ಗುಂಡ್ಲುಪೇಟೆಯಲ್ಲಿ ಚಾಮುಂಡೇಶ್ವರಿ ಉತ್ಸವ
ಚಾಮರಾಜನಗರ

ಗುಂಡ್ಲುಪೇಟೆಯಲ್ಲಿ ಚಾಮುಂಡೇಶ್ವರಿ ಉತ್ಸವ

August 13, 2018

ಗುಂಡ್ಲುಪೇಟೆ: ಪಟ್ಟಣದಲ್ಲಿ ಭಾವಸಾರ್ ಕ್ಷತ್ರೀಯ ಮಂಡಳಿ ಆಯೋಜಿಸಿದ್ದ ಶ್ರೀ ಚಾಮುಂಡೇ ಶ್ವರಿ ದೇವಿಯ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ವಿಶೇಷ ಅಲಂಕೃತ ವಾಹನ ದಲ್ಲಿ ತಾಯಿ ಚಾಮುಂಡೇಶ್ವರಿ ದೇವಿಯ ಮೆರವಣಿಗೆಯು ಚಂಡೆ ಮದ್ದಳೆ ಮತ್ತು ಮಂಗಳವಾದ್ಯಗಳೊಂದಿಗೆ ಅದ್ದೂರಿ ಯಾಗಿ ನೆರವೇರಿತು. ಮೆರವಣಿಗೆಯುದ್ದಕ್ಕೂ ಭಕ್ತಾದಿಗಳು ದೇವಿಗೆ ಪೂಜೆ ಸಲ್ಲಿಸುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ಮೆರವಣಿಗೆಯ ಹಿನ್ನೆಲೆಯಲ್ಲಿ ಪಟ್ಟಣದ ಕಿತ್ತೂರು ರಾಣಿ ಚನ್ನಮ್ಮ ರಸ್ತೆ ಮತ್ತು ಚಾಮುಂಡೇಶ್ವರಿ ದೇವಸ್ಥಾನವನ್ನು ತಳಿರು ತೋರಣ ಮತ್ತು ವಿದ್ಯುತ್ ದೀಪಾಂಕಾರದಿಂದ ಸಿಂಗರಿಸಲಾಗಿತ್ತು.
ಮೆರವಣಿಗೆಯಲ್ಲಿ ಭಾವಸಾರ್ ಕ್ಷತ್ರೀಯ ಮಂಡಳಿ ಪದಾಧಿಕಾರಿಗಳು ಮತ್ತು ಮುಖಂಡರು, ಯುವಕರು ಹಾಗೂ ಭಕ್ತಾದಿಗಳು ಭಾಗವಹಿಸಿದ್ದರು

Translate »