ಚಾಮರಾಜನಗರ, ಮಾ.3- ಕೇಂದ್ರ ಬಿಜೆಪಿ ಸರ್ಕಾರ ಹಿಂದೂ-ಮುಸ್ಲಿಮರನ್ನು ವಿಭಜಿ ಸುವ ಕೆಲಸ ಮಾಡುತ್ತಿದೆ. ಇದು ಅಪಾಯ ಕಾರಿ ಬೆಳವಣಿಗೆ ಎಂದು ಮಾಜಿ ಸಂಸದ ಆರ್.ಧ್ರುವನಾರಾಯಣ್ ಆರೋಪಿಸಿದರು.
ನಗರದ ಸತ್ತಿ ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಸ್ಲಾಹುಲ್ ಮುಸ್ಲಿಮೀನ್ ಸಂಸ್ಥೆ ಎನ್‍ಪಿಆರ್, ಸಿಎಎ, ಎನ್‍ಆರ್‍ಸಿ ವಿರೋಧಿಸಿ ಮಾ.7 ರಂದು ನಗರದಲ್ಲಿ ಹಮ್ಮಿಕೊಂಡಿರುವ ಸಂವಿಧಾನ ಸಂರಕ್ಷಣಾ ಮತ್ತು ಪೌರತ್ವ ವಿರೋಧಿಸಿ ಜನಾಂದೋಲನ ಸಮಾವೇಶಕ್ಕೆ ಆಗಮಿಸುತ್ತಿರುವ ಎಐಸಿಸಿ ಪ್ರಧಾನ ಕಾರ್ಯ ದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್‍ಕುಮಾರ್, ಕೇಂದ್ರ ಮಾಜಿ ಸಚಿವ ಸಿ.ಎಂ.ಇಬ್ರಾಹಿಂ ಅವರಿಗೆ ಭವ್ಯ ಸ್ವಾಗತ ಕೋರುವ ಸಲು ವಾಗಿ ನಡೆದ ಪೂರ್ವಭಾವಿ ಸಭೆಯ ನೇತೃತ್ವ ವಹಿಸಿ ಮಾತನಾಡಿದರು.
ದೇಶದ ಆರ್ಥಿಕ ಪರಿಸ್ಥಿತಿ ಸರಿಯಾ ಗಿಲ್ಲ. ಉದ್ಯೋಗ ಸಮಸ್ಯೆ ನಿವಾರಿಸದ ಕೇಂದ್ರ ಬಿಜೆಪಿ ಸರ್ಕಾರ ಎಲ್ಲ ರಂಗದಲ್ಲೂ ವಿಫಲವಾಗಿದೆ. ಇದನ್ನು ಮರೆಮಾಚಲು ಕೇಂದ್ರ ಸರ್ಕಾರ ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ಜಾರಿಗೆ ಮಾಡಿದೆ. ಕಾಂಗ್ರೆಸ್ ಸರ್ಕಾರ ಆಡಳಿತದಲ್ಲಿ ಹೊಂದಾಣಿಕೆ ಮಾಡಿಕೊಂಡು ಎಲ್ಲರನ್ನೂ ಜೊತೆಗೆ ಕರೆದುಕೊಂಡು ಹೋಗುವ ಕೆಲಸ ಮಾಡುತ್ತಿತ್ತು. ಮುಸ್ಲಿಂರು ಎಲ್ಲಾ ರಂಗ ದಲ್ಲೂ ದೇಶಕ್ಕೆ ಕೊಡುಗೆ ನೀಡಿದ್ದಾರೆ. ದೇಶದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದ ಮೇಲೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ವಿಭಜನೆ ಮಾಡುತ್ತಿದ್ದಾರೆ. ಮೋದಿ ಅವರು ಪೊಲೀಸರ ಮೂಲಕ ದೆಹಲಿ ಗಲಭೆ ಆರಂಭಿಸಿದ್ದಾರೆ. ಅದನ್ನು ಪ್ರಶ್ನಿಸಿದ ನ್ಯಾಯಾಧೀಶರನ್ನು ರಾತ್ರೋ ರಾತ್ರಿ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿದರು.
ಮಲ್ಲಿಕಾರ್ಜುನ ಖರ್ಗೆ ಹಾಗೂ ಇನ್ನಿತರ ನಾಯಕರು ಮಾ.7ರಂದು ಮಳವಳ್ಳಿ ಮಾರ್ಗವಾಗಿ ಸತ್ತೇಗಾಲ, ಕೊಳ್ಳೇಗಾಲ ಮೂಲಕ ಚಾ.ನಗರಕ್ಕೆ ಬರಲಿದ್ದಾರೆ. ಆದ್ದ ರಿಂದ ಅವರು ಬರುವ ಮಾರ್ಗವನ್ನು ತಳಿರು, ತೋರಣಗಳಿಂದ ಸಿಂಗರಿಸಿ ರಸ್ತೆಯುದ್ದಕ್ಕೂ ಪಕ್ಷದ ಕಾರ್ಯಕರ್ತರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿದ್ದು ಸ್ವಾಗತ ಕೋರಬೇಕಿದೆ ಎಂದರು.
ಚಾಮರಾಜನಗರದಲ್ಲಿ ನಡೆಯುವ ಸಮಾವೇಶದಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸÀಬೇಕು. ಸಮಾವೇಶದ ನಂತರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಲ್ಲಿಕಾ ರ್ಜುನ ಖರ್ಗೆ ಅವರನ್ನು ಸನ್ಮಾನಿ ಸಲಾಗುವುದು ಎಂದರು.
ಮಾಜಿ ಶಾಸಕ ಎ.ಆರ್.ಕೃಷ್ಣಮೂರ್ತಿ ಮಾತನಾಡಿ, ಕೇಂದ್ರ ಸರ್ಕಾರ ಜನ ವಿರೋಧಿ ಕಾನೂನುಗಳನ್ನು ಜಾರಿ ಮಾಡಿ ಉದ್ದಟತನ ತೋರುತ್ತಿದೆ. ದೆಹಲಿಯಲ್ಲಿ ಕೇಜ್ರಿವಾಲ್ ಮತ್ತೆ ಅಧಿಕಾರಕ್ಕೆ ಬಂದಿರು ವುದನ್ನು ಸಹಿಸದ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಶಾ ಅವರು ದೆಹಲಿಯಲ್ಲಿ ಗಲಭೆಗೆ ಮಾಡಿಸಿ ರಾಷ್ಟ್ರಪತಿ ಆಡಳಿತ ಹೇರುವ ಹುನ್ನಾರ ಮಾಡಿದ್ದಾರೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಮಾಜಿ ಶಾಸಕ ಎಸ್.ಬಾಲರಾಜ್, ಯುವ ಮುಖಂಡ ಗಣೇಶ್‍ಪ್ರಸಾದ್, ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷ ಮಹೇಶ್, ಡಿಡಿಸಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ನಗರಸಭಾ ಮಾಜಿ ಅಧ್ಯಕ್ಷ ಎಸ್.ನಂಜುಂಡಸ್ವಾಮಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರ್.ಮಹದೇವು, ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಸ್ವಾಮಿ, ಮಹಮ್ಮದ್ ಅಸ್ಗರ್, ಹೊಂಗನೂರು ಚಂದ್ರು, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‍ಕುಮಾರ್, ಜಿಪಂ ಸದಸ್ಯ ಯೋಗೇಶ್ ಇತರರಿದ್ದರು.