ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಇಂದಿನಿಂದ ಸಿಇಟಿ
ಮೈಸೂರು

ವೃತ್ತಿಪರ ಕೋರ್ಸ್ ಪ್ರವೇಶಕ್ಕೆ ಇಂದಿನಿಂದ ಸಿಇಟಿ

June 16, 2022

ಬೆಂಗಳೂರು,ಜೂ.೧೫(ಕೆಎAಶಿ)-ಎAಜಿನಿಯರಿAಗ್, ವೈದ್ಯಕೀಯ, ಕೃಷಿ, ಪಶುವೈದ್ಯಕೀಯ, ಫಾರ್ಮಸಿ ಮುಂತಾದ ವೃತ್ತಿಪರ ಕೋರ್ಸುಗಳಿಗೆ ನಾಳೆ(ಜೂ.೧೬), ನಾಳಿದ್ದು (ಜೂ.೧೭)ರಂದು ಸಿಇಟಿ (ಸಾಮಾನ್ಯ ಪ್ರವೇಶ ಪರೀಕ್ಷೆ) ಮತ್ತು ಜೂ. ೧೮ರಂದು ಹೊರ ನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಪರೀಕ್ಷೆ ನಡೆಯಲಿದೆ. ಈ ಬಾರಿ ಒಟ್ಟು ೨,೧೬,೫೨೫ ವಿದ್ಯಾರ್ಥಿಗಳು ಸಿಇಟಿ ಬರೆಯಲಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಸಿಇಟಿ ವಿವರಗಳನ್ನು ಪ್ರಕಟಿಸಿದ ಅವರು, ನಾಳೆ (ಜೂ.೧೬)ಬೆಳಗ್ಗೆ ೧೦.೩೦ರಿಂದ ೧೧.೫೦ರವರೆಗೆ ಜೀವಶಾಸ್ತç, ಮಧ್ಯಾಹ್ನ ೨.೩೦ರಿಂದ ೩.೫೦ರವರೆಗೆ ಗಣ ತ ಪರೀಕ್ಷೆಗಳು ನಡೆಯಲಿವೆ. ಜೂ.೧೭ರಂದು ಬೆಳಗ್ಗೆ ಭೌತ ಶಾಸ್ತç, ಮಧ್ಯಾಹ್ನ ರಸಾಯನಶಾಸ್ತç ಪರೀಕ್ಷೆ ಜರುಗಲಿದೆ. ಜೂ.೧೮ರ ಬೆಳಗ್ಗೆ ಹೊರನಾಡು ಮತ್ತು ಗಡಿನಾಡು ಕನ್ನಡಿಗ ವಿದ್ಯಾರ್ಥಿಗಳಿಗೆ ಬೆಂಗಳೂರು, ಬೀದರ್, ಬೆಳಗಾವಿ, ವಿಜಯಪುರ, ಬಳ್ಳಾರಿ ಮತ್ತು ಮಂಗಳೂರುಗಳಲ್ಲಿ ಕನ್ನಡ ಭಾಷಾ ಪರೀಕ್ಷೆ ನಡೆಯಲಿದ್ದು, ಈ ಸಲ ೧,೭೦೮ ವಿದ್ಯಾರ್ಥಿ ಗಳು ಈ ಪರೀಕ್ಷೆ ಬರೆಯುತ್ತಿದ್ದಾರೆ ಎಂದರು. ವಿದ್ಯಾರ್ಥಿ ಗಳು ಪಾಲಿಸಬೇಕಾದ ನಿಯಮ ಮತ್ತು ಅವರಿಗೆ ವಿಧಿಸಿ ರುವ ನಿರ್ಬಂಧಗಳ ಬಗ್ಗೆಯೂ ಮಾಹಿತಿ ನೀಡಿದರು. ಈ ಬಾರಿ ಒಟ್ಟು ೪೮೬ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, ಈ ಪೈಕಿ ೮೭ ಕೇಂದ್ರಗಳು ಬೆಂಗಳೂರಿನಲ್ಲಿವೆ. ಯಾವುದೇ ಅಕ್ರಮಕ್ಕೆ ಅವಕಾಶ ನೀಡಬಾರದೆಂಬ ಉದ್ದೇಶದಿಂದ ಈ ಬಾರಿ ಪ್ರತಿಯೊಂದು ಕೇಂದ್ರದ ಪರೀಕ್ಷಾ ಪ್ರಕ್ರಿಯೆಯನ್ನೂ ಸಮಗ್ರವಾಗಿ ವಿಡಿಯೋ ಚಿತ್ರೀಕರಣ ಮಾಡಲಾಗುವುದು. ಜತೆಗೆ ಪ್ರಶ್ನೆಪತ್ರಿಕೆ ಪೂರೈಕೆ ಇತ್ಯಾದಿಗಳನ್ನು ಹದ್ದಿನ ಕಣ ್ಣನ ಪಹರೆಯಲ್ಲಿ ನಡೆಸಲಾಗು ವುದು ಎಂದರು. ಸಿಇಟಿ ಪರೀಕ್ಷೆಯಲ್ಲಿ ಪ್ರಶ್ನೆ ಮತ್ತು ಉತ್ತರಗಳನ್ನು ಇಂಗ್ಲಿಷ್ ಹಾಗೂ ಕನ್ನಡ ಎರಡರಲ್ಲೂ ಕೊಡಲಾಗುವುದು ಎಂದು ಮಾಹಿತಿ ನೀಡಿದರು. ಪ್ರತಿಯೊಂದು ಕೇಂದ್ರಕ್ಕೂ ಸಹಾಯಕ ಆಯುಕ್ತರ ದರ್ಜೆಯ ಅಧಿಕಾರಿಯೊಬ್ಬರನ್ನು ಪರೀಕ್ಷಾ ವೀಕ್ಷಕರಾಗಿ ನೇಮಿಸುವಂತೆ ಡಿಸಿಗಳಿಗೆ ಸೂಚಿಸಲಾಗಿದೆ. ಒಟ್ಟಾರೆ, ೪೮೬ ವೀಕ್ಷಕರು, ೯೭೨ ವಿಶೇಷ ತಪಾಸಣಾ ದಳದ ಸದಸ್ಯರು, ೪೮೬ ಪ್ರಶ್ನೆಪತ್ರಿಕೆ ಪಾಲಕರು, ೯,೬೦೦ ಕೊಠಡಿ ಮೇಲ್ವಿ ಚಾರಕರು ಮತ್ತು ೨೦ ಸಾವಿರಕ್ಕೂ ಹೆಚ್ಚು ಅಧಿಕಾರಿಗಳನ್ನು ಸಿಇಟಿ ಪರೀಕ್ಷಾ ಪ್ರಕ್ರಿಯೆ ಯನ್ನು ಸುಗಮವಾಗಿ ನಡೆಸಲು ಕರ್ತವ್ಯಕ್ಕೆ ನಿಯೋಜಿಸಲಾಗಿದೆ ಎಂದು ವಿವರಿಸಿದರು. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್.ರಮ್ಯ ಪತ್ರಿಕಾಗೋಷ್ಠಿಯಲ್ಲಿ ಇದ್ದರು.

Translate »