ಮೈಸೂರಲ್ಲಿ ಸಂಭ್ರಮದ ರಾಜ್ಯೋತ್ಸವ: ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ
ಮೈಸೂರು

ಮೈಸೂರಲ್ಲಿ ಸಂಭ್ರಮದ ರಾಜ್ಯೋತ್ಸವ: ಪೂರ್ವಸಿದ್ಧತಾ ಸಭೆಯಲ್ಲಿ ನಿರ್ಧಾರ

October 26, 2021

ಮೈಸೂರು, ಅ.25(ಎಂಕೆ)- ನ.1ರ ಕನ್ನಡ ರಾಜ್ಯೋತ್ಸವವನ್ನು ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಕನ್ನಡ ರಾಜ್ಯೋತ್ಸವ ಆಚ ರಣೆಯ ಸಂಬಂಧ ಪೂರ್ವಸಿದ್ಧತಾ ಸಭೆ ನಡೆಸಿ, ಮಾತನಾಡಿದ ಅವರು, ಕಳೆದ ವರ್ಷದಂತೆಯೇ ಅಚ್ಚುಕಟ್ಟಾಗಿ ಕನ್ನಡ ರಾಜ್ಯೋತ್ಸವವನ್ನು ಆಚರಣೆ ಮಾಡ ಲಾಗುವುದು. ಅಂದು ಬೆಳಗ್ಗೆ 8.30ಕ್ಕೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮ ಶೇಖರ್ ಹಾಗೂ ಇನ್ನಿತರೆ ಗಣ್ಯರು ಅರ ಮನೆಯ ಆವರಣದಲ್ಲಿರುವ ಶ್ರೀ ಭುವನೇ ಶ್ವರಿ ದೇವಿ ದರ್ಶನ ಪಡೆಯುವರು.

ನಂತರ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಮುಂಭಾಗ ನಡೆಯುವ ಸಮಾರಂಭದಲ್ಲಿ ಭಾಗವಹಿಸುವರು ಎಂದರು.
ಸಭೆಯಲ್ಲಿ ಜಿಪಂ ಸಿಇಒ ಎ.ಎಂ. ಯೋಗೀಶ್, ಎಡಿಸಿ ಡಾ.ಬಿ.ಎಸ್. ಮಂಜು ನಾಥಸ್ವಾಮಿ, ಮುಡಾ ಆಯುಕ್ತ ಡಾ.ಡಿ.ಬಿ. ನಟೇಶ್, ಪಾಲಿಕೆ ಉಪ ಆಯುಕ್ತೆ ಎಂ.ಕೆ. ಸವಿತಾ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಹೆಚ್. ಚೆನ್ನಪ್ಪ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಆರ್.ರಾಜು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಗೋವಿಂದರಾಜು ಇತರರು ಉಪಸ್ಥಿತರಿದ್ದರು.

Translate »