ಥ್, ಸೂರ್ಯ ಮುಳುಗುವ ವೇಳೆ ನೇತ್ರಾ ವತಿ ನದಿಗೆ ಹಾರಿದ್ದಾರೆ ಎಂದು ಹೇಳಲಾಗುತ್ತಿದೆ.

ಸಮರೋಪಾದಿಯಲ್ಲಿ ಅವರ ಶೋಧಕಾರ್ಯ ನಿರಂತರವಾಗಿ ನಡೆದಿದೆ. ಆದರೆ ರಾತ್ರಿ ಬಹು ಹೊತ್ತಿನವ ರೆಗೂ ಯಾವುದೇ ಮಾಹಿತಿ ಲಭ್ಯವಾ ಗಿಲ್ಲ. ನದಿ ಸೇರುವ ಅಳಿವೆಬಾಗಿಲು, ಬೆಂಗ್ರೆ ಸಮೀಪ ದಲ್ಲಿ ಬೋಟ್‍ಗಳಲ್ಲಿ ಶೋಧಕಾರ್ಯ ಮುಂದು ವರೆದಿದೆ. ಕೋಸ್ಟ್‍ಗಾರ್ಡ್, ಎನ್‍ಡಿಆರ್‍ಎಫ್, ಗೃಹ ರಕ್ಷಕ ದಳ, ಅಗ್ನಿಶಾಮಕದಳ ಸೇರಿದಂತೆ 300ಕ್ಕೂ ಅಧಿಕ ಮಂದಿ ಶೋಧ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಬೆಂಗಳೂರಿನಿಂದ ಸಕಲೇಶಪುರಕ್ಕೆ ಹೋಗುವುದಾಗಿ ಹೊರಟಿದ್ದ ಸಿದ್ಧಾರ್ಥ್, ಮಧ್ಯದಲ್ಲಿ ಮಾರ್ಗ ಬದಲಿಸಿ ಮಂಗಳೂರಿಗೆ ಬಂದಿದ್ದರು. ಕಾರಿನಲ್ಲಿ ಮೊಬೈಲ್‍ನಲ್ಲಿ ನಿರಂತರವಾಗಿ ಮಾತನಾಡುತ್ತಲೇ ಇದ್ದರು. ಮಂಗಳೂರಿನ ಉಳ್ಳಾಲ ಸಮೀಪದ ಒಂದು ಕಿ.ಮೀ ಉದ್ದದ ಬ್ರಿಡ್ಜ್ ಮೇಲೆ ಅವರು ಇಳಿದರು. ಚಾಲಕನಿಗೆ ಕಾರಿನಲ್ಲೇ ಇರುವಂತೆ ಸೂಚಿಸಿದ ಸಿದ್ಧಾರ್ಥ್, ಮೊಬೈಲ್‍ನಲ್ಲಿ ಮಾತನಾಡುತ್ತಾ ಮುಂದೆ ಸಾಗಿದ್ದರು. ಸೇತುವೆಯ ಮತ್ತೊಂದು ತುದಿಯಿಂದ ಬರುವಾಗ ಅವರು ಕಾಣೆಯಾಗಿದ್ದಾರೆ. ಕಾರಿನಿಂದ ಕೆಳಗಿಳಿದು ಹೋದ ಸಿದ್ದಾರ್ಥ್‍ಗಾಗಿ ಕಾಯುತ್ತಿದ್ದ ಚಾಲಕ, ಅರ್ಧಗಂಟೆಯಾದರೂ ಸಿದ್ದಾರ್ಥ್ ಬಾರದಿದ್ದನ್ನು ಕಂಡು ಗಾಬರಿಗೊಂಡು ಅವರಿಗೆ ಕರೆ ಮಾಡಿದ್ದಾರೆ.

ಆ ವೇಳೆಗೆ ಅವರ ಮೊಬೈಲ್ ಸ್ವಿಚ್ ಆಫ್ ಆಗಿತ್ತು. ಬಳಿಕ ಚಾಲಕ ಕೂಡಲೇ ಸಿದ್ದಾರ್ಥ್ ಪುತ್ರನಿಗೆ ಮಾಹಿತಿ ನೀಡಿದ್ದಾರೆ. ಅಲ್ಲೇ ಎಲ್ಲೋ ಇರಬಹುದು ಸ್ವಲ್ಪ ಸಮಯ ಕಾದುನೋಡಿ ಎಂದಿದ್ದಾರೆ. ರಾತ್ರಿ 8 ಗಂಟೆಯಾದರೂ ಸುಳಿವಿಲ್ಲದ್ದನ್ನು ಗಮನಿಸಿ ತಕ್ಷಣವೇ, ಸಂಸ್ಥೆಯ ಕೆಲವು ಮುಖ್ಯಸ್ಥರು ಮತ್ತು ಪೊಲೀಸರಿಗೆ ಸಿದ್ದಾರ್ಥ್ ನಾಪತ್ತೆ ಮಾಹಿತಿ ನೀಡಿದ್ದಾರೆ. ಸಿದ್ದಾರ್ಥ್ ನಾಪತ್ತೆಯಾದ ಪ್ರದೇಶ ನೇತ್ರಾವತಿ ನದಿಯ ದಡದಲ್ಲಿದೆ. ಫೋನ್‍ನಲ್ಲಿ ಮಾತನಾಡುತ್ತಾ ತೆರಳಿದ ಸಿದ್ದಾರ್ಥ್ ಮತ್ತೆ ಹಿಂತಿರುಗಿ ಬರಲೇ ಇಲ್ಲ. ಅಲ್ಲದೆ ಅವರ ಫೋನ್ ಸಹ ಸ್ವಿಚ್ ಆಫ್ ಎಂದು ಬರುತ್ತಿತ್ತು, ಬಹುಶಃ ಅವರು ನೇತ್ರಾವತಿ ನದಿಗೆ ಹಾರಿರಬಹುದು ಎಂದು ಚಾಲಕ ಪೊಲೀಸರಲ್ಲಿ ಸಂಶಯ ವ್ಯಕ್ತಪಡಿಸಿದ್ದಾನೆ. ತಮ್ಮ ಒಡೆತನದ ಕೆಫೆ ಕಾಫಿ-ಡೇ ಕಂಪೆನಿಯ ಮುಖ್ಯ ಹಣಕಾಸು ಅಧಿಕಾರಿ ಜಾವೇದ್ ಎಂಬುವವರಿಗೆ ಸಿದ್ಧಾರ್ಥ್ ಕೊನೆಯ ಕರೆ ಮಾಡಿರು ವುದು ತನಿಖೆಯಿಂದ ಗೊತ್ತಾಗಿದೆ. ಕಂಪೆನಿಯ ಹಣಕಾಸು ವಿಚಾರಗಳ ಕುರಿತು ಅವರೊಂದಿಗೆ ಸುದೀರ್ಘವಾಗಿ ಮಾತನಾಡಿದ್ದಾರೆ. ಆ ಬಳಿಕವೇ ಸಿದ್ಧಾರ್ಥ್ ನಾಪತ್ತೆ ಯಾಗಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಸುಮಾರು 3,000 ಕೋಟಿ ರೂ.ಗಳಷ್ಟು ಆದಾಯ ತೆರಿಗೆ ಬಾಕಿ ಪಾವತಿಸಬೇಕಿದೆ. ಈ ಸಂಬಂಧ ಹಲವು ಬಾರಿ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್ ಜಾರಿ ಮಾಡಲಾಗಿತ್ತು. ಬೃಹತ್ ಮೊತ್ತದ ಸಾಲ ಕೋರಿ ಸಿದ್ಧಾರ್ಥ್ ಖಾಸಗಿ ಹಣಕಾಸು ಕಂಪೆನಿಯೊಂದಕ್ಕೆ ಅರ್ಜಿ ಸಲ್ಲಿಸಿದ್ದರು. ಇತ್ತೀಚೆಗೆ ಅವರ ಅರ್ಜಿಯನ್ನು ಕಂಪೆನಿ ತಿರಸ್ಕರಿಸಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಕಳೆದ 15 ದಿನಗಳಿಂದ ಅವರು ಯಾರ್ಯಾರಿಗೆ ದೂರವಾಣಿ ಕರೆ ಮಾಡಿದ್ದಾರೆ ಎಂಬುದರ ಕುರಿತು ಪೊಲೀಸರು ಮಾಹಿತಿ ಕಲೆ ಹಾಕುತ್ತಿದ್ದಾರೆ. ಏತನ್ಮಧ್ಯೆ ಸಿದ್ಧಾರ್ಥ ಎರಡು ದಿನಗಳ ಹಿಂದೆ ನೌಕರರಿಗೆ, ಆಡಳಿತ ಮಂಡಳಿ ನಿರ್ದೇಶಕರಿಗೆ ಬರೆದಿರುವ ಪತ್ರದಲ್ಲಿ ಹಲವಾರು ಅಂಶಗಳನ್ನು ಬಿಚ್ಚಿಟ್ಟಿದ್ದಾರೆ.

37 ವರ್ಷಗಳ ಕಾಲ ಕಂಪನಿಯ ಯಶಸ್ಸಿಗಾಗಿ ಪ್ರಾಮಾಣಿಕವಾಗಿ ದುಡಿದಿದ್ದೇನೆ, ಕಾಫಿ ಡೇ ಮೂಲಕ 30 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಅಷ್ಟೇ ಅಲ್ಲದೆ ನನ್ನ ಐಟಿ ಕಂಪನಿ ಮೂಲಕ 20 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಆದರೆ ನನ್ನ ಪರಿಶ್ರಮದ ಹೊರತಾಗಿಯೂ ಆ ಎರಡೂ ಕಂಪನಿಗಳು ಲಾಭದಲ್ಲಿ ನಡೆಯಲಿಲ್ಲ.

ನನ್ನಿಂದ ಯಶಸ್ವಿ ಉದ್ಯಮಿಯಾಗಲು ಸಾಧ್ಯವಾಗಿಲ್ಲ. ನನಗೆ ಅನೇಕ ಕಡೆಯಿಂದ ಒತ್ತಡ ಹೆಚ್ಚಾಗಿದ್ದು, ಅದನ್ನು ಸಹಿಸಿಕೊಳ್ಳಲು ಸಾಧ್ಯವಾಗಿಲ್ಲ. ಆರು ತಿಂಗಳ ಹಿಂದಷ್ಟೇ ಭಾರೀ ಮೊತ್ತದ ಸಾಲ ಮಾಡಿದ್ದೆ. ಅಲ್ಲದೇ ಇತರ ಸಾಲಗಾರರ ಒತ್ತಡದಿಂದ ನನಗೆ ಈ ಪರಿಸ್ಥಿತಿ ಬಂದಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಯಾರಿಗೂ ಮೋಸ ಮಾಡುವ, ದಿಕ್ಕು ತಪ್ಪಿಸುವ ಉದ್ದೇಶ ನನಗಿರಲಿಲ್ಲ. ಆದರೆ ಈಗ ಎಲ್ಲವೂ ನನ್ನ ಕೈ ಮೀರಿ ಹೋಗಿದೆ ಎಂದು ಪತ್ರದಲ್ಲಿ ಸಿದ್ದಾರ್ಥ ತಿಳಿಸಿದ್ದಾರೆ.

ನೀವೆಲ್ಲ ಒಗ್ಗಟ್ಟಿನಿಂದ ಇದ್ದು, ನೂತನ ಆಡಳಿತದೊಂದಿಗೆ ಈ ಉದ್ಯಮವನ್ನು ಮುಂದುವರಿಸಿಕೊಂಡು ಹೋಗಬೇಕು. ಈ ಎಲ್ಲಾ ಸಮಸ್ಯೆಗಳಿಗೂ ನಾನೊಬ್ಬನೇ ಹೊಣೆ. ನನ್ನ ಅವಧಿಯಲ್ಲಿನ ಎಲ್ಲಾ ವಹಿವಾಟಿಗೂ ನಾನೇ ಜವಾಬ್ದಾರನಾಗಿದ್ದೇನೆ. ನನ್ನ ಕಂಪನಿಯ ಆಡಿಟರ್ಸ್ ಮತ್ತು ಸೀನಿಯರ್ ಮ್ಯಾನೇಜ್‍ಮೆಂಟ್‍ಗಾಗಲೀ, ನನ್ನ ಕುಟುಂಬಸ್ಥರಿಗಾಗಲೀ ನನ್ನ ವ್ಯವಹಾರದ ಬಗ್ಗೆ ಏನೂ ತಿಳಿದಿಲ್ಲ. ಕಾನೂನು ನನ್ನ ಕೈ ಕಟ್ಟಿಹಾಕಿದೆ. ಇದಕ್ಕೆ ನಾನೊಬ್ಬನೇ ಹೊಣೆಗಾರ. ನನ್ನ ಉದ್ದಿಮೆಯನ್ನು ಲಾಭದಾಯಕವಾಗಿ ಮಾಡಲು ಎಲ್ಲಾ ಬಾಗಿಲುಗಳು ಮುಚ್ಚಿವೆ. ಹೀಗಾಗಿ ನಾನು ಕಂಪನಿ ನಡೆಸುವುದರಲ್ಲಿ ವಿಫಲನಾದೆ. ಇದು ನನ್ನ ಪರಿಸ್ಥಿತಿಯಾಗಿದೆ. ಒಂದಲ್ಲಾ ಒಂದು ದಿನ ನೀವು ನನ್ನ ಪರಿಸ್ಥಿತಿಯನ್ನು ಅರ್ಥಮಾಡಿಕೊಳ್ಳುತ್ತೀರಿ ಮತ್ತು ನನ್ನ ಕ್ಷಮಿಸುತ್ತೀರಿ. ಈ ಮೂಲಕ ನನ್ನೆಲ್ಲಾ ನೋವನ್ನು ತೋಡಿಕೊಂಡಿದ್ದೇನೆ ಎಂದು ಪತ್ರದಲ್ಲಿ ಸಿದ್ದಾರ್ಥ ವಿವರಿಸಿದ್ದಾರೆ.

ಹಿಂದಿನ ಆದಾಯ ತೆರಿಗೆ ಇಲಾಖೆ ಡಿಜಿಯಿಂದ ಕಿರುಕುಳ ಅನುಭವಿಸಿದ್ದೇನೆ. ನನಗೆ ಎಷ್ಟೇ ತೊಂದರೆಯಾಗಿದ್ದರು, ಒತ್ತಡದ ನಡುವೆಯೂ ಐಟಿ ರಿಟನ್ರ್ಸ್ ಸಲ್ಲಿಸಿದ್ದೇನೆ. ಐಟಿ ಡಿಜಿ ಎರಡು ಬಾರಿ ನನ್ನ ಕಂಪನಿಯ ಷೇರುಗಳನ್ನು ಜಪ್ತಿ ಮಾಡಿದ್ದರು.

ಇದರಿಂದಾಗಿ ನಾನು ಮತ್ತಷ್ಟು ಸಾಲಗಾರನಾಗಬೇಕಾಯಿತು. ನನ್ನ ಐಟಿ ಕಂಪನಿ ಮೂಲಕ 20 ಸಾವಿರ ಜನರಿಗೆ ಕೆಲಸ ಕೊಟ್ಟಿದ್ದೇನೆ. ಈಗ ಒತ್ತಡ ನನ್ನಿಂದ ತಡೆಯಲು ಸಾಧ್ಯವಾಗುತ್ತಿಲ್ಲ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಕೆಫೆ ಕಾಫಿ ಡೇ ಕಂಪನಿ ಷೇರು ದಿಢೀರ್ ಕುಸಿತ!
ಬೆಂಗಳೂರು, ಜು. 30-ಕೆಫೆ ಕಾಫಿ ಡೇ ಸ್ಥಾಪಕ ಹಾಗೂ ಮಾಲೀಕ ವಿ.ಜಿ. ಸಿದ್ದಾರ್ಥ ನಿಗೂಢ ನಾಪತ್ತೆ ಪ್ರಕರಣ ಅವರ ಸಂಸ್ಥೆಗಳ ಮೇಲೆ ಪರಿಣಾಮ ಬೀರಿದೆ.

ಕಾಫಿ ಡೇ ಎಂಟರ್ ಪ್ರೈಸಸ್ ಮಂಗಳವಾರದ ಷೇರು ವಹಿವಾಟಿನ ಆರಂಭದಲ್ಲಿ ಶೇಕಡಾ 20ರಷ್ಟು ಕುಸಿತ ಕಂಡುಬಂದು ಇಂದು ಬೆಳಿಗ್ಗೆ ಪ್ರತಿ ಷೇರಿಗೆ 154.05ರಲ್ಲಿ ವಹಿವಾಟು ನಡೆಸಿತು. ಕಾಫಿ ಡೇ ಸೇರಿದಂತೆ ವಿ.ಜಿ. ಸಿದ್ದಾರ್ಥ ಅವರ ಮಾಲೀಕತ್ವದ ಸಂಸ್ಥೆಗಳು ಇಂದು ವಹಿವಾಟಿನಿಂದ ಬಂದ್ ಆಗಿವೆ. ರಾಷ್ಟ್ರೀಯ ಷೇರು ಮಾರುಕಟ್ಟೆ ನಿಫ್ಟಿ ಮತ್ತು ಮುಂಬೈ ಷೇರು ಮಾರುಕಟ್ಟೆ ಬಿಎಸ್‍ಇ ಕೇಂದ್ರಗಳಿಗೆ ಪತ್ರ ಬರೆದಿದೆ. ಕಾಫಿ ಡೇ ಎಂಟರ್ ಪ್ರೈಸಸ್ ಲಿಮಿಟೆಡ್‍ನ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ವಿ.ಜಿ. ಸಿದ್ಧಾರ್ಥ್ ಅವರು ನಿನ್ನೆ ಸಾಯಂಕಾಲದಿಂದ ಕಾಣೆಯಾಗಿದ್ದಾರೆ. ಅವರ ಪತ್ತೆಗಾಗಿ ಸಂಬಂಧಪಟ್ಟ ಅಧಿಕಾರಿಗಳ ನೆರವನ್ನು ಪಡೆಯುತ್ತಿದ್ದೇವೆ. ವೃತ್ತಿಪರ ವ್ಯವಸ್ಥಾಪಕ ತಂಡ ಮತ್ತು ಸ್ಪರ್ಧಾತ್ಮಕ ನಾಯಕತ್ವ ಹೊಂದಿರುವ ತಂಡಗಳನ್ನು ಕಂಪೆನಿ ಹೊಂದಿದ್ದು ಉದ್ಯಮವನ್ನು ಮುಂದುವರಿಸಿಕೊಂಡು ಹೋಗುವ ಭರವಸೆಯಿದೆ ಎಂದು ಷೇರು ಮಾರುಕಟ್ಟೆ ವಿನಿಮಯ ಕೇಂದ್ರಕ್ಕೆ ಬರೆದ ಪತ್ರದಲ್ಲಿ ಕಂಪೆನಿ ತಿಳಿಸಿದೆ.

ಕೊನೆಯ ಮೊಬೈಲ್ ಲೊಕೇಷನ್ ಪತ್ತೆ
ಬೆಂಗಳೂರು, ಜು. 30- ಕೆಫೆ ಕಾಫಿ ಡೇ ಮಾಲೀಕ ಸಿದ್ಧಾರ್ಥ್ ಅವರು ಮಂಗಳೂರು ಸಮೀಪ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಶಂಕೆ ವ್ಯಕ್ತವಾಗಿದೆ. ಈ ಮಧ್ಯೆ ಸಿದ್ಧಾರ್ಥ್ ಅವರ ಮೊಬೈಲ್‍ನ ಕೊನೆಯ ಲೊಕೇಷನ್ ಸಹ ಸೇತುವೆ ಮಧ್ಯದಲ್ಲಿ ತೋರಿಸುತ್ತಿರುವ ವಿಚಾರ ಬೆಳಕಿಗೆ ಬಂದಿದೆ.

ಈಗಾಗಲೇ ಈ ಪ್ರಕರಣ ಸಂಬಂಧ ಪೆÇಲೀಸರು ಪ್ರಾಥಮಿಕ ತನಿಖೆಯನ್ನು ಅಂತ್ಯಗೊಳಿಸಿದ್ದಾರೆ. ಮುಂಜಾನೆಯಿಂದ ಸಿದ್ದಾರ್ಥ್ ಅವರ ಕಾರು ಚಾಲಕ ಬಸವರಾಜ್ ಅವರ ವಿಚಾರಣೆಯನ್ನು ಪೆÇಲೀಸರು ನಡೆಸಿದ್ದಾರೆ. ಸಿದ್ಧಾರ್ಥ್ ಮೊಬೈಲ್ ಲೋಕೇಷನ್ ಪರಿಶೀಲಿಸಿದಾಗ ಸೇತುವೆಯ ಮಧ್ಯಭಾಗದಲ್ಲಿ ಅವರ ಕೊನೆಯ ಮೊಬೈಲ್ ಲೊಕೇಷನ್ ಪತ್ತೆಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಬೆಳಿಗ್ಗೆ ತನಿಖೆ ನಡೆಸಲು ಆಗಮಿಸಿದ್ದ ಶ್ವಾನ ದಳದ ನಾಯಿ ಸಹ ಸೇತುವೆ ಮಧ್ಯಭಾಗದವರೆಗೆ ಬಂದಿತ್ತು. ಪೆÇಲೀಸ್ ವಿಚಾರಣೆ ವೇಳೆ ಡ್ರೈವರ್, ಮಂಗಳವಾರ ಸಂಜೆ ಹೊತ್ತಿನಲ್ಲಿ ಸೇತುವೆಯ ಬಳಿ ಕಾರನ್ನು ನಿಲ್ಲಿಸು ಎಂದು ಸಿದ್ಧಾರ್ಥ್ ಹೇಳಿದ್ದರು. ಕಾರಿನಿಂದ ಇಳಿದು ಸೇತುವೆಯ ಮೇಲೆ ಸಿದ್ದಾರ್ಥ್ನಡೆದುಕೊಂಡು ಫೆÇೀನಿನಲ್ಲಿ ಮಾತನಾಡುತ್ತಾ ಹೋಗುತ್ತಿದ್ದರು. ಕೆಲ ನಿಮಿಷ ಕಳೆದರೂ ಅವರು ಬಾರದೇ ಇದ್ದಾಗ ಕರೆ ಮಾಡಿದ್ದೆ. ಫೆÇೀನ್ ಸ್ವಿಚ್ ಆಫ್ ಆಗಿತ್ತು ಎಂದು ತಿಳಿಸಿದ್ದರು.

ಡ್ರೈವರ್ ಹೇಳಿದ್ದೇನು?: ನಾನು ಕಳೆದ ಮೂರು ವರ್ಷಗಳಿಂದ ಕಾಫಿ ಡೇ ಮಾಲೀಕ ರಾದ ಸಿದ್ಧಾರ್ಥ್ ಅವರ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದೇನೆ. ಸೋಮವಾರ ಎಂದಿನಂತೆ ಸದಾಶಿವನಗರದಲ್ಲಿರುವ ಸಿದ್ಧಾರ್ಥ್ ಅವರ ಮನೆಗೆ ಕೆಲಸಕ್ಕೆ ಹೋಗಿದ್ದೆ. ನಂತರ ಸುಮಾರು 8 ಗಂಟೆಗೆ ಸಿದ್ಧಾರ್ಥ್ ಅವರು ವಿಠ್ಠಲ್ ಮಲ್ಯ ರಸ್ತೆಯಲ್ಲಿರುವ ಅವರ ಕಚೇರಿಗೆ ಇನ್ನೋವಾ ಕಾರಿನಲ್ಲಿ ಕರೆದುಕೊಂಡು ಹೋದೆ. ನಂತರ ಕಚೇರಿಯಲ್ಲಿದ್ದು, ಬೆಳಿಗ್ಗೆ 11 ಗಂಟೆ ವಾಪಸ್ ಮನೆಗೆ ಬಂದೆವು ಎಂದು ತಿಳಿಸಿದ್ದಾರೆ.

ಮನೆಗೆ ಬಂದ ನಂತರ ಸಿದ್ಧಾರ್ಥ್ ಅವರು ಊರಿಗೆ ಹೋಗಬೇಕಾಗಿದೆ ನೀನು ಮನೆಗೆ ಹೋಗಿ ಲಗೇಜ್ ತೆಗೆದುಕೊಂಡು ಬಾ ಎಂದು ಹೇಳಿದರು. ನಾನು ಮನೆಗೆ ಹೋಗಿ ಲಗೇಜ್ ತೆಗೆದುಕೊಂಡು ಬಂದೆ. ಬಳಿಕ ಸುಮಾರು 5.30ಕ್ಕೆ ಸಕಲೇಶಪುರದ ಕಡೆಗೆ ಹೋಗು ಎಂದರು. ನಾನು ಅವರು ಹೇಳಿದಂತೆ ಕೆಎ 03 ಎನ್‍ಸಿ, 2592 ಕಾರಿನಲ್ಲಿ ಬೆಂಗಳೂರನ್ನು ಬಿಟ್ಟು ಸಕಲೇಶಪುರದ ಕಡೆ ಚಲಾಯಿಸಿಕೊಂಡು ಹೋದೆ. ಸಕಲೇಶಪುರ ಸಮೀಪಿಸುತ್ತಿದಂತೆ ಮುಂದೆ ಮಂಗಳೂರು ಕಡೆ ಹೋಗುವಾ ಎಂದು ತಿಳಿಸಿದರು. ನಾನು ಅವರು ತಿಳಿಸಿದಂತೆ ಅವರನ್ನು ಕರೆದುಕೊಂಡು ಮಂಗಳೂರು ನಗರಕ್ಕೆ ಪ್ರವೇಶಿಸುವ ಸರ್ಕಲ್(ಪಂಪ್‍ವೆಲ್) ಬಳಿ ಬಂದಾಗ ಸಿದ್ಧಾರ್ಥ್ ಎಡಗಡೆ ತೆಗೆದುಕೋ ಸೈಟ್‍ಗೆ ಹೋಗಬೇಕು ಎಂದು ಹೇಳಿದರು.

ಸಿದ್ಧಾರ್ಥ್ ಹೇಳಿದಂತೆ ನಾನು ಎಡಗಡೆಗೆ ತೆಗೆದುಕೊಂಡು ಕೇರಳ ಹೆದ್ದಾರಿಯಲ್ಲಿ 3-4 ಕಿ.ಮೀ ಬಂದಾಗ ನದಿಗೆ ಅಡ್ಡಲಾಗಿ ಕಟ್ಟಿರುವ ಒಂದು ದೊಡ್ಡ ಸೇತುವೆ ಆರಂಭವಾಗುತ್ತಿದ್ದಂತೆ ಕಾರು ನಿಲ್ಲಿಸು ಎಂದು ಹೇಳಿದರು. ನಂತರ ಅವರು ಕಾರಿನಿಂದ ಇಳಿದು ವಾಕಿಂಗ್ ಹೋದರು. ಹೀಗೆ ಇಳಿದು ಫೆÇೀನಿನಲ್ಲಿ ಮಾತನಾಡಿಕೊಂಡು ಸ್ವಲ್ಪ ದೂರ ಹೋದವರೇ ಮತ್ತೆ ವಾಪಸ್ ಕಾರು ಬಳಿ ಬಂದರು. ನಂತರ ಪುನಃ ಫೆÇೀನಿನಲ್ಲಿ ಮಾತನಾಡಿಕೊಂಡು ಒಂದಷ್ಟು ದೂರ ಹೋದರು. ಹೀಗೆ ಹೋಗುವಾಗ ಅವರನ್ನು ನಾನು ನೋಡುತ್ತಿದ್ದೆ. ಅವರು ಕಾಣಿಸದೇ ಇದ್ದಾಗ ನಾನು ಅವರನ್ನು ಕಾರಿನಲ್ಲಿ ಹಿಂಬಾಲಿಸಿಕೊಂಡು ಹೋದೆ. ನಾನು ಬರುತ್ತಿರುವುದನ್ನು ನೋಡಿ ಅವರು `ನೀನು ಇಲ್ಲೇ ಇರು ಬರಬೇಡ? ಎಂದು ಹೇಳಿ ಹೋದರು. ಸುಮಾರು ಅರ್ಧ ಗಂಟೆಯಾದರೂ ಅವರು ವಾಪಸ್ ಬಂದಿಲ್ಲ. ಇದರಿಂದ ಆತಂಕಗೊಂಡ ನಾನು ಅವರಿಗೆ ಫೆÇೀನ್ ಮಾಡಿದೆ. ಆದರೆ ಅವರ ಫೆÇೀನ್ ಸ್ವಿಚ್ ಆಫ್ ಆಗಿತ್ತು ಎಂದಿದ್ದಾರೆ.

Translate »