ಬೆಂಗಳೂರು, ಸೆ.29 (ಕೆಎಂಶಿ)- ಬಿಜೆಪಿ ವರಿಷ್ಠರ ಕರೆಯ ಮೇರೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿ ಯೂರಪ್ಪ ಅ.2ರಂದು ದೆಹಲಿ ಪ್ರವಾಸ ಕೈಗೊಳ್ಳುವ ಸಾಧ್ಯತೆ ಇದೆ. ರಾಜ್ಯದ ರಾಜ ಕೀಯ, ಆಡಳಿತ ಹಾಗೂ ಕೊರೊನಾ ಸೋಂಕು ನಿಯಂತ್ರಣ ಮತ್ತು ಸರ್ಕಾ ರದ ವಿರುದ್ಧ ಕೇಳಿ ಬಂದಿರುವ ಆರೋಪ ಗಳಿಗೆ ಸಂಬಂಧಿಸಿದಂತೆ ಗೃಹ ಸಚಿವ ಅಮಿತ್ ಷಾ, ಮುಖ್ಯಮಂತ್ರಿ ಯವರಿಂದ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಡ್ಡಾ, ನಿನ್ನೆ ಮುಖ್ಯಮಂತ್ರಿಯವ ರನ್ನು ಸಂಪರ್ಕಿಸಿ, ದೆಹಲಿಗೆ ಬರುವಂತೆ ಆಹ್ವಾನ ನೀಡಿದ್ದಲ್ಲದೆ, ದೆಹಲಿ ಭೇಟಿ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಷಾ ಅವರನ್ನು ಭೇಟಿಯಾಗಿ ಸಮಾಲೋಚನೆ ನಡೆಸುವಂತೆಯೂ ಸಲಹೆ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಮಂತ್ರಿಮಂಡಲವನ್ನು ವಿಸ್ತರಿಸಿ, 4ರಿಂದ 5 ಮಂದಿಯನ್ನು ಹೊಸದಾಗಿ ಸೇರ್ಪಡೆ ಮಾಡಿಕೊಳ್ಳಲು ಆಸಕ್ತರಿದ್ದಾರೆ.
ಆದರೆ ವರಿಷ್ಠರು ವಿಸ್ತರಣೆ ಇಲ್ಲವೇ ಪುನರಚನೆಗೆ ಅನುಮತಿ ನೀಡುತ್ತಾರೋ ಅಥವಾ ಯಡಿಯೂರಪ್ಪನವರಿಗೆ ಪರ್ಯಾಯ ಅಧಿಕಾರವನ್ನು ನೀಡುವ ಆಹ್ವಾನ ಕೊಡುತ್ತಾರೆಯೋ ಎಂದು ಕಾದು ನೋಡಬೇಕಾಗಿದೆ. ಬಿಜೆಪಿಯ ಉನ್ನತ ಮೂಲಗಳ ಪ್ರಕಾರ ಯಡಿಯೂರಪ್ಪನವರು ಒಂದು ವರ್ಷ ಆಡಳಿತಾವಧಿ ಪೂರ್ಣಗೊಳಿಸಿದ್ದಾರೆ. ವರಿಷ್ಠರು ಅವರಿಗೆ ನೀಡಿದ್ದು, ಒಂದೇ ವರ್ಷ ಅವಧಿ. ಈಗ ಅದು ಪೂರ್ಣಗೊಂಡಿದೆ. ರಾಜ್ಯದಲ್ಲಿ ಪರ್ಯಾಯ ನಾಯಕರನ್ನು ತರುವ ಬಗ್ಗೆ ಚಿಂತನೆ ನಡೆಸಿದ್ದಾರೆ. ಒಂದು ವೇಳೆ ಇಂತಹ ಪರಿಸ್ಥಿತಿ ನಿರ್ಮಾಣವಾದರೆ ಯಡಿ ಯೂರಪ್ಪನವರಿಗೆ ಮತ್ತೊಂದು ಗೌರವಯುತವಾದ ಹುದ್ದೆ ದೊರೆಯಲಿದೆ. ಇಲ್ಲದಿದ್ದರೆ, ವರಿಷ್ಠರು ಮುಂದಿನ ಆಲೋಚನೆ ಮಾಡುವ ಸಾಧ್ಯತೆಯೂ ಇದೆ ಎಂದು ಹೇಳಲಾಗಿದೆ.
ಇದೇ ಮೂಲಗಳ ಪ್ರಕಾರ ಆಡಳಿತಕ್ಕೆ ಸಂಬಂಧಿಸಿದಂತೆ ಪ್ರಧಾನಿ ಕಾರ್ಯಾಲಯ ಮುಖ್ಯ ಕಾರ್ಯದರ್ಶಿ ಅವರಿಂದ ಕೆಲವು ಮಾಹಿತಿ ಪಡೆದಿದ್ದಾರೆ ಎನ್ನಲಾಗಿದೆ. ಅಮಿತ್ ಷಾ ಭೇಟಿ ಸಂದರ್ಭದಲ್ಲಿ ಈ ಎಲ್ಲಾ ವಿಚಾರಗಳು ಚರ್ಚೆಗೆ ಬರಲಿವೆ. ಆದರೆ ಮುಖ್ಯಮಂತ್ರಿ ಯವರು ಮಾತ್ರ ತಮ್ಮ ಮಂತ್ರಿಮಂಡಲವನ್ನು ವಿಸ್ತರಿಸಲು ವರಿಷ್ಠರೊಂದಿಗೆ ಸಮಾಲೋಚನೆ ನಡೆಸುವ ಉದ್ದೇಶದಿಂದ ಮೂರು ನಾಲ್ಕು ದಿನದಲ್ಲಿ ದೆಹಲಿಗೆ ತೆರಳುವುದಾಗಿ ಹೇಳಿದ್ದಾರೆ. ಗುರುವಾರ ಸಂಜೆ ಸಚಿವ ಸಂಪುಟ ಸಭೆ ನಡೆಯಲಿದ್ದು, ಮರು ದಿನ ಗಾಂಧಿ ಜಯಂತಿ ದಿನದಂದು ಪ್ರತಿಮೆಗೆ ಮಾಲಾರ್ಪಣೆ ಮಾಡಿ, ದೆಹಲಿ ಪ್ರವಾಸ ಕೈಗೊಳ್ಳುತ್ತಾರೆ ಎನ್ನಲಾಗಿದೆ.