ಜಗನ್ಮಾತೆ ಚಾಮುಂಡೇಶ್ವರಿ ನಾಡಿನ ಜನತೆಗೆ ಸನ್ಮಂಗಳ ಉಂಟು ಮಾಡಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಸಂದೇಶ
ಮೈಸೂರು

ಜಗನ್ಮಾತೆ ಚಾಮುಂಡೇಶ್ವರಿ ನಾಡಿನ ಜನತೆಗೆ ಸನ್ಮಂಗಳ ಉಂಟು ಮಾಡಲಿ ನಾಡಿನ ಜನತೆಗೆ ಮುಖ್ಯಮಂತ್ರಿ ಯಡಿಯೂರಪ್ಪ ದಸರಾ ಸಂದೇಶ

October 27, 2020

ಮೈಸೂರು,ಅ.26 (ಆರ್‍ಕೆ)- ನಾಡಿನ ಸಮಸ್ತ ಜನತೆಗೆ ಜಗ ನ್ಮಾತೆ ತಾಯಿ ಚಾಮುಂಡೇಶ್ವರಿ ದೇವಿಯು ಸಕಲ ಸನ್ಮಂಗಳ ವನ್ನು ಉಂಟುಮಾಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ರಾಜ್ಯದ ಜನತೆಗೆ ದಸರಾ ಮಹೋತ್ಸವದ ಸಂದೇಶ ನೀಡಿದ್ದಾರೆ. ಮೈಸೂರು ಅರಮನೆಯ ಉತ್ತರ ದ್ವಾರದ ಶ್ರೀ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸುವ ಮೂಲಕ ವಿಜಯದಶಮಿ ಮೆರವಣಿ ಗೆಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರದೊಂದಿಗೆ ಮಾತನಾಡಿ, ಕೋವಿಡ್-19 ಮತ್ತು ಪ್ರವಾಹದ ಸಂಕಷ್ಟಗಳಿಂದ ನಾಡಿನ ಜನತೆಯನ್ನು ಪಾರು ಮಾಡಿ, ಶಾಂತಿ ಮತ್ತು ಸೌಹಾರ್ದತೆಯ ಜೊತೆಗೆ ಆರೋಗ್ಯವನ್ನು ಕರುಣಿಸಲಿ ಎಂದು ದೇವಿಯಲ್ಲಿ ಪ್ರಾರ್ಥಿ ಸಿದ್ದೇನೆ. ಸಾರ್ವಜನಿಕರು ಸರ್ಕಾರದೊಂದಿಗೆ ಸಹಕರಿಸಿ ಮುನ್ನೆಚ್ಚ ರಿಕೆ ವಹಿಸಿದ್ದಕ್ಕಾಗಿ ನಾನು ಅಭಿನಂದಿಸ ಬಯಸುತ್ತೇನೆ ಎಂದರು.

ಮೈಸೂರು ದಸರಾ ಮಹೋತ್ಸವಕ್ಕೆ ಅದರದೇ ಆದ ಐತಿಹಾಸಿಕ ಪರಂಪರೆ ಹಾಗೂ ಸಾಂಸ್ಕøತಿಕ ಹಿನ್ನೆಲೆ ಇದೆ. ಭಾರತೀಯ ಸಂಸ್ಕø ತಿಯ ಚರಿತ್ರೆಯಲ್ಲೇ ಇಷ್ಟೊಂದು ಕಾಲ ನಡೆದು ಬಂದಿರುವ ಮತ್ತೊಂದು ಹಬ್ಬ ಕಾಣಸಿಗುವುದು ಬಹಳ ಅಪರೂಪ. ಕನ್ನಡ ನಾಡಿನ ಕಲೆ-ಸಂಸ್ಕøತಿ ಬಿಂಬಿಸುವ, ದೇಶ-ವಿದೇಶದ ಜನರನ್ನು ಆಕರ್ಷಿಸುವ ದಸರಾ ಮಹೋತ್ಸವವನ್ನು ಈ ಬಾರಿ ಕೋವಿಡ್-19 ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಿದ್ದೇವೆ. ಸಾಂಪ್ರದಾಯಿಕತೆಗೆ ಸೀಮಿತವಾಗಿ ನಾಡಹಬ್ಬ ಆಚರಿಸುವುದು ಅನಿವಾರ್ಯವಾಗಿತ್ತು. ಜನ ಸಂದಣಿ ಸೇರದಂತೆ ದಸರಾ ಸಂದರ್ಭದಲ್ಲಿ ಹಮ್ಮಿಕೊಳ್ಳುತ್ತಿದ್ದ ಬಹುತೇಕ ಕಾರ್ಯಕ್ರಮಗಳನ್ನು ರದ್ದುಪಡಿಸಿದ್ದೇವೆ. ದುಷ್ಟ ಸಂಹಾರ, ಶಿಷ್ಟರ ರಕ್ಷಣೆ ಮಾಡಿದ ಹಿನ್ನೆಲೆಯ ನಾಡ ಹಬ್ಬವಿದು. ಹೊಸ ಚೈತನ್ಯ, ಉತ್ಸಾಹ, ಆತ್ಮವಿಶ್ವಾಸವನ್ನು ಮೈಗೂಡಿಸಿಕೊಳ್ಳಲು ನವರಾತ್ರಿ ಮುನ್ನುಡಿ ಆಗಿದೆ ಎಂದ ಮುಖ್ಯಮಂತ್ರಿಗಳು ಕೊರೊನಾ ಹಾಗೂ ಅತಿವೃಷ್ಟಿಯಂತಹ ಸಂಕಷ್ಟದಲ್ಲಿ ನಾವು ವಿಜಯ ಸಾಧಿಸುತ್ತೇವೆ ಎಂಬ ವಿಶ್ವಾಸ ನಮಗಿದೆ ಎಂದರು.

Translate »