ಅಂತರರಾಜ್ಯರಾಜ್ಯ ಜಲವಿವಾದ ಏಪ್ರಿಲ್‌ನಲ್ಲಿ ಕೇಂದ್ರ ಜಲಶಕ್ತಿ ಸಚಿವರ ಭೇಟಿ

ಹುಬ್ಬಳ್ಳಿ, ಮಾ.೨೭- ಅಂತರರಾಜ್ಯ ಜಲ ವಿವಾದಗಳಿಗೆ ಸಂಬAಧಿಸಿದAತೆ ಕೇಂದ್ರದಿAದಲೂ ಹಲವಾರು ಅನುಮತಿಗಳನ್ನು ಪಡೆಯಬೇಕಿದೆ. ಈ ಬಗ್ಗೆ ಸಿದ್ಧತೆ ಮಾಡಿಕೊಳ್ಳಲು ಸಂಬAಧಪಟ್ಟ ಇಲಾಖೆಗಳಿಗೆ ಸೂಚನೆ ನೀಡಿದ್ದೇನೆ. ಇದಕ್ಕೆ ಸಂಬAಧಿಸಿದAತೆ ಏಪ್ರಿಲ್ ಮೊದಲ ವಾರದಲ್ಲಿ ಕೇಂದ್ರ ಜಲಶಕ್ತಿ ಸಚಿವರನ್ನು ಭೇಟಿಯಾಗಲಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಹುಬ್ಬಳ್ಳಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು. ಅಂತರರಾಜ್ಯ ಜಲವಿವಾದಗಳ ಶೀಘ್ರ ವಾಗಿ ಬಗೆಹರಿಸಲು ಎಲ್ಲಾ ರೀತಿಯ ಪ್ರಯತ್ನ ಮಾಡಬೇಕಿದೆ. ಕಾನೂನಾತ್ಮಕ ವಿಚಾರಗಳಲ್ಲಿ ನ್ಯಾಯಾಲಯಗಳಿಂದ ಕೂಡಲೇ ಪರಿಹಾರ ಕಂಡುಕೊಳ್ಳಬೇಕಿದೆ. ರೈಲ್ವೆ ಯೋಜನೆಗಳ ಭೂ ಸ್ವಾಧೀನ ಪ್ರಕ್ರಿಯೆಗಳು ಪೂರ್ಣಗೊಳಿಸಲು ಹೆಚ್ಚಿನ ಪ್ರಾಶಸ್ತ÷್ಯ ನೀಡಿ ಇತ್ಯರ್ಥ ಮಾಡಲಾಗುವುದು ಎಂದು ತಿಳಿಸಿದರು.
ಯೋಜನಾಬದ್ಧವಾಗಿ ರಾಜ್ಯದ ಅಭಿವೃದ್ಧಿ: ಕೋವಿಡ್ ಕರಿನೆರಳಿನಿಂದ ಹೊರ ಬಂದಿರುವುದರಿAದ ಅಭಿವೃದ್ಧಿ ಪರ್ವ ಈಗ ಶುರುವಾಗಿದೆ. ಯೋಜನಾಬದ್ಧವಾಗಿ ರಾಜ್ಯವನ್ನು ಅಭಿವೃದ್ಧಿಗೊಳಿಸಲು ತಳಪಾಯವನ್ನು ಹಾಕಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬಂಡವಾಳ ಹೂಡಿಕೆಗೆ ಒತ್ತು: ಕೈಗಾರಿಕೆಗೆ ಬಜೆಟ್‌ನಲ್ಲಿ ಘೋಷಣೆ ಮಾಡಿರುವಂತೆ ಜಮೀನು ಗುರುತಿಸುವಿಕೆ, ಅಭಿವೃದ್ಧಿ ಮತ್ತು ಬಂಡವಾಳ ಹೂಡಿಕೆ ಆಕರ್ಷಿಸಲು ಹೆಚ್ಚಿನ ಒತ್ತು ನೀಡಲಾಗಿದೆ. ಇವುಗಳಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ ಎಂದರು. ಮಹಿಳೆಯರ ಸಬಲೀಕರಣಕ್ಕೆ ಬಜೆಟ್‌ನಲ್ಲಿ ಹೆಚ್ಚಿನ ಒತ್ತು ನೀಡಲಾಗಿದೆ. ಅದಕ್ಕೆ ರೂಪುರೇಷೆಗಳನ್ನು ನೀಡಲಾಗು ತ್ತಿದೆ. ಕೃಷಿ ಸೆಕಂಡರಿ ನಿರ್ದೇಶನಾಲಯವನ್ನು ಸ್ಥಾಪಿಸಲು ಆದೇಶ ಮಾಡಲಾಗಿದೆ. ಶೀಘ್ರದಲ್ಲಿಯೇ ಕಾರ್ಯಾರಂಭ ಮಾಡಲಾಗುವುದು ಎಂದರು. ಹುಬ್ಬಳ್ಳಿಗೆ ಸಂಬAಧಿಸಿದAತೆ ಜಯದೇವ ಹೃದ್ರೋಗ ಆಸ್ಪತ್ರೆ ಸ್ಥಾಪನೆಗೆ ಈಗಾಗಲೇ ಮೇಲ್ವಿ ಚಾರಣಾ ಮಂಡಳಿಯಲ್ಲಿ ತೀರ್ಮಾನವಾಗಿದೆ. ಅದರನ್ವಯ ಆದಷ್ಟು ಬೇಗ ಸ್ಥಳ ನಿಗದಿ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.