ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಮತ್ತೆ ಸಂಕಷ್ಟ
News

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಮಾಜಿ ಸಚಿವ ಕಟ್ಟಾಗೆ ಮತ್ತೆ ಸಂಕಷ್ಟ

March 18, 2021

ಬೆಂಗಳೂರು: ಕೆಐಎಡಿಬಿ ಡಿ ನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಯಡಿಯೂರಪ್ಪ ಮತ್ತು ಕಟ್ಟಾ ಸುಬ್ರಮಣ್ಯ ನಾಯ್ಡು ಅವರಿಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಕೇಸ್‍ನಿಂದ ಕೈಬಿಟ್ಟ ಲೋಕಾಯುಕ್ತ ಕೋರ್ಟ್ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಕೆಐಎಡಿಬಿ ಭೂಮಿ ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದ ಚಾರ್ಜ್‍ಶೀಟ್ ಆಧರಿಸಿ ಕ್ರಮ ತೆಗೆದುಕೊಳ್ಳುವಂತೆ ಹೈಕೋರ್ಟ್ ಆದೇಶ ನೀಡಿದೆ. ಹೂವಿ ನಾಯಕಹಳ್ಳಿಯಲ್ಲಿನ ಕೆಐಎ ಡಿಬಿಯ 20 ಎಕರೆ ಜಮೀ ನನ್ನು ಅಕ್ರಮವಾಗಿ ಡಿ ನೋಟಿಫಿಕೇಷನ್ ಮಾಡಿಸಿ ಕೊಳ್ಳಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮತ್ತು ಮಾಜಿ ಸಚಿವ ಕಟ್ಟಾ ಸುಬ್ರಮಣ್ಯ ನಾಯ್ಡು ವಿರುದ್ಧ ಪ್ರಕರಣ ದಾಖಲಾಗಿದೆ. ಲೋಕಾಯುಕ್ತ ಪೆÇಲೀಸರು ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿ ದ್ದರು. 2012ರಲ್ಲಿ ಸಲ್ಲಿಸಿದ್ದ ದೋಷಾರೋಪ ಪಟ್ಟಿ ಅನುಸಾರ ಕ್ರಮ ಕೈಗೊಳ್ಳಿ ಎಂದು ಲೋಕಾಯುಕ್ತ ವಿಶೇಷ ಕೋರ್ಟ್‍ಗೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ನ್ಯಾಯಾಧೀಶ ಜಾನ್ ಮೈಕೆಲ್ ಕುನ್ಹಾ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

Translate »