ಸೌಲಭ್ಯಗಳು ಪೋಲಾಗದಂತೆ ಎಚ್ಚರ ವಹಿಸಲು ಸೂಚನೆ
ಚಾಮರಾಜನಗರ: ಗ್ರಾಮೀಣ ಭಾಗಗಳಲ್ಲಿ ವಿದ್ಯುತ್, ನೀರು ಇತರೆ ಪ್ರಮುಖ ಸೌಲಭ್ಯಗಳು ಪೋಲಾಗದಂತೆ ಅಧಿಕಾರಿಗಳು ಹೆಚ್ಚು ಗಮನ ನೀಡಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಿವಮ್ಮ ಸೂಚನೆ ನೀಡಿದರು.ನಗರದ ಜಿಲ್ಲಾ ಪಂಚಾಯಿತಿ ಸಭಾಂಗ ಣದಲ್ಲಿ ಗುರುವಾರ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಹಗಲು ಹೊತ್ತಿ ನಲ್ಲಿಯೂ ಬೀದಿ ದೀಪಗಳು ಬೆಳಗುತ್ತಿ ರುವುದನ್ನು ಗಮನಿಸಿದ್ದೇನೆ. ಹೀಗೆ ವಿದ್ಯುತ್‍ನ್ನು ನಿರ್ಲಕ್ಷ್ಯ ದಿಂದ ಪೋಲು ಮಾಡಬಾರದು. ಈ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು ಎಂದು ತಿಳಿಸಿ ದರು. ಉಪಾಧ್ಯಕ್ಷ ಜೆ.ಯೋಗೀಶ್ ಮಾತ ನಾಡಿ, ವಿದ್ಯುತ್ ಕಂಬಗಳಿಗೆ ವಿದ್ಯುತ್ ದೀಪ ನಿಯಂತ್ರಣದ ಸ್ವಿಚ್ ಅಳವಡಿಸ ಲಾಗಿರುತ್ತದೆ. ಆಯಾ ಗ್ರಾಮ ಪಂಚಾ ಯಿತಿ ಸಿಬ್ಬಂದಿ ನಿರ್ವಹಣೆ ಮಾಡುವ ವೇಳೆ ಗಮನಿಸಬೇಕಾಗುತ್ತದೆ ಎಂದರು.
ಗಂಗಾ ಕಲ್ಯಾಣ ಯೋಜನೆಯಡಿ ಕೊರೆ ಯಲಾಗಿರುವ ಕೊಳವೆ ಬಾವಿಗಳಿಗೆ ತ್ವರಿತವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು. ವಿಳಂಬವಾಗಿ ವಿದ್ಯುತ್ ಸಂಪರ್ಕ ನೀಡು ವುದರಿಂದ ಫಲಾನುಭವಿಗಳಿಗೆ ತೊಂದರೆ ಯಾಗುತ್ತಿದೆ. ನಿಗಮದ ಅಧಿಕಾರಿಗಳು ವಿದ್ಯುತ್ ಸರಬರಾಜು ನಿಗಮದ ಇಲಾಖೆಯವ ರೊಂದಿಗೆ ಸಮನ್ವಯ ಸಾಧಿಸಿ ಶೀಘ್ರ ಪರಿ ಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.
ವಿವಿಧ ಯೋಜನೆಗಳಲ್ಲಿ ಆಯ್ಕೆಯಾಗಿ ರುವ ಫಲಾನುಭವಿಗಳಿಗೆ ಬ್ಯಾಂಕ್‍ಗಳಲ್ಲಿ ಸಾಲ ನೀಡಲಾಗುತ್ತಿಲ್ಲ. ಬ್ಯಾಂಕ್ ಅಧಿ ಕಾರಿಗಳು ಬಡವರಿಗೆ ಸ್ಪಂದಿಸದೇ ಇದ್ದರೆ ಹೇಗೆ? ಎಂದು ಅಸಮಾಧಾನ ವ್ಯಕ್ತಪಡಿ ಸಿದರು. ಮುಖ್ಯ ಕಾರ್ಯನಿರ್ವಹಣಾ ಧಿಕಾರಿ ಡಾ.ಕೆ.ಹರೀಶ್‍ಕುಮಾರ್ ಮಾತ ನಾಡಿ, ಗಂಗಾ ಕಲ್ಯಾಣ ಯೋಜನೆಯಡಿ ಕೊರೆಯಲಾಗಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿ ಮಾಹಿತಿ ನೀಡು ವಲ್ಲಿ ತಾಳೆಯಾಗುತ್ತಿಲ್ಲ. ಅನುಷ್ಠಾನ ನಿಗ ಮಗಳು ಹಾಗೂ ವಿದ್ಯುತ್ ಸರಬರಾಜು ನಿಗಮದ ಅಧಿಕಾರಿಗಳ ಪ್ರತ್ಯೇಕ ಸಭೆ ಕರೆಯಲಾಗುವುದು. ಈ ಸಭೆಯಲ್ಲಿ ಗಂಗಾ ಕಲ್ಯಾಣ ಯೋಜನೆಗೆ ಸಂಬಂಧಪಟ್ಟ ಅರ್ಜಿದಾರರ ವಿವರಗಳನ್ನು ಸಮರ್ಪಕ ವಾಗಿ ಸಲ್ಲಿಸಬೇಕು ಎಂದು ತಾಕೀತು ಮಾಡಿದರು. ಸಭೆಯಲ್ಲಿ ಕೃಷಿ ಮತ್ತು ಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷ ಚನ್ನಪ್ಪ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮರಗದಮಣಿ, ಸಾಮಾ ಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷೆ ಉಮಾವತಿ, ಮುಖ್ಯ ಯೋಜನಾಧಿಕಾರಿ ಪದ್ಮಾಶೇಖರ್ ಪಾಂಡೆ ಹಾಜರಿದ್ದರು.
ಫಲಾನುಭವಿಗಳಿಗೆ ಸಾಲ ಸೌಲಭ್ಯ ಸೇರಿದಂತೆ ಇತರೆ ಸವಲತ್ತುಗ ಳನ್ನು ತ್ವರಿತಗತಿಯಲ್ಲಿ ತಲುಪಿಸುವ ನಿಟ್ಟಿನಲ್ಲಿ ಆದ್ಯತೆ ನೀಡುವಂತೆ ಬ್ಯಾಂಕ್ ಗಳಿಗೆ ಲೀಡ್‍ಬ್ಯಾಂಕ್ ವ್ಯವಸ್ಥಾಪ ಕರು ನಿರ್ದೇಶನ ನೀಡಬೇಕು.
-ಡಾ.ಕೆ.ಹರೀಶ್‍ಕುಮಾರ್
ಜಿಪಂ ಸಿಇಓ