ನಾಳೆ ಮೈಸೂರಿಗೆ ಮುಖ್ಯಮಂತ್ರಿ ಯಡಿಯೂರಪ್ಪ 
ಮೈಸೂರು

ನಾಳೆ ಮೈಸೂರಿಗೆ ಮುಖ್ಯಮಂತ್ರಿ ಯಡಿಯೂರಪ್ಪ 

October 15, 2020

ಮೈಸೂರು,ಅ.14(ಆರ್‍ಕೆ)-ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅ.16 ರಂದು ಸಂಜೆ 6.05 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರಿನ ಮಂಡ ಕಳ್ಳಿ ವಿಮಾನ ನಿಲ್ದಾ ಣಕ್ಕೆ ಆಗಮಿಸುವ ಮುಖ್ಯಮಂತ್ರಿಗಳು, ಸಂಜೆ 6.30 ಗಂಟೆಗೆ ಸರ್ಕಾರಿ ಅತಿಥಿ ಗೃಹದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಕೋವಿಡ್-19 ನಿಯಂತ್ರಣ ಮತ್ತು ದಸರಾ ಸಂಬಂಧ ಸಭೆ ನಡೆಸುವರು. ಅಂದು ರಾತ್ರಿ ಮೈಸೂರಿನಲ್ಲಿ ವಾಸ್ತವ್ಯ ಹೂಡಲಿರುವ ಯಡಿಯೂರಪ್ಪ, ಶನಿವಾರ (ಅ.16) ಬೆಳಗ್ಗೆ 7.35 ಗಂಟೆಗೆ ಚಾಮುಂಡಿಬೆಟ್ಟಕ್ಕೆ ತೆರಳಿ ದಸರಾ ಮಹೋತ್ಸವ ಉದ್ಘಾಟನಾ ಸಮಾ ರಂಭದಲ್ಲಿ ಪಾಲ್ಗೊಳ್ಳುವರು.

 

 

Translate »