ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಚಾಮುಂಡೇಶ್ವರಿ ಕ್ಷೇತ್ರದ ‘ಗ್ರಾಮ ಜನಾಧಿಕಾರ’ ಸಮಾವೇಶ
ಮೈಸೂರು

ಸಿದ್ದರಾಮಯ್ಯ ನೇತೃತ್ವದಲ್ಲಿ ನಾಳೆ ಚಾಮುಂಡೇಶ್ವರಿ ಕ್ಷೇತ್ರದ ‘ಗ್ರಾಮ ಜನಾಧಿಕಾರ’ ಸಮಾವೇಶ

December 17, 2020

ಮೈಸೂರು,ಡಿ.16(ಆರ್‍ಕೆಬಿ)- ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಚಾಮುಂ ಡೇಶ್ವರಿ ವಿಧಾನಸಭಾ ಕ್ಷೇತ್ರದ ಪಕ್ಷದ ಬೆಂಬ ಲಿತ ಅಭ್ಯರ್ಥಿಗಳ ಗೆಲುವಿಗಾಗಿ ಡಿ.18ರಂದು ಬೆಳಿಗ್ಗೆ 11 ಗಂಟೆಗೆ ಮೈಸೂರಿನ ಕಾಲಭೈರ ವೇಶ್ವರ ಕಲ್ಯಾಣ ಮಂಟಪದ ಎದುರಿನ ಮೈದಾನದಲ್ಲಿ ‘ಗ್ರಾಮ ಜನಾಧಿಕಾರ’ ಸಮಾ ವೇಶ ಏರ್ಪಡಿಸಲಾಗಿದೆ ಎಂದು ಮೈಸೂರು ಜಿಲ್ಲಾ ಗ್ರಾಮಾಂತರ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧ ವಾರ ಸುದ್ದಿಗೋಷ್ಠಿಯಲ್ಲಿ ಸಮಾವೇಶದ ಮಾಹಿತಿ ನೀಡಿದ ಅವರು, ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಸಮಾವೇಶದ ಅಧ್ಯ ಕ್ಷತೆ ವಹಿಸಲಿದ್ದು, ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು ಭಾಗವಹಿಸಲಿದ್ದಾರೆ ಎಂದರು.

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಪರ್ಯಾಯ ನಾಯಕರನ್ನು ನೇಮಿಸಿ ಎಂಬ ಆಗ್ರಹಕ್ಕೆ ಪ್ರತಿಕ್ರಿಯಿಸಿದ ಜಿಪಂ ಮಾಜಿ ಅಧ್ಯಕ್ಷ ಕೆ.ಮರೀ ಗೌಡ, ಚಾಮುಂಡೇಶ್ವರಿಗೆ ಸಿದ್ದರಾಮಯ್ಯ ಅವರೇ ನಾಯಕರು, ಅವರ ನಾಯಕತ್ವ ದಲ್ಲೇ ಮುಂಬರುವ ಚುನಾವಣೆಯನ್ನೂ ಎದುರಿಸುತ್ತೇವೆ. ಪರ್ಯಾಯ ನಾಯಕರ ಅವಶ್ಯಕತೆಯಿಲ್ಲ. ಸಿದ್ದರಾಮಯ್ಯ ಅವರು ಸೋಲಿನ ಆಘಾತದಿಂದ ಕ್ಷೇತ್ರಕ್ಕೆ ಭೇಟಿ ನೀಡಿಲ್ಲವಷ್ಟೆ ಎಂದು ಹೇಳಿದರು.

ಗ್ರಾಮ ಪಂಚಾಯಿತಿ ಚುನಾವಣೆ ಪಕ್ಷಾ ತೀತವಾಗಿದ್ದು, ಅದರಲ್ಲಿ ಪಕ್ಷದ ನಾಯಕರು ಭಾಗವಹಿಸುವುದು ಸರಿಯಲ್ಲ ಎಂಬ ಶಾಸಕ ಜಿ.ಟಿ.ದೇವೇಗೌಡರ ಹೇಳಿಕೆಗೆ ಪ್ರತಿ ಕ್ರಿಯಿಸಿದ ಅವರು, ಜಿಟಿಡಿ ನುರಿತ ರಾಜ ಕಾರಣಿ, ಏನೇನೋ ಮಾತನಾಡಬಾರದು. ಅವರು ಬಿಜೆಪಿ, ಕಾಂಗ್ರೆಸ್ ನಾಯಕರೊಂ ದಿಗೆ ಆಗಾಗ್ಗೆ ಕಾಣಿಸಿಕೊಳ್ಳುವುದು ಅವರಿಗೆ ಶೋಭೆ ತರುವುದಿಲ್ಲ. ಅವರ ಹೇಳಿಕೆಗಳಿಗೆ ಬೆಲೆಯಿಲ್ಲ ಎಂದರು.

ಈ ಸಂದರ್ಭದಲ್ಲಿ ಜಿಪಂ ಸದಸ್ಯ ಅರುಣ್‍ಕುಮಾರ್, ಕೆಪಿಸಿಸಿ ಸದಸ್ಯ ನರಸೇಗೌಡ, ಮಾಜಿ ಜಿಪಂ ಸದಸ್ಯ ಕಡಕೊಳ ನಾರಾಯಣ, ನಗರ ಕಾಂಗ್ರೆಸ್ ಕಾರ್ಯದರ್ಶಿ ಶಿವಣ್ಣ, ಕೆಪಿಸಿಸಿ ವಕ್ತಾರ ರಾದ ಮಂಜುಳಾ ಮಾನಸ, ಮುಖಂಡ ಹರೀಶ್‍ಗೌಡ ಉಪಸ್ಥಿತರಿದ್ದರು.

Translate »