ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ
ಮೈಸೂರು

ಬಸ್ ದರ ಏರಿಕೆಗೆ ಮುಖ್ಯಮಂತ್ರಿ ಕುಮಾರಸ್ವಾಮಿ ತಡೆ

September 18, 2018

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಮುಖ್ಯ ಮಂತ್ರಿ ಕುಮಾರಸ್ವಾಮಿ ನೋ ಎಂದಿದ್ದಾರೆ.

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ ಅನುಮೋದನೆ ಆದೇಶ ತಡೆ ಹಿಡಿಯಲು ಕುಮಾರಸ್ವಾಮಿ ಸಾರಿಗೆ ಸಂಸ್ಥೆಗೆ ಸೂಚನೆ ನೀಡಿದ್ದಾರೆ.

ಬಸ್ ಪ್ರಯಾಣ ದರ ಏರಿಕೆಯನ್ನು ಈ ಕೂಡಲೇ ತಡೆ ಹಿಡಿಯಬೇಕೆಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಮುಖ್ಯಮಂತ್ರಿ ಕಾರ್ಯಾಲಯ ಈ ಸಂಬಂಧ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದೆ. ಇದಕ್ಕೆ ಮುನ್ನ ಸೋಮವಾರ ಮಧ್ಯರಾತ್ರಿಯಿಂದ ಬಸ್ ಪ್ರಯಾಣ ದರ ಹೆಚ್ಚಿಸಲು ಅನುಮೋದನೆ ದೊರಕಿತ್ತು. ಕೆಲ ದಿನಗಳ ಹಿಂದೆಯೇ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಕಾರಣ ಬಸ್ ಪ್ರಯಾಣ ದರ ಏರಿಕೆಗೆ ಅನುಮೋದನೆ ನೀಡುವಂತೆ ರಸ್ತೆ ಸಾರಿಗೆ ನಿಗಮ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿತ್ತು. ಸೋಮವಾರ ಬೆಳಿಗ್ಗೆಯಷ್ಟೇ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಪೆಟ್ರೋಲ್ ದರ ಇಳಿಸಿ ಸಿಹಿ ಸುದ್ದಿ ನೀಡಿದ್ದರು. ಇದೀಗ ಸಾರಿಗೆ ದರ ಏರಿಕೆ ತಡೆದಿದ್ದು, ಜನಸಾಮಾನ್ಯರಿಗೆ ಸಂತಸಕ್ಕೆ ಕಾರಣವಾಗಿದ್ದಾರೆ.

Translate »