ಸಾರಿಗೆ ನೌಕರರ ಕೋಡಿಹಳ್ಳಿ ಎತ್ತಿಕಟ್ಟುತ್ತಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ
ಮೈಸೂರು

ಸಾರಿಗೆ ನೌಕರರ ಕೋಡಿಹಳ್ಳಿ ಎತ್ತಿಕಟ್ಟುತ್ತಿದ್ದಾರೆ ಮುಖ್ಯಮಂತ್ರಿ ಯಡಿಯೂರಪ್ಪ ಆಕ್ರೋಶ

December 13, 2020

ಬೆಂಗಳೂರು, ಡಿ.12-ಸಾರಿಗೆ ನೌಕರರನ್ನು ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಸರ್ಕಾರದ ವಿರುದ್ಧ ಎತ್ತಿಕಟ್ಟು ತ್ತಿದ್ದಾರೆ. ಅಲ್ಲದೆ, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಲಘುವಾಗಿ ಮಾತನಾಡಿದ್ದಾರೆ. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಿಡಿಕಾರಿದ್ದಾರೆ. ಶನಿವಾರ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಬಿಎಸ್‍ವೈ, ‘ಸಾರಿಗೆ ನೌಕರರ ಮುಷ್ಕರದಿಂದ ಪ್ರಯಾಣಿಕರಿಗೆ ತೊಂದರೆಯಾಗುತ್ತಿದೆ. ಸಮಸ್ಯೆ ಬಗೆಹರಿಸಲು ಸಾರಿಗೆ ಸಚಿವ ಲಕ್ಷ್ಮಣ ಸವದಿ ಅವರಿಗೆ ಸೂಚನೆ ನೀಡಲಾಗಿದೆ. ಆದರೆ, ರೈತ ಸಂಘದ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ದುರುದ್ದೇಶದಿಂದ ಕೆಲವು ನೌಕರರನ್ನು ಎತ್ತಿಕಟ್ಟಿ, ಮುಷ್ಕರ ನಡೆಸಲು ಮತ್ತು ಬಸ್‍ಗಳ ಮೇಲೆ ಕಲ್ಲು ತೂರಾಟ ನಡೆಸಲು ಪ್ರಚೋದಿಸಿದ್ದಾರೆ ಎಂದು ಸಿಎಂ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧದ ಕೋಡಿಹಳ್ಳಿ ಚಂದ್ರಶೇಖರ್ ಟೀಕೆಯನ್ನು ಯಡಿಯೂರಪ್ಪ ಖಂಡಿಸಿದ್ದಾರೆ. ‘ಹೆಚ್‍ಡಿಕೆ ಬಗ್ಗೆ ಕೋಡಿಹಳ್ಳಿ ಚÀಂದ್ರಶೇಖರ್ ಅತ್ಯಂತ ಲಘುವಾಗಿ ಮಾತಾಡಿರುವುದು ಖಂಡನೀಯ’ ಎಂದು ಸಿಎಂ ಹೇಳಿದ್ದಾರೆ. ಸಾರ್ವ ಜನಿಕರ ಹಿತದೃಷ್ಟಿಯಿಂದ ಸಾರಿಗೆ ನೌಕರರು ಸತ್ಯಾಗ್ರಹ ನಿಲ್ಲಿಸಿ ಕರ್ತವ್ಯಕ್ಕೆ ಮರಳಿ, ನಂತರ ಸಾರಿಗೆ ಸಚಿವರ ಜೊತೆಗೆ ಚರ್ಚೆಗೆ ಬರಬೇಕು ಎಂದು ಸಿಎಂ ಮತ್ತೊಮ್ಮೆ ಮನವಿ ಮಾಡಿದ್ದಾರೆ.

 

 

Translate »