ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ
ಮೈಸೂರು

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆಗೆ ಮೈಸೂರಲ್ಲಿ ಸಂಭ್ರಮಾಚರಣೆ

July 6, 2018

ಮೈಸೂರು:  ಸಮ್ಮಿಶ್ರ ಸರ್ಕಾರ ಚೊಚ್ಚಲ ಬಜೆಟ್‍ನಲ್ಲಿ ಕರ್ನಾ ಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, ಅದಕ್ಕೆ 25ಕೋಟಿ ಅನುದಾನ ಮೀಸಲಿಟ್ಟಿರುವುದು ಹಾಗೂ ಶಂಕರಾ ಚಾರ್ಯರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಆಚರಿಸುವುದಕ್ಕೆ ನಿರ್ಧರಿಸಿರುವುದನ್ನು ಸ್ವಾಗತಿಸಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಚಾಮುಂಡಿಪುರಂ ವೃತ್ತದಲ್ಲಿ ಸಾರ್ವಜನಿಕ ರಿಗೆ ಸಿಹಿ ವಿತರಿಸಿ ಸಂಭ್ರಮಿಸಿದರು.

ಮುಖ್ಯಮಂತ್ರಿ ಹೆಚ್.ಡಿ ಕುಮಾರ ಸ್ವಾಮಿ ಅವರು ಗುರುವಾರ ಮಂಡಿಸಿದ ಬಜೆಟ್‍ನಲ್ಲಿ ಬ್ರಾಹ್ಮಣ ಸಮುದಾಯಕ್ಕೆ ಆದ್ಯತೆ ನೀಡಿ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿದ್ದಾರೆ. ಇದುವರೆಗೂ ಅಧಿಕಾರ ನಡೆಸಿದ ಯಾವುದೇ ಸರ್ಕಾರ ಬ್ರಾಹ್ಮಣ ಸಮುದಾಯದ ಏಳಿಗೆಗೆ ಕಾರ್ಯಕ್ರಮ ರೂಪಿಸಿರಲಿಲ್ಲ. ಸಮ್ಮಿಶ್ರ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದರೊಂದಿಗೆ 25 ಕೋಟಿ ಅನುದಾನ ನೀಡಿದೆ. ಅಲ್ಲದೆ ಸರ್ಕಾರದ ವತಿಯಿಂದಲೇ ಶಂಕರಾಚಾರ್ಯರ ಜಯಂತಿಯನ್ನು ಆಚರಿಸಲು ನಿರ್ಧರಿಸಿ ರುವುದು ಸಮುದಾಯಕ್ಕೆ ನೀಡಿದ ಕೊಡುಗೆ ಯಾಗಿದೆ. ಈ ಸಂದರ್ಭದಲ್ಲಿ ವಿಪ್ರ ಮುಖಂಡರುಗಳಾದ ವಿನಯ್ ಕಣಿಗಾಲ್, ಮುಳ್ಳೂರು ಸುರೇಶ್, ರಂಗ ನಾಥ್, ಹೆಚ್.ವಿ.ಭಾಸ್ಕರ್, ಮೈಕ್ ಚಂದ್ರು, ರಾಘವೇಂದ್ರ ಪ್ರಸಾದ್, ಯುವಮುಖಂಡ ರಾದ ಅಜಯ್ ಶಾಸ್ತ್ರಿ, ಮನು ವೆಂಕಟ ರಾಮ್, ಜೆಡಿಎಸ್ ಮುಖಂಡರಾದ ಪ್ರಶಾಂತ್ ಪಚ್ಚು, ಶ್ರೀಕಾಂತ್ ಕಶ್ಯಪ್, ಪ್ರಕಾಶ್ ಪ್ರಿಯದರ್ಶನ್, ವೀಣಾ, ಸುಬ್ಬಯ್ಯ, ಹೆಡತಲೆ ಮಂಜು ಹಾಗೂ ಇನ್ನಿತರರು ಪಾಲ್ಗೊಂಡಿದ್ದರು.

ರಾಜ್ಯ ಸರ್ಕಾರ ಬಜೆಟ್‍ನಲ್ಲಿ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಘೋಷಣೆ ಮಾಡಿರುವುದನ್ನು ಸ್ವಾಗತಿಸಿ ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ಮೈಸೂರು ಜಿಲ್ಲಾ ಬ್ರಾಹ್ಮಣ ಯುವ ವೇದಿಕೆಯ ಕಾರ್ಯಕರ್ತರು ಸಾರ್ವಜನಿಕರಿಗೆ ಸಿಹಿ ವಿತರಿಸಿ, ಸಂಭ್ರಮಿಸಿದರು.

ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ: ಸಿಎಂಗೆ ಬ್ರಾಹ್ಮಣ ಸಂಘಟನೆಗಳ ಅಭಿನಂದನೆ: ಬ್ರಾಹ್ಮಣ ಸಮುದಾಯದ ಬಹುದಿನಗಳ ಕೋರಿಕೆಗೆ ಮನ್ನಣೆ ನೀಡಿ, ಬಜೆಟ್‍ನಲ್ಲಿ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ರಚನೆ ಘೋಷಿಸಿರುವ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ವಿವಿಧ ಬ್ರಾಹ್ಮಣ ಸಂಘಟನೆಗಳು ಅಭಿನಂದಿಸಿವೆ. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸಿ, 25 ಕೋಟಿ ರೂ. ಅನುದಾನ ನೀಡುವ ಬಗ್ಗೆ ಇಂದು ಮಂಡಿಸಿದ ರಾಜ್ಯ ಬಜೆಟ್‍ನಲ್ಲಿ ಪ್ರಸ್ತಾಪಿಸಿರುವುದು ಸ್ವಾಗತಾರ್ಹವಾಗಿದೆ.

ಜೊತೆಗೆ ಬ್ರಾಹ್ಮಣ ಸಮುದಾಯದ ಆದಿ ಜಗದ್ಗುರು ಶ್ರೀ ಶಂಕರಾಚಾರ್ಯರ ಜಯಂತಿಯನ್ನು ಸರ್ಕಾರದ ವತಿಯಿಂದಲೇ ಆಚರಿಸುವ ಸಂಬಂಧವೂ ನಿರ್ಧಾರ ಕೈಗೊಂಡಿರುವುದನ್ನು ಸಂಘಟನೆಗಳು ಸ್ವಾಗತಿಸಿವೆ. ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ರಾಜ್ಯದಲ್ಲಿ ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ ಈಗ ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯನ್ನು ಸ್ಥಾಪಿಸಿ, 25 ಕೋಟಿ ರೂ.ಗಳ ಅನುದಾನವನ್ನು ನೀಡಿ ಬ್ರಾಹ್ಮಣ ಸಮುದಾಯದ ಬಗ್ಗೆ ತಮ್ಮ ಕಾಳಜಿ ಯನ್ನು ವ್ಯಕ್ತಪಡಿಸಿದ್ದು, ಇದಕ್ಕಾಗಿ ಮುಖ್ಯಮಂತ್ರಿ ಕುಮಾರಸ್ವಾಮಿಯವರನ್ನು ಅಭಿನಂದಿಸು ವುದಾಗಿ ಮೈಸೂರು ಜಿಲ್ಲಾ ಬ್ರಾಹ್ಮಣ ಸಂಘದ ಅಧ್ಯಕ್ಷ ಡಿ.ಟಿ.ಪ್ರಕಾಶ್ ತಿಳಿಸಿದ್ದಾರೆ.

ಕರ್ನಾಟಕ ಬ್ರಾಹ್ಮಣ ಅಭಿವೃದ್ಧಿ  ಮಂಡಳಿ ರಚನೆ ಸ್ವಾಗತಾರ್ಹ: ಬ್ರಾಹ್ಮಣ ಸಮುದಾಯದ ಬಹು ದಿನಗಳ ಬೇಡಿಕೆಯಾದ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಸ್ಥಾಪನೆ ಮಾಡಿರುವುದು ಸ್ವಾಗತಾರ್ಹವಾಗಿದೆ. ಇದರಿಂದ ಬ್ರಾಹ್ಮಣ ಸಮಾಜದ ಏಳ್ಗೆಗೆ ಪೂರಕವಾಗಿದ್ದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಅಭಿನಂದಿಸುವುದಾಗಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ರಾಜ್ಯ ಸಂಘಟನಾ ಕಾರ್ಯದರ್ಶಿ ನಂ.ಶ್ರೀಕಂಠ ಕುಮಾರ್ ತಿಳಿಸಿದ್ದಾರೆ.

Translate »