ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ
ಮಂಡ್ಯ

ಜನರ ಸಮಸ್ಯೆ ಆಲಿಸಿ, ಪರಿಹರಿಸುವ ಭರವಸೆ ನೀಡಿದ ಮುಖ್ಯಮಂತ್ರಿ ಕುಮಾರಸ್ವಾಮಿ

September 27, 2018

ಮಂಡ್ಯ: ಮಂಡ್ಯಕ್ಕೆ ಮಧ್ಯಾಹ್ನ 3 ಗಂಟೆಗೆ ಆಗಮಿಸಿದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಗರದ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹ ವಾಲುಗಳನ್ನು ಆಲಿಸಿದರು.

ರೈತಸಂಘ, ದಸಂಸ ಸೇರಿದಂತೆ ವಿವಿಧ ಸಂಘಟನೆಗಳು ಹಾಗೂ ಸಾರ್ವ ಜನಿಕರಿಂದ ಅಹವಾಲು ಸ್ವೀಕರಿಸಿ, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು. ಕೆಲವು ಸಂಘಟನೆಗಳ ಮುಖಂಡರು ಹಾಗೂ ಸಾರ್ವಜನಿಕರಿಗೆ ಮಾತ್ರ ಜನತಾ ದರ್ಶನಕ್ಕೆ ಸೀಮಿತವಾಗಿತ್ತು. ಪ್ರವಾಸಿ ಮಂದಿರದ ಗೇಟ್‍ನಲ್ಲಿಯೇ ಸಾರ್ವಜನಿಕರನ್ನು ತಡೆದು ನಿಲ್ಲಿಸಿದ್ದರಿಂದ ಹೆಚ್ಚು ಸಾರ್ವಜ ನಿಕರು ತಮ್ಮ ಅಹವಾಲುಗಳನ್ನು ಹಿಡಿದು ಕೊಂಡು ಕುಮಾರಸ್ವಾಮಿ ಅವರಿಗಾಗಿ ಕಾದು ಕುಳಿತಿದ್ದರು.

ಕಳೆದ ಒಂದು ವರ್ಷದಿಂದ ಆರೋಗ್ಯ ಇಲಾಖೆಯಲ್ಲಿ ಸೇವೆ ಸಲ್ಲಿಸುತ್ತಿರುವ ‘ಡಿ’ ಗ್ರೂಪ್ ನೌಕರರಿಗೆ ವೇತನ ನೀಡದ ಹಿನ್ನೆಲೆ ಯಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು. ಜಿಲ್ಲೆಯ 7 ತಾಲೂಕುಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ‘ಡಿ’ ಗ್ರೂಪ್ ನೌಕರರಾಗಿ ಕೆಲಸ ನಿರ್ವಹಿ ಸುತ್ತಿರುವ ಸುಮಾರು 265 ಮಂದಿ ನೌಕರ ರಿಗೆ ಕಳೆದ ಒಂದು ವರ್ಷದಿಂದ ವೇತನ ನೀಡಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟಕರವಾಗಿದೆ. ಆದ್ದರಿಂದ ಕೂಡಲೇ ವೇತನ ಕೊಡಿಸಿಕೊಡಬೇಕು ಎಂದು ಮಹಿಳಾ ಹಾಗೂ ಪುರುಷ ನೌಕರರು ಮನವಿ ಸಲ್ಲಿಸಿದರು. ಮನವಿಗೆ ಸ್ಪಂದಿಸಿದ ಮುಖ್ಯ ಮಂತ್ರಿ ಕುಮಾರಸ್ವಾಮಿ, ಆದಷ್ಟು ಬೇಗ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು. ಇದೇ ವೇಳೆ ಸಂಪೂರ್ಣ ಸಾಲ ಮನ್ನಾ ಸೇರಿದಂತೆ ವಿವಿಧ ಬೇಡಿಕೆ ಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಖಂಡ ಕರ್ನಾಟಕ ರೈತಸಂಘದ ಕಾರ್ಯ ಕರ್ತರು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.

ಸಾಲಮನ್ನಾ ವಿಚಾರದಲ್ಲಿ ಸ್ವಲ್ಪ ಬದಲಾವಣೆ ಮಾಡಿ ರೈತರ ಸಂಪೂರ್ಣ ಸಾಲಮನ್ನಾ ಮಾಡಬೇಕು. ರೈತರು ಬೆಳೆದಿರುವ ಬೆಳೆಗಳು ಕಟಾವಿಗೆ ಬರುವ ವೇಳೆಗೆ ಸರ್ಕಾರವೇ ವೈಜ್ಞಾನಿಕ ಬೆಲೆ ನೀಡಿ ಖರೀದಿಸಲು ಕೇಂದ್ರ ತೆರೆಯಬೇಕು. ಮಂಡ್ಯ ನಗರದಲ್ಲಿ ಡಿಪ್ಲೋಮಾ ಕಾಲೇಜು ಪ್ರಾರಂಭ ಮಾಡಬೇಕು. ಕಬ್ಬಿನ ಬಾಕಿ ಹಣ 25 ಕೋಟಿ ರೂ.ಗಳನ್ನು ಕೂಡಲೇ ಕಾರ್ಖಾನೆಗಳಿಂದ ಕೊಡಿಸಬೇಕು. ಪ್ರತಿ ಟನ್ ಕಬ್ಬಿಗೆ 3 ಸಾವಿರ ರೂ. ನಿಗದಿ ಮಾಡಬೇಕು. ಮಂಡ್ಯಕ್ಕೆ ರಿಂಗ್‍ರೋಡ್ ಅವಶ್ಯಕತೆ ಇದ್ದು, ತ್ವರಿತಗತಿಯಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.

ಪಾಲಹಳ್ಳಿಯ ಹೂ ಮಾರುವ ಬಾಲಕಿ ಮತ್ತು ಪೋಷಕರಿಗೆ ಮನೆ ಕಟ್ಟಿಸಿ ಕೊಡುವ ಜೊತೆಗೆ ಶಿಕ್ಷಣದ ಸೌಲಭ್ಯ ಕೊಡಿಸಿಕೊಡುವ ಭರವಸೆ ನೀಡಿದರು.

ಸುಂಕಾತೊಣ್ಣುರು ಸಮೂಹಿಕ ಆತ್ಮಹತ್ಯೆ ಮಾಡಿಕೊಂಡ ರೈತನ ತಾಯಿ ಮತ್ತು ಕುಟುಂಬವೂ ಸಹ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಸಹಾಯಕ್ಕೆ ಮನವಿ ಮಾಡಿತು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು ಜಿಲ್ಲಾಡ ಳಿತ ನೀಡಿರುವ 5 ಲಕ್ಷ ಸಹಾಯದ ಜೊತೆಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 2 ಲಕ್ಷ ರೂ. ಚೆಕ್‍ನ್ನು ಸ್ಥಳದಲ್ಲೇ ನೀಡಿದರು.

Translate »