ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಸಂತಾಪ
ಮೈಸೂರು

ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ: ಪ್ರಧಾನಿ ಮೋದಿ ತೀವ್ರ ಸಂತಾಪ

February 24, 2021

ಚಿಕ್ಕಬಳ್ಳಾಪುರ, ಫೆ.23-ಕನಿಷ್ಠ ಆರು ಮಂದಿಯ ಸಾವಿಗೆ ಕಾರಣವಾದ ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ತೀವ್ರ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್‍ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ ಚಿಕ್ಕಬಳ್ಳಾಪುರ ಸ್ಫೋಟ ಪ್ರಕರಣಗಳಲ್ಲಿ ಹಲವರು ಸಾವನ್ನಪ್ಪಿದ್ದು, ಘಟನೆ ಸಾಕಷ್ಟು ನೋವನ್ನು ತಂದಿದೆ. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಹಾಗೂ ಗಾಯಾಳುಗಳು ಶೀಘ್ರಗತಿಯಲ್ಲಿ ಗುಣ ಮುಖರಾಗಲಿ ಎಂದು ಪ್ರಾರ್ಥಿಸುತ್ತೇನೆಂದು ಹೇಳಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮವಾಗಿ ಜಿಲೆಟಿನ್ ಸಾಗಿಸುತ್ತಿದ್ದ ವೇಳೆ ಸ್ಫೋಟ ಸಂಭವಿಸಿದ್ದು, ಘಟನೆಯಲ್ಲಿ 6 ಮಂದಿ ಸಾವನ್ನಪ್ಪಿದ್ದಾರೆ.

ಸ್ಫೋಟದ ತೀವ್ರತೆಗೆ ಕಾರ್ಮಿಕರ ದೇಹಗಳು ಗುರುತು ಸಿಗಲಾರದಷ್ಟು ಛಿದ್ರವಾಗಿವೆ. ದುರಂತದಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಪೆರೇಸಂದ್ರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ ಎಂದು ವರದಿಗಳು ತಿಳಿಸಿವೆ.

Translate »