ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರೈಕೆ; ಜನತೆಗೆ ಬಂಪರ್ ಕೊಡುಗೆ
News

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಒಂದು ವರ್ಷ ಪೂರೈಕೆ; ಜನತೆಗೆ ಬಂಪರ್ ಕೊಡುಗೆ

July 29, 2022

ಬೆಂಗಳೂರು,ಜು.28(ಕೆಎಂಶಿ)- ನಿರುದ್ಯೋಗ ಸಮಸ್ಯೆ ಬಗೆಹರಿಸಲು ಸ್ತ್ರೀ ಶಕ್ತಿ ಮಾದರಿಯಲ್ಲಿ ಯುವಕರಿಗಾಗಿ ಯುವಶಕ್ತಿ ಯೋಜನೆ ಅನು ಷ್ಠಾನ, ರೈತ ವಿದ್ಯಾನಿಧಿ ಯೋಜನೆ ಇನ್ನು ಮುಂದೆ ನೇಕಾರರು, ಟ್ಯಾಕ್ಸಿ ಚಾಲಕರು, ಮೀನುಗಾರರ ಮಕ್ಕಳಿಗೂ ವಿಸ್ತರಿಸಲಾಗು ವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಪ್ರಕಟಿಸಿದ್ದಾರೆ.

ತಮ್ಮ ಸರ್ಕಾರಕ್ಕೆ ಒಂದು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ರಾಜ್ಯದ ಜನತೆಗೆ ಕೆಲವೊಂದಷ್ಟು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಲ್ಲದೆ, 28 ಸಾವಿರ ಗ್ರಾಮಗಳಲ್ಲೂ ಸ್ವಾಮಿ ವಿವೇಕಾನಂದ ಸಂಘಗಳನ್ನು ಸ್ಥಾಪಿಸಿ, ಈ ಸಂಘಗಳಿಗೆ ಸ್ತ್ರೀ ಶಕ್ತಿ ಗುಂಪುಗಳಿಗೆ ನೀಡುವಂತೆ ಅನುದಾನ ವನ್ನು ನೀಡಿ, ಉದ್ಯಮ ಸಂಬಂಧಿ ತರಬೇತಿ ನೀಡಲಾಗುವುದು. ಸಂಘದಿಂದ ಉತ್ಪಾದನೆ ಗೊಳ್ಳುವ ಸಾಮಗ್ರಿಗಳನ್ನು ಒಂದು ಏಜೆನ್ಸಿ ಮೂಲಕ ಮಾರಾಟ ಮಾಡಲು ವ್ಯವಸ್ಥೆ ಕಲ್ಪಿಸ ಲಾಗುವುದು. ಇದರಿಂದ ಐದು ಲಕ್ಷ ಯುವಕ ರಿಗೆ ಸ್ವಯಂ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂದರು. ನೇಕಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ಪ್ರಾರಂಭಿಸಲಾಗಿದ್ದು, 10 ರಿಂದ 12 ಸಾವಿರ ಮಕ್ಕಳಿಗೂ ಈ ಯೋಜನೆಯ ಲಾಭ ದೊರೆಯಲಿದೆ. ಟ್ಯಾಕ್ಸಿ ಚಾಲಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದ್ದು, 50,000 ಟ್ಯಾಕ್ಸಿ ಚಾಲಕರ ಮಕ್ಕಳಿಗೆ ಈ ಯೋಜನೆಯ ಲಾಭ ದೊರೆಯಲಿದೆ.

ಮೀನುಗಾರರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗಿದೆ. ಈ ಎಲ್ಲಾ ಕಾರ್ಯಕ್ರಮಗಳಿಗೆ ಸಂಬಂಧಿಸಿ ಸರ್ಕಾರದ ಆದೇಶ ಹೊರಡಿಸಲಾಗಿದ್ದು, ಅನುದಾನದ ವ್ಯವಸ್ಥೆಯನ್ನೂ ಮಾಡಲಾಗಿದೆ. ವಿದ್ಯಾನಿಧಿ ಯೋಜನೆಗಳಿಗೆ ಇಂದು ಚಾಲನೆ ನೀಡಲಾಗಿದೆ ಎಂದರು. ಪರಿಶಿಷ್ಟ ಜಾತಿ, ಪಂಗಡದ ಬಡ ಕುಟುಂಬಗಳಿಗೆ ಉಚಿತವಾಗಿ 75 ಯುನಿಟ್‍ವರೆಗೆ ಉಚಿತ ವಿದ್ಯುತ್ ನೀಡುವ ಯೋಜನೆಯಡಿ ಡಿಬಿಟಿ ವರ್ಗಾವಣೆ ಇಂದಿನಿಂದ ಪ್ರಾರಂಭವಾಗಲಿದೆ. ಸುಮಾರು 25 ಲಕ್ಷ ಫಲಾನುಭವಿಗಳಿಗೆ ಅನುಕೂಲವಾಗಲಿದೆ. ಇದಕ್ಕಾಗಿ 700 ಕೋಟಿ ರೂ. ಒದಗಿಸಲಾಗಿದೆ.

ಬಾಬು ಜಗಜೀವನ್ ರಾಂ ಹೆಸರಿನಲ್ಲಿ ಸ್ವಯಂ ಉದ್ಯೋಗ ಯೋಜನೆ ಆರಂಭಿ ಸಿದ್ದು, ಪ್ರತಿಯೊಂದು ಕ್ಷೇತ್ರದಲ್ಲಿ 100 ಪರಿಶಿಷ್ಟ ಜಾತಿ/ ಪಂಗಡದ ಯುವಕರಿಗೆ ಸ್ವಯಂ ಉದ್ಯೋಗ ನೀಡುವ ಯೋಜನೆಗೆ ಚಾಲನೆ ನೀಡಲಾಗಿದೆ. ಶಿಕ್ಷಣ ಹಾಗೂ ಅದರ ಮೂಲಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದ್ದು, ‘ವಿವೇಕ’ ಯೋಜನೆ ಯಡಿ ಮೊದಲ ಬಾರಿಗೆ 8000 ಶಾಲಾ ಕೊಠಡಿಗಳ ನಿರ್ಮಾಣ ಕೈಗೆತ್ತಿಕೊಳ್ಳಲಾಗುವುದು.

ರಾಜ್ಯದ 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಣಗೊಳಿಸುವ ಯೋಜನೆಗೆ ಚಾಲನೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಸುಮಾರು 71 ಪಿಹೆಚ್‍ಸಿಗಳನ್ನು ರಾಜ್ಯದ ಸರಾಸರಿಗಿಂತ ಕಡಿಮೆ ಸೂಚ್ಯಂಕ ಇರುವ ಪ್ರದೇಶಗಳಲ್ಲಿ ಸ್ಥಾಪಿಸಲಾಗುವುದು. ಸ್ತ್ರೀಶಕ್ತಿ ಸಂಘಗಳು ಸ್ವಯಂ ಉದ್ಯೋಗ ಕೈಗೊಳ್ಳಲು ಉತ್ತೇಜನ ನೀಡುವ ನಿಟ್ಟಿನಲ್ಲಿ 1.50 ಲಕ್ಷ ರೂ. ನೀಡುವ ಜೊತೆಗೆ ಸುಲಭವಾಗಿ ಸಾಲ ಸೌಲಭ್ಯ ಒದಗಿಸಲು ಆಂಕರ್ ಬ್ಯಾಂಕ್ ಜೋಡಣೆ, ತರಬೇತಿ, ಉತ್ಪನ್ನಗಳಿಗೆ ಮಾರುಕಟ್ಟೆ ಸೌಲಭ್ಯ ನೀಡುವ ‘ಸ್ತ್ರೀ ಸಾಮಥ್ರ್ಯ ಯೋಜನೆ’ ಗೆ ಚಾಲನೆ ನೀಡಲಾಗಿದೆ. ಸುಮಾರು 5 ಲಕ್ಷ ಮಹಿಳೆಯರ ಸ್ವಾವಲಂಬನೆಗೆ ಎಂಡ್ ಟು ಎಂಡ್ ನೆರವು ನೀಡಲಾಗುತ್ತಿದೆ. ಗೋವುಗಳ ಸಂರಕ್ಷಣೆಯಲ್ಲಿ ಜನರ ಪಾಲುದಾರಿಕೆಯನ್ನು ಉತ್ತೇಜಿಸಲು ಪುಣ್ಯಕೋಟಿ ದತ್ತು ಯೋಜನೆ ಜಾರಿ. ಈ ಯೋಜನೆಗೆ ಸಂಬಂಧಿಸಿದ ವೆಬ್‍ಸೈಟ್‍ನ ಲೋಕಾರ್ಪಣೆ. ಪ್ರತಿಯೊಬ್ಬ ವ್ಯಕ್ತಿಯೂ ವಾರ್ಷಿಕ 11000 ರೂ. ಪಾವತಿಸಿ, ಒಂದು ಗೋವನ್ನು ಒಂದು ವರ್ಷ ನಿರ್ವ ಹಣೆಯನ್ನು ಮಾಡಬಹುದಾಗಿದೆ. ಅವರೇ ಗೋವುಗಳನ್ನು ದತ್ತು ತೆಗೆದುಕೊಳ್ಳ ಬಹುದು, ಅಥವಾ 11,000 ಮೊತ್ತ ಪಾವತಿಸಿದ್ದಲ್ಲಿ ಸರ್ಕಾರದ ಗೋ ಶಾಲೆಗಳಲ್ಲಿ ಗೋವುಗಳ ರಕ್ಷಣೆಗೆ ಈ ಮೊತ್ತವನ್ನು ಬಳಸಿಕೊಳ್ಳಲಾಗುವುದು.

Translate »