ಸರ್ ಎಂ.ವಿಶ್ವೇಶ್ವರಯ್ಯನವರಿಗೆ ಮುಖ್ಯಮಂತ್ರಿ ನಮನ: ಶ್ರಮಿಕ ಸಮಾಜವೇ ನಾಡು ಕಟ್ಟುವುದು

ಬೆಂಗಳೂರು,ಸೆ.15(ಕೆಎಂಶಿ)-ದೇಶದ ಆರ್ಥಿಕತೆ ಬಲಪಡಿಸುವ ರೈತರು, ಶ್ರಮಿಕ ವರ್ಗದವರೇ ನಿಜವಾಗಿ ನಾಡು ಕಟ್ಟುವವರು, ಈ ವರ್ಗದವರನ್ನು ಸರ್ ಎಂ. ವಿಶ್ವೇಶ್ವರಯ್ಯ ಪ್ರತಿನಿಧಿಸುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಇಂಜಿನಿಯರುಗಳ ದಿನಾಚರಣೆಯ ಅಂಗವಾಗಿ ಭಾರತರತ್ನ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಪಿರಮಿಡ್‍ನ ಅತ್ಯಂತ ಕೆಳಸ್ತರದಲ್ಲಿ ದುಡಿಯುವ ವರ್ಗದವರು ದೇಶದ ಆರ್ಥಿಕತೆ ಬೆಳೆಸುವ ಮೂಲ ಪುರುಷರು ಹಾಗೂ ತಾಯಂದಿರು ಎಂದರು.
ವಿಶ್ವೇಶ್ವರಯ್ಯ ಈ ವರ್ಗದವರನ್ನು ಪ್ರತಿನಿಧಿಸುತ್ತಾರೆ, ವಿಶ್ವೇ ಶ್ವರಯ್ಯ ಅವರ ಸಾಧನೆ ಅಪಾರ, ಕೆ.ಆರ್.ಎಸ್. ಅಣೆಕಟ್ಟೆಯಿಂದ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳ ನಿರ್ಮಾಣ, ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಹಲವು ಕಾರ್ಖಾನೆಗಳ ಸ್ಥಾಪನೆ, ಮಹಿಳೆಯರಿಗೆ ಮೀಸಲಾತಿ ಮುಂತಾದ ಕಾರ್ಯಕ್ರಮಗಳ ಮೂಲಕ ನಾಡು ಕಟ್ಟಿದ್ದಾರೆ. ಅಂಥ ವ್ಯಕ್ತಿಗೆ ನಮನ ಸಲ್ಲಿಸುವ ದಿನವಿದು, ನಾವೂ ಅವರ ಹಾದಿಯಲ್ಲಿ ನಡೆದು, ಅವರಂತೆ ನಾಡು ಕಟ್ಟಲು ಸಣ್ಣ ಪ್ರಯತ್ನ ಮಾಡಲು ಸಂಕಲ್ಪ ಮಾಡುವ ದಿನವೆಂದು ಭಾವಿಸಿರುವುದಾಗಿ ಬೊಮ್ಮಾಯಿ ತಿಳಿಸಿದರು.
ವಿದ್ಯುತ್ ಉತ್ಪಾದನೆ, ಶಿಕ್ಷಣ ಕ್ಷೇತ್ರಗಳಿಗೆ ವಿಶ್ವೇಶ್ವರಯ್ಯ ಕೊಡುಗೆ ಗಳನ್ನು ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸ್ಮರಿಸಿದರು.