ಜನರ ತಲೆ ಮೇಲೆ ಚಪ್ಪಡಿ ಎಳೆದ ಕೇಂದ್ರ, ರಾಜ್ಯ: ಸಿದ್ದರಾಮಯ್ಯ ಆಕ್ರೋಶ
News

ಜನರ ತಲೆ ಮೇಲೆ ಚಪ್ಪಡಿ ಎಳೆದ ಕೇಂದ್ರ, ರಾಜ್ಯ: ಸಿದ್ದರಾಮಯ್ಯ ಆಕ್ರೋಶ

June 11, 2021

ಬೆಂಗಳೂರು, ಜೂ.10(ಕೆಎಂಶಿ)-ವಿದ್ಯುತ್, ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲ ದರವನ್ನು ಮನಸ್ಸೋ ಇಚ್ಛೆ ಏರಿಸುವ ಮೂಲಕ ಕೊರೊನಾದಿಂದ ಸಂಕಷ್ಟದಲ್ಲಿರುವ ಜನರ ತಲೆಯ ಮೇಲೆ ಕೇಂದ್ರ ಮತ್ತು ರಾಜ್ಯ ಸರ್ಕಾರ ಚಪ್ಪಡಿ ಎಳೆದಿವೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಮ್ಮ ನಿವಾಸದಲ್ಲಿಂದು ಸುದ್ದಿಗಾರರೊಂದಿಗೆ ಮಾತ ನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿಯವರು ಹೇಳುವ ಅಚ್ಛೇ ದಿನ್ ಇದೇ ಏನು? ಎಂದು ಪ್ರಶ್ನಿಸಿ ದರು. ವಿದ್ಯುತ್ ದರವನ್ನು ರಾಜ್ಯ ಸರ್ಕಾರ ಕಳೆದ ಒಂದು ವರ್ಷದಲ್ಲಿ ಶೇ.30ರಷ್ಟು ಏರಿಸಿದೆ. ಇದು ರಾಜ್ಯದ ಇತಿಹಾಸದಲ್ಲಿಯೇ ಇಲ್ಲ. ಮನಮೋಹನಸಿಂಗ್ ಅವರು ಕೇವಲ ಒಂದು ರೂ. ದರ ಏರಿಕೆ ಮಾಡಿ ದಾಗ ಮೋದಿಯವರು ಗುಜರಾತ್ ಮುಖ್ಯಮಂತ್ರಿ ಯಾಗಿ ತೀವ್ರ ವಿರೋಧ ಮಾಡಿದ್ದರು. ಬಿಜೆಪಿಯವರು ದೇಶವ್ಯಾಪಿ ಪ್ರತಿಭಟನೆ ನಡೆಸಿದ್ದರು. ಈಗ ನಿತ್ಯವೂ ದರ ಏರಿಕೆಯಾಗುತ್ತಲೇ ಇದೆ. ಕರ್ನಾಟಕ ಮತ್ತು ಬೇರೆ ರಾಜ್ಯಗಳಲ್ಲಿ ಪೆಟ್ರೋಲ್ ದರ ನೂರು ರೂ. ದಾಟಿದೆ. ಇದಕ್ಕೆ ನಷ್ಟದ ನೆಪ ಹೇಳುತ್ತಾರೆ.

ರಾಜ್ಯದಲ್ಲಿ ಉತ್ಪಾದನೆ ಹೆಚ್ಚಾಗಿದ್ದರೂ ಕೇಂದ್ರ ಸರ್ಕಾರ ಮತ್ತು ಅದಾನಿ ಕಂಪನಿಯಿಂದ ಹೆಚ್ಚು ದರಕ್ಕೆ ವಿದ್ಯುತ್ ಖರೀದಿ ಮಾಡಲಾಗುತ್ತಿದೆ. ಭ್ರಷ್ಟಾಚಾರ, ದುರಾಡಳಿತ ಕಡಿಮೆ ಮಾಡಿ. ದಕ್ಷತೆ ಹೆಚ್ಚಿಸಿದರೆ ದರ ಕಡಿಮೆ ಮಾಡ ಬಹುದು. ಕೊರೊನಾದಂಥ ಕೆಟ್ಟ ಪರಿಸ್ಥಿತಿಯಲ್ಲಿ ವಿದ್ಯುತ್ ದರ ಏರಿಕೆ ಮಾಡಿರುವುದು ತೀವ್ರ ಖಂಡನೀಯ.

ಮನಮೋಹನಸಿಂಗ್ ಅವರು ಪ್ರಧಾನಿಯಾಗಿ ದ್ದಾಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಛಾ ತೈಲ ಬ್ಯಾರಲ್‍ಗೆ 125 ಡಾಲರ್ ಇತ್ತು. ಆಗ ಪೆಟ್ರೋಲ್, ಡೀಸೆಲ್ ದರವನ್ನು ಈ ಪ್ರಮಾಣದಲ್ಲಿ ಏರಿಕೆ ಮಾಡಿ ರಲಿಲ್ಲ. ಮೋದಿಯವರು ಪ್ರಧಾನಿಯಾದ ಬಳಿಕ ಒಂದು ಹಂತದಲ್ಲಿ ಕಚ್ಛಾ ತೈಲ ದರ ಬ್ಯಾರಲ್‍ಗೆ 46-47 ಡಾಲರ್‍ಗೆ ಕುಸಿದಿತ್ತು. ಆಗ ಗ್ರಾಹಕರಿಗೆ ಕಡಿಮೆ ಬೆಲೆ ಯಲ್ಲಿ ಕೊಡಲಿಲ್ಲ. ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ಅಬಕಾರಿ ಸುಂಕ 2013-14ರಲ್ಲಿ 3.45 ರೂ. ಹಾಗೂ 9.25 ರೂ. ಇತ್ತು. ಈಗ ಪೆಟ್ರೋಲ್ ಮಾರಾಟದ ಮೇಲೆ 31.84 ರೂ. ಡೀಸೆಲ್ ಮಾರಾ ಟದ ಮೇಲೆ, 32.98 ರೂ. ಹೆಚ್ಚಿಸಲಾಗಿದೆ. ರಾಜ್ಯ ಸರ್ಕಾರ ಪೆಟ್ರೋಲ್ ಮಾರಾಟದ ಮೇಲೆ ಶೇ.35, ಡೀಸೆಲ್ ಮಾರಾಟದ ಮೇಲೆ ಶೇ. 24 ತೆರಿಗೆ ವಿಧಿಸು ತ್ತಿದೆ. ಅಡುಗೆ ಅನಿಲದ ಸಿಲಿಂಡರ್ ಬೆಲೆ 414 ರೂ.ಗಳಿಂದ 850 ರೂ.ಗಳಿಗೆ ಏರಿಕೆಯಾಗಿದೆ. ಇದು ಲೂಟಿ ಅಲ್ಲದೇ ಮತ್ತೇನು? ಇದೇನಾ ಅಚ್ಛೇ ದಿನ್?

ಬೆಲೆ ಏರಿಕೆ ಹಿನ್ನೆಲೆಯಲ್ಲಿ ಎಐಸಿಸಿ ಸೂಚನೆ ಮೇರೆಗೆ ರಾಜ್ಯದಲ್ಲಿ 5 ದಿನಗಳ ಕಾಲ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ. ಕೊರೊನಾದಿಂದ ಸುಮ್ಮನಿದ್ದಾರೆ. ಲಾಕ್‍ಡೌನ್ ಇರುವ ಕಾರಣ ಹೊರಗೆ ಬಂದು ಪ್ರತಿಭಟನೆ ಮಾಡು ವುದಿಲ್ಲ ಎಂದು ಹೇಳಿ ಜನರ ತಲೆಯ ಮೇಲೆ ಚಪ್ಪಡಿ ಎಳೆಯುವ ಕೆಲಸವನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿದೆ. ಪೆಟ್ರೋಲ್, ಡೀಸೆಲ್ ದರ ಏರಿಕೆಯಿಂ ದಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿದೆ. ದೇವಾಲಯಗಳಿಗೆ ನೀಡುವ ತಸ್ತೀಕ್ ಹಣ, ಮಸೀದಿ, ಚರ್ಚ್ ಹಾಗೂ ಗುರುದ್ವಾರಗಳಿಗೆ ನೀಡುತ್ತಿರುವ ಅನು ದಾನವನ್ನು ಮುಂದುವರಿಸಬೇಕು. ಜಾತಿ, ಧರ್ಮದ ಆಧಾರದ ಮೇಲೆ ವಿಂಗಡಣೆ ಮಾಡಬಾರದು.

ಮನ್‍ಮುಲ್ ಹಗರಣದ ತನಿಖೆಗೆ ಆಗ್ರಹ: ಮಂಡ್ಯ ಜಿಲ್ಲಾ ಹಾಲು ಒಕ್ಕೂಟದಲ್ಲಿ ನಡೆದಿರುವ ಹಗರಣದ ಬಗ್ಗೆ ಸಹಕಾರ ಸಚಿವರು ಹಾಗೂ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಜೊತೆ ಮಾತನಾಡಿ ತನಿಖೆಗೆ ಒತ್ತಾಯ ಮಾಡಿದ್ದೇನೆ. ತನಿಖೆಗೂ ಮೊದಲು ಇಡೀ ಒಕ್ಕೂಟವನ್ನು ಸೂಪರ್ ಸೀಡ್ ಮಾಡಬೇಕಾಗುತ್ತದೆ.

ಶಾಸಕರ ಅನುದಾನದಲ್ಲಿ ಕೊರೊನಾ ಲಸಿಕೆ ಖರೀದಿ ಮಾಡಿ ಸಾರ್ವಜನಿಕರಿಗೆ ಉಚಿತವಾಗಿ ವಿತರಣೆ ಮಾಡಿದರೆ ಅದು ಪಕ್ಷದ ಕಾರ್ಯಕ್ರಮ ಹೇಗಾಗು ತ್ತದೆ. ಅದು ನನಗೆ ಪತ್ರ ಬರೆದಿರುವ ಸಚಿವ ನಾರಾ ಯಣಗೌಡರ ಕಲ್ಪನೆ. ಲಸಿಕೆ ನೀಡುವಲ್ಲಿ ಸರ್ಕಾರ ವಿಫಲವಾಗಿರುವುದರಿಂದ ನಾವು ಆ ಕೆಲಸ ಮಾಡಲು ಮುಂದಾಗಿದ್ದೆವು. ಬಿಜೆಪಿ ಶಾಸಕರೂ ತಮ್ಮ ಕ್ಷೇತ್ರದ ಅನುದಾನದಲ್ಲಿ ಲಸಿಕೆ ಖರೀದಿ ಮಾಡಿ ಜನರಿಗೆ ಕೊಡಲಿ. ಬೇಡ ಎಂದವರು ಯಾರು ? ಶಾಸಕರ ಕ್ಷೇತ್ರಗಳಿಗೆ ಬಿಡುಗಡೆ ಮಾಡುವ ಅನುದಾನದಲ್ಲಿ ಶೇ.50ರಷ್ಟನ್ನು ಕೊರೊನಾ ನಿಯಂತ್ರಣಕ್ಕೆ ಬಳಕೆ ಮಾಡುವಂತೆ ಸರ್ಕಾರವೇ ಹೇಳಿದೆ. ಶಾಸಕರು ತಮ್ಮ ಸ್ವಂತ ಹಣವನ್ನು ಲಸಿಕೆ ಖರೀದಿ ಮಾಡಲಿ ಎಂದು ನಾರಾಯಣಗೌಡರು ಹೇಳಿದ್ದಾರೆ. ಶಾಸಕರು ಸ್ವಂತ ಖರ್ಚಿನಿಂದ ಆಂಬುಲೆನ್ಸ್, ಮೆಡಿಸಿನ್ ಕಿಟ್ ಮತ್ತಿತರ ಸಾಮಗ್ರಿಗಳನ್ನು ನೀಡುತ್ತಿದ್ದಾರೆ. ಈ ಬಗ್ಗೆ ನಮಗೆ ಸಚಿವರಿಂದ ಪಾಠ ಅನಗತ್ಯ.

Translate »