ಕರ್ನಾಟಕ ಸೇರಿ ಹಲವು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ
ಮೈಸೂರು

ಕರ್ನಾಟಕ ಸೇರಿ ಹಲವು ರಾಜ್ಯಗಳ ಬಿಜೆಪಿ ಅಧ್ಯಕ್ಷರ ಬದಲಾವಣೆ

June 4, 2019

ನವದೆಹಲಿ: ಇತ್ತೀಚೆಗೆ ಮುಕ್ತಾಯಗೊಂಡ ಲೋಕಸಭೆ ಮತ್ತು ಕೆಲವು ರಾಜ್ಯಗಳ ವಿಧಾನಸಭಾ ಚುನಾ ವಣೆಯ ಬಳಿಕ ಕೆಲವು ರಾಜ್ಯಗಳಲ್ಲಿ ಬಿಜೆಪಿ, ರಾಜ್ಯಾಧ್ಯಕ್ಷರನ್ನು ಬದಲಾವಣೆ ಮಾಡುವ ಮೂಲಕ ಪಕ್ಷದ ಮಟ್ಟದಲ್ಲಿ ಭಾರಿ ಬದಲಾವಣೆಗೆ ಚಾಲನೆ ನೀಡಲಿದೆ.

ಇಷ್ಟರಲ್ಲೇ ಕರ್ನಾಟಕ, ಉತ್ತರ ಪ್ರದೇಶ, ಬಿಹಾರ, ತೆಲಂಗಾಣ ಮತ್ತು ಮಹಾ ರಾಷ್ಟ್ರ ರಾಜ್ಯ ಘಟಕದ ಅಧ್ಯಕ್ಷರ ಬದಲಾ ವಣೆ ಆಗಲಿದೆ ಎಂದು ಪಕ್ಷದ ಮೂಲ ಗಳು ತಿಳಿಸಿವೆ. ಎಲ್ಲಕ್ಕಿಂತ ಮುಖ್ಯವಾಗಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರು ಕೇಂದ್ರ ಸಚಿವ ಸಂಪುಟ ಸೇರಿದ್ದು ಒಬ್ಬರಿಗೆ ಒಂದೇ ಹುದ್ದೆ ನಿಯಮದ ಪ್ರಕಾರ ರಾಷ್ಟ್ರೀಯ ಬಿಜೆಪಿ ಅಧ್ಯಕ್ಷರ ನೇಮ ಕಾತಿಯು ಬಹಳ ತ್ವರಿತಗತಿಯಲ್ಲಿ ಆಗ ಬೇಕಿದೆ. ಬಿಜೆಪಿ ಮೂಲಗಳ ಪ್ರಕಾರ ಮಾಜಿ ಕೇಂದ್ರ ಸಚಿವ ಜೆ.ಪಿ.ನಡ್ಡಾ ಹೊಸ ರಾಷ್ಟ್ರೀಯ ಅಧ್ಯಕ್ಷರಾಗಲಿದ್ದಾರೆ ಎಂಬ ಮಾತು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿದೆ.

ಕರ್ನಾಟಕದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಅವರ ಮೂರು ವರ್ಷಗಳ ಅಧಿಕಾರವಧಿ ಈಗಾಗಲೇ ಮುಗಿದು ಹೋಗಿದೆ. ಮೇಲಾಗಿ ಅವರು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

ಈಗ ಪ್ರಮುಖವಾಗಿ ಯುಪಿ, ಬಿಹಾರ ತೆಲಂಗಾಣ ಮತ್ತು ಮಹಾರಾಷ್ಟ್ರ ರಾಜ್ಯಗಳ ಬಿಜೆಪಿ ರಾಜ್ಯ ಅಧ್ಯಕ್ಷರುಗಳು ಲೋಕಸಭಾ ಸದಸ್ಯರಾಗಿ ನೇಮಕವಾಗಿರುವ ಹಿನ್ನೆಲೆಯಲ್ಲಿ ಆ ರಾಜ್ಯಗಳಲ್ಲಿ ಅಧ್ಯಕ್ಷರ ಬದಲಾವಣೆ ಮಾಡಬೇಕಿದೆ. ಮತ್ತೆ ಕೆಲವರು ಜನಪ್ರತಿನಿಧಿಯ ಜೊತೆಗೆ ಪಕ್ಷದ ಸಂಘಟನೆಯಲ್ಲಿ ಹುದ್ದೆಗಳನ್ನು ಹೊಂದಿದ್ದು ಅವರನ್ನು ಬದಲಾವಣೆ ಮಾಡಲು ಪಕ್ಷದ ಮುಂದಾಗಿದೆ. ಮತ್ತೆ ಕೆಲವುರಾಜ್ಯಗಳಲ್ಲಿ ಈ ವರ್ಷದ ಕೊನೆಯ ವೇಳೆಗೆ ವಿಧಾನಸಭಾ ಚುನಾವಣೆ ನಡೆಯುವ ಕಾರಣ ಬಹಳ ತ್ವರಿತವಾಗಿ ರಾಜ್ಯ ಘಟಕದ ಅಧ್ಯಕ್ಷರನ್ನು ನೇಮಕ ಮಾಡಬೇಕಿದೆ. ಇದೇ ಕಾರಣದಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷದ ಮಟ್ಟದಲ್ಲಿ ಮಹತ್ವದ ಬದಲಾವಣೆ ಮಾಡಲಿದೆ ಎಂದು ಹೇಳಲಾಗುತ್ತಿದೆ.

Translate »