ರಾಜ್ಯದಲ್ಲಿ ಶಾಂತಿ ಕದಡುವ ಹುನ್ನಾರ ಮುಖ್ಯಮಂತ್ರಿ ಬೊಮ್ಮಾಯಿ ಎಚ್ಚರಿಕೆ

ಕಟ್ಟುನಿಟ್ಟಿನ ಕ್ರಮಕ್ಕೆ ಪೊಲೀಸರಿಗೆ ಸೂಚನೆ
ಬೆಂಗಳೂರು, ಏ.೮ (ಕೆಎಂಶಿ)-ಕರ್ನಾ ಟಕದಲ್ಲಿ ಶಾಂತಿ ಕದಡುವ ಹುನ್ನಾರ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಇಂದಿಲ್ಲಿ ತಿಳಿಸಿದ್ದಾರೆ.

ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಈ ದುಷ್ಟ ಶಕ್ತಿಗಳ ವಿರುದ್ಧ ಕಠಿಣ ಕ್ರಮ ಜರುಗಿಸು ವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು. ಈ ವಿಷಯದಲ್ಲಿ ಯಾವುದೇ ಚಾನ್ಸ್ ತೆಗೆದುಕೊಳ್ಳಬೇಡಿ ಎಂದು ತಿಳಿಸಿದ್ದೇವೆ. ಕೆಲವು ಕಿಡಿಗೇಡಿಗಳು ಬೆದರಿಕೆ ಕರೆ ಮಾಡುವುದು, ಅನಗತ್ಯ ಹೇಳಿಕೆ ನೀಡಿ, ಸಾರ್ವಜನಿಕರಲ್ಲಿ ಭಯ ಭೀತಿ ಮೂಡಿಸುವ ಕೆಲಸ ಮಾಡುತ್ತಿ ದ್ದಾರೆ. ಇಂತಹವರನ್ನು ತಕ್ಷಣವೇ ಬಂಧಿಸುವAತೆ ಸೂಚಿಸಿದ್ದೇನೆ. ಇಂದು ಬೆಳಗ್ಗೆ ನಗರದ ಖಾಸಗಿ ಶಾಲೆ ಗಳಿಗೆ ಬೆದರಿಕೆ ಕರೆಗಳು ಬಂದು, ವಿದ್ಯಾರ್ಥಿ ಗಳು ಮತ್ತು ಪೋಷಕರಲ್ಲಿ ಆತಂಕ ಉಂಟು ಮಾಡಿವೆ. ಯಾರೂ ಅತಂಕಪಡುವ ಅಗತ್ಯವಿಲ್ಲ ಎಂದ ಮುಖ್ಯಮಂತ್ರಿಯವರು, ಎಲ್ಲಾ ರೀತಿ ಮುಂಜಾಗ್ರತ ಕ್ರಮಗಳನ್ನು ಕೈಗೊಂಡಿದ್ದೇವೆ ಎಂದರು. ಈ ಬಗ್ಗೆ ತನಿಖೆ ನಡೆಯುತ್ತಿದೆ. ಯಾರು ಕರೆ ಮಾಡಿದರು. ಎಲ್ಲಿಂದ ಕರೆ ಬಂದಿತು ಎಂಬ ಬಗ್ಗೆ ತನಿಖೆ ಆರಂಭವಾಗಿದೆ. ಕಳೆದ ಕೆಲವು ದಿನಗಳಿಂದ ಸಮಾಜದ ಸ್ವಾಸ್ಥ÷್ಯವನ್ನು ಕದಡಿ ರಾಜಕೀಯ ಲಾಭ ಮಾಡಿಕೊಳ್ಳಲು ಕೆಲ ಸಂಘಟನೆಗಳು ಪ್ರಯತ್ನಿಸುತ್ತಿವೆ. ಇವೆಲ್ಲದರ ಬಗ್ಗೆಯೂ ಬಿಗಿ ಕ್ರಮ ಕೈ ಗೊಳ್ಳುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಮುಖ್ಯಮಂತ್ರಿಯವರು ತಿಳಿಸಿದರು. ಪೊಲೀಸರಿಗೆ ಯಾವುದೇ ಛಾನ್ಸ್ ತೆಗೆದುಕೊಳ್ಳಬೇಡಿ ಎಂದು ಸೂಚಿಸಿದ್ದೇನೆ. ಬೆದರಿಕೆ ಕರೆ ಮಾಡಿದವರನ್ನು ಬಂಧನ ಮಾಡುತ್ತೇವೆ. ಕಾಲ್ ಡಿಟೈಲ್ಸ್ ಚೆಕ್ ಮಾಡಲು ಹೇಳಿದ್ದೇವೆ. ಎಲ್ಲಾ ರೀತಿ ಮುಂಜಾಗ್ರತಾ ಕ್ರಮಗಳನ್ನು ಪೊಲೀಸರು ತೆಗೆದುಕೊ ಳ್ಳುತ್ತಾರೆ ಎಂದು ಮಾಹಿತಿ ನೀಡಿದರು.

ಸಿಎಂಗೆ ಗುಪ್ತಚರ ಇಲಾಖೆ ವಿವರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಘಟನೆ ಕುರಿತು ಗುಪ್ತಚರ ಇಲಾಖೆ ಎಡಿಜಿಪಿ ದಯಾನಂದ್ ಸಮಗ್ರ ವಿವರ ನೀಡಿದ್ದಾರೆ. ಶಾಲೆಗಳಿಗೆ ಇಮೇಲ್ ಮೂಲಕ ಬೆದರಿಕೆ ಬಂದಿದ್ದು, ಪೊಲೀಸರು ತಪಾ ಸಣೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.