ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು
ಮೈಸೂರು

ಸಾಮಾಜಿಕ ಜಾಲತಾಣಗಳ ಮೇಲೆ ಚು.ಆಯೋಗ ಕಣ್ಗಾವಲು

March 22, 2019

ಬೆಂಗಳೂರು: ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆ ಆರಂಭವಾಗಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಫೇಸ್‍ಬುಕ್, ವಾಟ್ಸಪ್, ಟ್ವಿಟರ್, ಗೂಗಲ್, ಇನ್ಸ್ಟ್ರಾಗ್ರಾಮ್, ಶೇರ್ ಚಾಟ್ ಮತ್ತಿತರ ಸಾಮಾಜಿಕ ಜಾಲತಾಣಗಳ ಮೇಲೆ ಕಣ್ಣಿಡುವಂತೆ ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ನಾಮಪತ್ರ ಸಲ್ಲಿಸುವಾಗ ಪ್ರತಿಯೊಬ್ಬ ಅಭ್ಯರ್ಥಿಯೂ ತಮ್ಮ ಸಾಮಾಜಿಕ ಮಾಧ್ಯಮಗಳ ಖಾತೆಗಳ ಬಗ್ಗೆಯೂ ಮಾಹಿತಿ ನೀಡುವುದನ್ನು ಈ ಬಾರಿ ಕಡ್ಡಾಯಗೊಳಿಸಲಾಗಿದೆ. ಇವುಗಳ ಮೇಲೆ ಸಾಮಾಜಿಕ ಮಾಧ್ಯಮಗಳ ಮೇಲೆ ನಿಗಾ ಇಡುವ ವಿಚಕ್ಷಣಾ ದಳ ಕಣ್ಣಿಟ್ಟು ಕಾರ್ಯನಿರ್ವಹಿಸುತ್ತಿದೆ. ನವದೆಹಲಿ ಯಲ್ಲಿ ಕೇಂದ್ರ ಚುನಾವಣಾ ಆಯೋಗ ಸಹ ಸಾಮಾಜಿಕ ಮಾಧ್ಯಮ ವೇದಿಕೆಗಳು, ಇಂಟರ್‍ನೆಟ್ ಮತ್ತು ಮೊಬೈಲ್ ಅಪ್ಲಿಕೇಶನ್ ಆಫ್ ಇಂಡಿಯಾದೊಂದಿಗೆ ಬುಧವಾರ ಮಹತ್ವದ ಸಭೆ ನಡೆಸಿದ್ದು, ಈ ಸಾಮಾಜಿಕ ಮಾಧ್ಯಮಗಳು ಸ್ವಯಂ ನಿಯಂತ್ರಣಕ್ಕೆ ಒಳಪಡುವುದಾಗಿ ಆಯೋಗಕ್ಕೆ ಭರವಸೆ ನೀಡಿವೆ. ಕೇಂದ್ರ ಚುನಾವಣಾ ಆಯೋಗ ಸಹ ಎಲ್ಲಾ ರಾಜ್ಯಗಳಿಗೆ ಸ್ಪಷ್ಟ ಸೂಚನೆ ರವಾನಿಸಿದ್ದು, ಈ ಬಾರಿಯ ಚುನಾವಣೆಯಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ಮೂಗುದಾರ ಹಾಕುವಂತೆ ನಿರ್ದೇಶನ ನೀಡಿದೆ. ಇದರ ಜತೆಗೆ ಪ್ರಮುಖ ರಾಜ ಕೀಯ ಪಕ್ಷಗಳ ರಾಜ್ಯ ಘಟಕಗಳು ಆರಂಭಿಸಿರುವ ಸಾಮಾಜಿಕ ಜಾಲತಾಣಗಳ ಮೇಲೂ ವಿಚಕ್ಷಣಾ ದಳ ನಿಗಾವಹಿಸುತ್ತಿವೆ. ಜತೆಗೆ ಅಭ್ಯರ್ಥಿಗಳು, ರಾಜಕೀಯ ಪಕ್ಷಗಳ ಬೆಂಬಲಿಗ ಸಂಘಟನೆಗಳ ಜಾಲತಾಣಗಳನ್ನು ಸಹ ಪರಿಶೀಲನೆಗೊಳಪಡಿ ಸಲಿದೆ. ಅಭ್ಯರ್ಥಿಗಳ ಅಭಿಮಾನಿ ಬಳಗ, ರಾಜಕೀಯ ಪಕ್ಷಗಳನ್ನು ಬೆಂಬಲಿಸುವ ಸಂಘಟನೆಗಳು ತಮ್ಮ ಪಕ್ಷ ಹಾಗೂ ಅಭ್ಯರ್ಥಿಗಳ ಮೇಲಿನ ಅಭಿಮಾನದಿಂದ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ನಡೆಸಬಹುದು. ಆದರೆ ಯಾವುದೇ ಅಭ್ಯರ್ಥಿಯನ್ನು ವೈಯಕ್ತಿಕವಾಗಿ ತೇಜೋವಧೆ ಮಾಡುವಂತಿಲ್ಲ ಎಂದು ಹೆಚ್ಚುವರಿ ಮುಖ್ಯ ಚುನಾವಣಾಧಿಕಾರಿ ಡಾ.ಕೆ.ಜಿ. ಜಗದೀಶ್ ಹೇಳಿದ್ದಾರೆ.

ಅಭ್ಯರ್ಥಿ ಮತ್ತು ರಾಜಕೀಯ ಪಕ್ಷಗಳಿಗಾಗಿ ಆಕರ್ಷಕವಾಗಿ ವಿನ್ಯಾಸಗೊಳಿಸಿದ ಪೆÇೀಸ್ಟರ್‍ಗಳನ್ನು ಹಾಕುವಂತಿಲ್ಲ. ಹಾಗೇನಾದರೂ ಹಾಕಿದರೆ ಅದರ ವಿನ್ಯಾಸಕ್ಕೆ ತಗಲುವ ಖರ್ಚು ವೆಚ್ಚ ಅಭ್ಯರ್ಥಿಯ ಖಾತೆಗೆ ಸೇರಿಸಲಾಗುತ್ತದೆ. ಯಾವುದೇ ಸಾಮಾಜಿಕ ಜಾಲ ತಾಣಗಳಲ್ಲಿ ಜಾಹೀರಾತು ನೀಡುವ ಮುನ್ನ ಸಂಬಂಧಪಟ್ಟ ಅಭ್ಯರ್ಥಿಯ ಅನುಮತಿ ಪತ್ರ ಪಡೆಯಬೇಕು. ಆ ವೆಚ್ಚವನ್ನು ಸಹ ಅಭ್ಯರ್ಥಿಯ ಖರ್ಚು ವೆಚ್ಚಕ್ಕೆ ಸೇರಿಸಲಾಗುವುದು. ಆದರೆ ಪಕ್ಷದ ಪರವಾಗಿ ಮಾಧ್ಯಮ ಮತ್ತು ಸಾಮಾಜಿಕ ಮಾಧ್ಯಮ ಗಳಲ್ಲಿ ಜಾಹೀರಾತು ನೀಡಲು ಯಾವುದೇ ನಿರ್ಬಂಧವಿಲ್ಲ ಎಂದು ಅವರು ಹೇಳಿ ದ್ದಾರೆ. ಇನ್ನು ರಾಜ್ಯ ಸರ್ಕಾರದ ಅಧಿಕೃತ ಜಾಲತಾಣಗಳಲ್ಲಿ ಚುನಾವಣೆಗೆ ಸಂಬಂಧಿ ಸಿದ ಯಾವುದೇ ಮಾಹಿತಿ ಅಪ್‍ಲೋಡ್ ಮಾಡುವಂತಿಲ್ಲ. ಹೊಸದಾಗಿ ಯಾವುದೇ ಛಾಯಾಚಿತ್ರ, ಸಾಧನೆಗಳ ವಿವರಗಳನ್ನು ಅಳವಡಿಸಬಾರದು ಎಂದು ಆಯೋಗ ಸುತ್ತೋಲೆ ಹೊರಡಿಸಿದೆ. ಮತ್ತೊಂದೆಡೆ ಪ್ರಮುಖ ರಾಜಕೀಯ ನಾಯಕರಾದ ಮೋದಿ, ರಾಹುಲ್, ಕುಮಾರಸ್ವಾಮಿ, ಯಡಿಯೂರಪ್ಪ, ಸಿದ್ದರಾಮಯ್ಯ ಅಭಿಮಾನಿ ಬಳಗದ ಹೆಸರಿನಲ್ಲಿ ತೆರೆದಿರುವ ಖಾತೆಗಳಲ್ಲಿನ ಸ್ಟೇಟಸ್‍ಗಳ ಡಿಜಿಟಲ್ ದಾಖಲೀಕರಣ ಸಹ ನಡೆಯುತ್ತಿದೆ. ಚುನಾವಣಾ ವ್ಯವಸ್ಥೆಯಲ್ಲಿ ಪ್ರಾಮಾಣಿಕತೆ ಕಾಯ್ದುಕೊಳ್ಳಲು ಮತ್ತು ಮುಕ್ತ, ನ್ಯಾಯ ಸಮ್ಮತ ಚುನಾವಣೆ ನಡೆಸಲು ಸಾಮಾಜಿಕ ಜಾಲತಾಣಗಳನ್ನು ಸಹ ನೀತಿಸಂಹಿತೆ ವ್ಯಾಪ್ತಿಯಡಿ ತರಲಾಗಿದೆ. ಚುನಾವಣೆ ಮಹತ್ವದ ಮೂಲ ಆಶಯವನ್ನು ಅರ್ಥಮಾಡಿಕೊಂಡು ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬುದು ಆಯೋಗ ಉದ್ದೇಶವಾಗಿದೆ.

Translate »