ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ
ಚಾಮರಾಜನಗರ

ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರ ಆಯ್ಕೆ

July 22, 2018

ಗುಂಡ್ಲುಪೇಟೆ: ಇಲ್ಲಿನ ಟೌನ್ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಮುಖಂಡ ಪಿ.ಸುರೇಂದ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಪಕ್ಷದ ಆಂತರಿಕ ಒಪ್ಪಂದದಂತೆ ಈ ಹಿಂದೆ ಇದ್ದ ನಾಗರಾಜನಾಯ್ಕ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ಹಿನ್ನೆಲೆ ಯಲ್ಲಿ ತೆರವಾದ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆಯಿತು. ಪಿ.ಸುರೇಂದ್ರ ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿ ಕಾರ್ಯ ನಿರ್ವಹಿ ಸಿದ ಸಹಕಾರ ಅಭಿವೃದ್ಧಿ ಅಧಿಕಾರಿ ರಶೀದ್ ಬೇಗ್ ಘೋಷಿಸಿದರು.

ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಪಿ.ಸುರೇಂದ್ರ ಅವರನ್ನು ಕಾಂಗ್ರೆಸ್ ಯುವ ಮುಖಂಡ ಎಚ್.ಎಂ.ಗಣೇಶಪ್ರಸಾದ್ ಅಭಿನಂದಿಸಿದರು. ಈ ಸಂದರ್ಭದಲ್ಲಿ ಚಾಮುಲ್ ನಿರ್ದೇಶಕ ಎಚ್.ಎಸ್.ನಂಜುಂಡ ಪ್ರಸಾದ್, ಪುರಸಭೆ ಸದಸ್ಯ ಅಂಗಡಿ ಶಿವ ಕುಮಾರ್, ಮುಖಂಡರಾದ ಪಿ.ಚಂದ್ರಪ್ಪ, ಜಿ.ಕೆ.ನಾಜಿಮುದ್ದೀನ್, ಎಲ್.ಸುರೇಶ್, ನಾಗರಾಜನಾಯಕ್, ಎಚ್.ಎನ್.ಬಸವ ರಾಜು, ಎಸ್‍ಆರ್‍ಎಸ್ ರಾಜು, ವೆಂಕ ಟೇಶ್, ಮಂಜುನಾಥ್, ಚಂದ್ರು, ಶಿವಣ್ಣ, ಬಿ.ಕುಮಾರಸ್ವಾಮಿ ಸೇರಿದಂತೆ ಆಡಳಿತ ಮಂಡಳಿ ಪದಾಧಿಕಾರಿಗಳು, ಮುಖಂಡರು ಮತ್ತು ಕಾರ್ಯಕರ್ತರು ಹಾಜರಿದ್ದರು.

Translate »