ನಾಳೆ ಕೇಂದ್ರ ಮಧ್ಯಂತರ ಬಜೆಟ್
ಮೈಸೂರು

ನಾಳೆ ಕೇಂದ್ರ ಮಧ್ಯಂತರ ಬಜೆಟ್

January 31, 2019

ನವದೆಹಲಿ: ಮುಂಬರುವ ಲೋಕಸಭೆ ಚುನಾ ವಣೆ ಹಿನ್ನೆಲೆಯಲ್ಲಿ ಸರ್ಕಾರದಿಂದ ಫೆ.1 ರಂದು 4 ತಿಂಗಳ ಮಧ್ಯಂತರ ಬಜೆಟ್ ಮಂಡಿಸಲಾಗುವುದು ಎಂದು ಸಚಿವ ಪಿಯೂಶ್ ಗೋಯೆಲ್ ಹೇಳಿದ್ದಾರೆ.

ದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಫೆಬ್ರವರಿ 1ರಂದು ಬಜೆಟ್ ಮಂಡಿಸುತ್ತಿರುವು ದಾಗಿ ತಿಳಿಸಿದ್ದಾರೆ. ಸಂಸತ್ತಿನ ಬಜೆಟ್ ಅಧಿವೇಶನ ಜನವರಿ 31ರಿಂದ ಫೆ.13ರವರೆಗೆ ನಡೆಯಲಿದ್ದು, ಫೆಬ್ರವರಿ 1ರಂದು ಆಯವ್ಯಯ ಮಂಡನೆಯಾಗಲಿದೆ.

ಜನವರಿ 31ರಂದು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಜಂಟಿ ಅಧಿವೇಶನ ಉದ್ಘಾಟಿಸಿ ಭಾಷಣ ಮಾಡಲಿದ್ದಾರೆ. ಈ ಮಧ್ಯಂ ತರ ಬಜೆಟ್‍ನಲ್ಲಿ ನರೇಂದ್ರ ಮೋದಿ ಸರ್ಕಾರ ನೌಕರರಿಗೆ ಹೆಚ್ಚಿನ ಪರಿಹಾರ ನೀಡುವ ನಿರೀಕ್ಷೆಯಿದೆ. ಆದಾಯ ತೆರಿಗೆ ಮಿತಿ ದ್ವಿಗುಣಗೊಳ್ಳುವ ಬಗ್ಗೆ ನಿರೀಕ್ಷಿಸಲಾಗಿದ್ದು, ಅಸ್ತಿತ್ವದಲ್ಲಿರುವ ಆದಾಯ ತೆರಿಗೆ ಮಿತಿಯನ್ನು ಸರ್ಕಾರ 5 ಲಕ್ಷ ರೂ.ಗೆ ಅಧಿಕಗೊಳಿಸಬಹುದು ಎಂದು ತಜ್ಞರು ನಿರೀಕ್ಷಿಸಿದ್ದಾರೆ.

Translate »