ರಾಜ್ಯದ ಪ್ರಥಮ `ರೊ-ರೊ ರೈಲು’ ಸೇವೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ
ಮೈಸೂರು

ರಾಜ್ಯದ ಪ್ರಥಮ `ರೊ-ರೊ ರೈಲು’ ಸೇವೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ

August 31, 2020

ಬೆಂಗಳೂರು, ಆ.30- ನೆಲಮಂಗಲ ರೈಲ್ವೆ ನಿಲ್ದಾಣದಿಂದ ಸೋಲಾಪುರದ ಬಾಲೆ ರೈಲ್ವೆ ನಿಲ್ದಾಣದ ನಡುವೆ ಸಂಚರಿಸಲಿ ರುವ ‘ರೊ-ರೊ ರೈಲು’ (ರೋಲ್ ಆನ್ ರೋಲ್ ಆಫ್ ರೈಲು) ಚೊಚ್ಚಲ ಸೇವೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭಾನುವಾರ ಹಸಿರು ನಿಶಾನೆ ತೋರಿಸಿದರು.

ಬಳಿಕ ಮಾತನಾಡಿದ ಅವರು, ಮಾಲಿನ್ಯ ತಡೆಗಟ್ಟಲು, ದೇಶಕ್ಕೆ ಪರಿಸರ ಸ್ನೇಹಿ ಸಮೂಹ ಸಾರಿಗೆ, ಸಂಚಾರ ಬಹಳ ಅಗತ್ಯ ವಾಗಿದೆ ಎಂದು ಅವರು ಪ್ರತಿಪಾದಿಸಿ ದರು. ಬೆಂಗಳೂರಿನಿಂದ ತರಕಾರಿ, ತೆಂಗಿನ ಕಾಯಿ, ಅಡಿಕೆ, ತೋಟಗಾರಿಕೆ ಉತ್ಪನ್ನ ಗಳು, ಕೈಗಾರಿಕಾ ಉತ್ಪನ್ನಗಳನ್ನು ಸೋಲಾ ಪುರಕ್ಕೆ ಸಾಗಿಸಲು ಹಾಗೂ ಸೋಲಾಪುರ ದಿಂದ ಈರುಳ್ಳಿ, ಬೇಳೆಕಾಳುಗಳು ಮುಂತಾದ ಸರಕುಗಳನ್ನು ಬೆಂಗಳೂರಿಗೆ ಸಾಗಿಸಲು ಇದರಿಂದ ನೆರವಾಗಲಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿ ಅವರ ಆಶಯ ದಿಂದ ವಿವಿಧ ಸಾರಿಗೆ ವ್ಯವಸ್ಥೆ ಬಲಪಡಿ ಸಲು, ಒಗ್ಗೂಡಿಸಲು ಇದು ನೆರವಾಗಲಿದೆ ಎಂದು ಹೇಳಿದರು. ರಸ್ತೆ ಮೂಲಕ ಸಂಚರಿ ಸುವ ಟ್ರಕ್‍ಗಳನ್ನು ರೈಲಿನ ಮೂಲಕ ಸಾಗಿಸುವ ಮೂಲಕ ಕ್ಷಿಪ್ರವಾಗಿ ಟ್ರಕ್ ಗಳನ್ನು ಹಾಗೂ ಸರಕು ಸಾಮಗ್ರಿಗಳನ್ನು ಈ 2 ನಗರಗಳ ನಡುವೆ ಸಾಗಾಣಿಕೆ ಮಾಡಬಹುದಾಗಿದೆ.

ಗೋದಾಮುಗಳಿಂದ ಅಥವಾ ಮಾರುಕಟ್ಟೆಯಿಂದ ಲೋಡ್ ಆದಂತಹ ಟ್ರಕ್‍ಗಳು ರೈಲ್ವೆ ನಿಲ್ದಾಣದಲ್ಲಿ ಬಂದು ರೈಲಿನಲ್ಲಿ ಲೋಡ್ ಆಗುತ್ತವೆ. ರೈಲುಗಳ ಮೂಲಕ ಈ ಟ್ರಕ್‍ಗಳು ಮತ್ತೊಂದು ನಗರಕ್ಕೆ ಬಂದು ಸಾಮಾನು ಸರಂಜಾಮುಗಳೊಂದಿಗೆ ಗೋದಾಮು ಅಥವಾ ಮಾರುಕಟ್ಟೆಗೆ ಹೋಗಿ ಹೊತ್ತು ತಂದ ಸಾಮಾನುಗಳನ್ನು ಅನ್‍ಲೋಡ್ ಮಾಡಲು ಈ ವ್ಯವಸ್ಥೆಯಿಂದ ಸಹಕಾರಿಯಾಗುತ್ತದೆ ಎಂದರು. ಇಂತಹ ಒಂದು ರೊ-ರೊ ರೈಲಿನಲ್ಲಿ ಸರಕು ಹಾಗೂ ಟ್ರಕ್‍ಗಳೆರಡರ ಭಾರವು ಸೇರಿ 1,260 ಟನ್ ಭಾರವನ್ನು ಸಾಗಿಸಬಹು ದಾಗಿದೆ. ಈ ವ್ಯವಸ್ಥೆ ಪರಿಸರ ಸ್ನೇಹಿಯಾಗಿದ್ದು ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡುತ್ತದೆ ಹಾಗೂ ಟ್ರಕ್‍ಗಳ ದೀರ್ಘ ಬಾಳಿಕೆಗೆ ಸಹಕಾರಿಯಾಗುತ್ತದೆ. ಬೆಂಗಳೂರಿನಿಂದ ತರಕಾರಿ, ತೆಂಗಿನ ಕಾಯಿ ಅಡಿಕೆ ತೋಟಗಾರಿಕೆ ಉತ್ಪನ್ನಗಳು ಕೈಗಾರಿಕಾ ಉತ್ಪನ್ನಗಳನ್ನು ಸೋಲಾಪುರಕ್ಕೆ ಸಾಗಿಸಲು ಹಾಗೂ ಸೋಲಾಪುರದಿಂದ ಈರುಳ್ಳಿ, ಬೇಳೆ ಕಾಳುಗಳು ಮುಂತಾದ ಸರಕುಗಳನ್ನು ಬೆಂಗಳೂರಿಗೆ ಸಾಗಿಸಲು ಇದರಿಂದ ನೆರವಾಗಲಿದೆ ಎಂದರು.

ಈ ಮೊದಲು ಕೊಂಕಣ್ ರೈಲ್ವೆ ಪ್ರದೇಶದಲ್ಲಿ ಸಂಚರಿಸುತ್ತಿದ್ದ ರೊ-ರೊ ಸೇವೆಯನ್ನು ಬೆಂಗಳೂರು ಮತ್ತು ಸೋಲಾಪುರದ ಮಧ್ಯೆ ಆರಂಭಿಸುತ್ತಿರುವುದಕ್ಕೆ ನಾನು ರೈಲ್ವೆ ಇಲಾಖೆಗೆ ಅಭಿನಂದನೆ ಸಲ್ಲಿಸುವುದಾಗಿ ಯಡಿಯೂರಪ್ಪ ಅವರು ಹೇಳಿದರು.

Translate »