ಫೆ.28 ರಂದು ಮುಖ್ಯಮಂತ್ರಿಗಳ ಕೊಡಗು  ಜಿಲ್ಲಾ ಪ್ರವಾಸ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ
ಕೊಡಗು

ಫೆ.28 ರಂದು ಮುಖ್ಯಮಂತ್ರಿಗಳ ಕೊಡಗು ಜಿಲ್ಲಾ ಪ್ರವಾಸ; ಅಗತ್ಯ ಸಿದ್ಧತೆಗೆ ಡಿಸಿ ಸೂಚನೆ

February 26, 2019

ಮಡಿಕೇರಿ: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಫೆ.28 ರಂದು ಕೊಡಗು ಜಿಲ್ಲೆಗೆ ಆಗಮಿಸಿ ಬಸವನಹಳ್ಳಿ ಮತ್ತು ಬ್ಯಾಡಗೊಟ್ಟದಲ್ಲಿ ನಿರ್ಮಿಸಿರುವ ಮನೆಗಳನ್ನು ಹಸ್ತಾಂತರಿಸಲಿದ್ದಾರೆ. ಜೊತೆಗೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕು ಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳು ವಂತೆ ಸಂಬಂಧಪಟ್ಟ ಇಲಾಖೆ ಅಧಿಕಾರಿ ಗಳಿಗೆ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಸೂಚಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಸಿದ್ಧತೆ ಸಂಬಂಧ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸುಮಾರು 143 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಮಾಡಲಿದ್ದಾರೆ. ಹಾಗೆಯೇ ಸವಲತ್ತುಗಳ ವಿತರಣಾ ಕಾರ್ಯಕ್ರಮ ನಡೆಯಲಿದ್ದು, ತಮ್ಮ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಅಗತ್ಯ ತಯಾರಿ ಮಾಡಿ ಕೊಳ್ಳಬೇಕು. ವೇದಿಕೆ, ಶಾಮಿಯಾನ ನಿರ್ಮಾಣ, ಆಗಮಿಸುವವರಿಗೆ ಊಟದ ವ್ಯವಸ್ಥೆ, ಆಹಾರ ಸುರಕ್ಷತೆ ಬಗ್ಗೆ ಗಮನ ಹರಿಸುವುದು, ಅಗ್ನಿ ಶಾಮಕ ದಳದವರನ್ನು ನಿಯೋಜಿಸುವುದು, ಸೂಕ್ತ ಬಂದೋ ಬಸ್ತ್ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಮನೆಗಳ ಹಸ್ತಾಂತರ ಸಂಬಂಧ ಸಾಂಕೇತಿಕವಾಗಿ ಹಕ್ಕುಪತ್ರಗಳ ವಿತರಣೆ ಮತ್ತಿತರ ಬಗ್ಗೆ ವಿವಿಧ ಇಲಾಖೆಗಳು ಸೌಲಭ್ಯ ಗಳ ವಿತರಣೆಗೆ ಕ್ರಮ ವಹಿಸುವಂತೆ ಸೂಚಿಸಿ ದರು. ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ತಿಳಿಸಿದರು.

ಕಾಮಗಾರಿ ಬಳಕೆ ಪ್ರಮಾಣ ಪತ್ರ ನೀಡಿ: ಪ್ರಕೃತಿ ವಿಕೋಪ ಸಂದರ್ಭದಲ್ಲಿ ನಿರ್ವಹಿ ಸಲಾಗಿರುವ ಕಾಮಗಾರಿಗಳಿಗೆ ಸಂಬಂಧಿಸಿ ದಂತೆ ಲೋಕೋಪಯೋಗಿ, ಪಂಚಾಯತ್ ರಾಜ್, ಸೆಸ್ಕ್, ಗ್ರಾಮೀಣ ಕುಡಿಯುವ ನೀರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ, ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆ, ಕಂದಾಯ ಇಲಾಖೆ ಹೀಗೆ ಹಲವು ಇಲಾಖೆಗಳಿಗೆ ಹಣ ಬಿಡುಗಡೆ ಮಾಡ ಲಾಗಿತ್ತು, ಈ ಹಣ ಖರ್ಚಾಗಿರುವ ಬಗ್ಗೆ ತಕ್ಷಣವೇ ಬಳಕೆ ಪ್ರಮಾಣ ಪತ್ರ ನೀಡು ವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

ಜಿಪಂ ಸಿಇಓ ಕೆ.ಲಕ್ಷ್ಮಿಪ್ರಿಯ ಮಾತನಾಡಿ, ಮುಖ್ಯಮಂತ್ರಿ ಅವರ ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಯಶಸ್ಸುಗೊಳಿಸುವ ನಿಟ್ಟಿನಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸು ವಂತೆ ಸೂಚಿಸಿದರು.

ಉಪ ವಿಭಾಗಾಧಿಕಾರಿ ಟಿ.ಜವರೇಗೌಡ, ಉಪ ಪೊಲೀಸ್ ವರಿಷ್ಠಾಧಿಕಾರಿ ಸುಂದರ ರಾಜ್, ಉಪ ಅರಣ್ಯ ಸಂರಕ್ಷಣಾಧಿ ಕಾರಿ ಮಂಜುನಾಥ್, ಭೂ ದಾಖಲೆಗಳ ಉಪ ನಿರ್ದೇಶಕ ಶ್ರೀನಿವಾಸ್, ಲೋಕೋ ಪಯೋಗಿ ಇಲಾಖೆ ಎಂಜಿನಿಯರ್ ಇಬ್ರಾಹಿಂ, ಐಟಿಡಿಪಿ ಇಲಾಖಾ ಅಧಿಕಾರಿ ಶಿವಕುಮಾರ್, ನಾನಾ ಇಲಾಖೆ ಅಧಿಕಾರಿಗಳು ಇದ್ದರು.

Translate »