ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ
ಮೈಸೂರು

ದೆಹಲಿಯಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ 3 ದಿನ ಬಿಡಾರ

October 5, 2018

ಬೆಂಗಳೂರು:  ರಾಜ್ಯ ಸಚಿವ ಸಂಪುಟ ವಿಸ್ತರಣೆ, ನಿಗಮ-ಮಂಡಳಿಗಳಿಗೆ ನೇಮಕಾತಿ, ಮೈತ್ರಿ ಸರ್ಕಾರದ ಮಿತ್ರ ಪಕ್ಷಗಳಲ್ಲಿನ ರಾಜಕೀಯ ವಿದ್ಯಮಾನ ಕುರಿತು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಜೊತೆ ಚರ್ಚಿಸಲು ಮುಖ್ಯ ಮಂತ್ರಿ ಎಚ್.ಡಿ. ಕುಮಾರಸ್ವಾಮಿ ದೆಹಲಿಗೆ ಮೂರು ದಿನಗಳ ಭೇಟಿ ನೀಡಿದ್ದಾರೆ. ಅಕ್ಟೋಬರ್ 4, 5 ಮತ್ತು 6ರ ದೆಹಲಿ ಭೇಟಿ ಸಂದರ್ಭದಲ್ಲಿ ರಾಜ್ಯದ ಬಾಕಿ ಯೋಜನೆಗಳ ಕುರಿತು ಕೇಂದ್ರ ಸಚಿವರೊಂದಿಗೂ ಕುಮಾರಸ್ವಾಮಿ ಸಮಾಲೋಚನೆ ನಡೆಸಲಿದ್ದಾರೆ. ರಾಜ್ಯದ ಎರಡು ವಿಧಾನಸಭಾ ಮತ್ತು ಮೂರು ಲೋಕಸಭಾ ಕ್ಷೇತ್ರಗಳ ಉಪಚುನಾ ವಣೆಯಲ್ಲಿ ಪ್ರತಿಪಕ್ಷ ಬಿಜೆಪಿ ವಿರುದ್ಧ ಮೈತ್ರಿ ಪಕ್ಷಗಳ ಸಂಘಟಿತ ಹೋರಾಟ ವಿಚಾರಗಳು ಎಐಸಿಸಿ ಅಧ್ಯಕ್ಷರೊಂದಿಗಿನ ಸಭೆಯಲ್ಲಿ ಪ್ರಸ್ತಾಪವಾಗಲಿದೆ. ಸಂಖ್ಯಾಬಲದಲ್ಲಿ ಜೆಡಿಎಸ್ ಕಡಿಮೆ ಇದ್ದರೂ ಕೋಮುವಾದಿ ಪಕ್ಷವನ್ನು ಅಧಿಕಾರದಿಂದ ದೂರವಿಡುವ ಉದ್ದೇಶದಿಂದ ಮೈತ್ರಿ ಸರ್ಕಾರ ರಚನೆಗೆ ಅವಕಾಶ ನೀಡಿದ್ದು, ಮುಂದೆಯೂ ಇದೇ ಮೈತ್ರಿ ಇರಬೇಕಾದ ಅಗತ್ಯತೆಯನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಕುಮಾರಸ್ವಾಮಿ ಮನವರಿಕೆ ಮಾಡಿಕೊಡ ಲಿದ್ದಾರೆ.

Translate »