ಮಕ್ಕಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ
ಕೊಡಗು

ಮಕ್ಕಳ ಪ್ರತಿಭೆಗೆ ಪೋಷಕರ ಪ್ರೋತ್ಸಾಹ ಅಗತ್ಯ

November 16, 2018

ಮಡಿಕೇರಿ: ಪ್ರತಿಯೊಬ್ಬ ಮಕ್ಕ ಳಲ್ಲಿಯೂ ಸಹ ಒಂದೊಂದು ರೀತಿಯ ಪ್ರತಿಭೆ ಇದ್ದು, ಪ್ರತಿಭೆಯನ್ನು ಪ್ರೋತ್ಸಾಹಿ ಸುವ ನಿಟ್ಟಿನಲ್ಲಿ ಪೋಷಕರು ಉತ್ತೇಜನ ನೀಡುವಂತಾಗಬೇಕು ಎಂದು ಜಿಪಂ ಉಪಾ ಧ್ಯಕ್ಷೆ ಲೋಕೇಶ್ವರಿ ಗೋಪಾಲ್ ತಿಳಿಸಿದ್ದಾರೆ.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವ ಶಿಕ್ಷಣ ಅಭಿಯಾನ ಮತ್ತು ಮಾಧ್ಯಮಿಕ ಶಿಕ್ಷಣ ಅಭಿಯಾನ ಸಂಯುಕ್ತ ಆಶ್ರ ಯದಲ್ಲಿ ಗುರುವಾರ ನಗರದ ಸಂತ ಮೈಕ ಲರ ಪ್ರೌಢಶಾಲೆಯಲ್ಲಿ ನಡೆದ ಕೊಡಗು ಜಿಲ್ಲಾ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಹಾಗೂ ಪದವಿ ಪೂರ್ವ ಕಾಲೇಜು ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಸ್ಪರ್ಧಾ ಕಾರ್ಯ ಕ್ರಮದಲ್ಲಿ ಮಾತನಾಡಿದರು. ಮಕ್ಕಳ ಬೆಳವಣಿಗೆಗೆ ಪೋಷಕರು ಹೆಚ್ಚಿನ ನಿಗಾ ವಹಿಸಬೇಕು. ಆ ದಿಸೆಯಲ್ಲಿ ಪ್ರತಿಭೆ ಯನ್ನು ಪ್ರೋತ್ಸಾಹಿಸಲು ಸಹಕಾರಿಯಾ ಗಲಿದೆ ಎಂದು ಅವರು ಹೇಳಿದರು.

ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ವಿದ್ಯಾರ್ಥಿಗಳು ಪಾಠ ಪ್ರವ ಚನ ಜೊತೆಗೆ ಕಲೆ, ಹಾಡುಗಾರಿಕೆ, ಸಂಗೀತ, ಸಾಹಿತ್ಯ ಮತ್ತಿತರ ಪ್ರತಿಭೆಗಳಲ್ಲಿ ತೊಡಗಿಸಿ ಕೊಳ್ಳುವಂತಾಗಬೇಕು ಎಂದರು. ಸಂತ ಮೈಕ ಲರ ಶಾಲೆಯ ಫಾದರ್ ನವೀನ್ ಕುಮಾರ್ ಮಾತ ನಾಡಿ, ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿ ಗಳ ಪ್ರತಿಭೆಯನ್ನು ಗಮನಿ ಸಲಾಗುತ್ತದೆ. ಆದ್ದರಿಂದ ಶಿಕ್ಷಣದ ಜೊತೆಗೆ ಕ್ರೀಡೆ, ಸಾಹಿತ್ಯ, ಸಂಗೀತ, ಭಾಷಣ ಮತ್ತಿತರ ಕ್ಷೇತ್ರಗಳಲ್ಲಿ ತೊಡಗಿಸಿಕೊಳ್ಳುವಂತಾಗ ಬೇಕು. ಇದರಿಂದ ಹೆಚ್ಚಿನ ಜ್ಞಾನ ವಿಕಸ ನಕ್ಕೆ ಅನುಕೂಲವಾಗಲಿದೆ ಎಂದರು.

ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆಂಚಪ್ಪ ಮಾತನಾಡಿ, ಸ್ಪರ್ಧೆಯಲ್ಲಿ ಸೋಲು ಗೆಲುವನ್ನು ಸಮಾ ನವಾಗಿ ಸ್ವೀಕರಿಸುವಂತಾಗಬೇಕು. ಇದ ರಿಂದ ಉತ್ತಮ ಬದುಕು ಕಟ್ಟಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಮಚ್ಚಾಡೋ ಮಾತನಾಡಿ, ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಪ್ರತಿಭಾ ಕಾರಂಜಿ ಸಹಕಾರಿಯಾಗಿದೆ. ಆ ನಿಟ್ಟಿನಲ್ಲಿ ಪಠ್ಯೇ ತರ ಚಟುವಟಿಕೆಯಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತಾಗಬೇಕು ಎಂದರು. ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಸೋಮಶೇಖರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಚೇತನ್ ಮಾತನಾಡಿದರು.

ಜಿಲ್ಲಾ ಪಂಚಾಯಿತಿ ಸಿಇಓ ಲಕ್ಷ್ಮಿ ಪ್ರಿಯ, ಕ್ಷೇತ್ರ ಶಿಕ್ಷಣಾಧಿಕಾರಿ ಗಾಯತ್ರಿ, ಉಪನ್ಯಾಸಕರ ಸಂಘದ ಅಧ್ಯಕ್ಷ ಫಿಲಿಪ್ ವಾಸು, ಸರ್ವ ಶಿಕ್ಷಣ ಅಭಿಯಾನದ ಅಧಿಕಾರಿ ಪಾಂಡು ಇತರರು ಇದ್ದರು.
ಭಾಷಣ ಸ್ಪರ್ಧೆ, ಜಾನಪದ ಗೀತೆ, ಭಾವಗೀತೆ, ಭರತನಾಟ್ಯ, ಛದ್ಮವೇಷ, ಆಶು ಭಾಷಣ ಸ್ಪರ್ಧೆ, ಮಿಮಿಕ್ರಿ, ರಂಗವಲ್ಲಿ ಮತ್ತಿತರ ಸ್ಪರ್ಧಾ ಕಾರ್ಯ ಕ್ರಮಗಳು ನಡೆದವು.

Translate »