ಹೊಸೂರು: ಸುಗ್ಗಿಯ ನಂತರ ನಡೆ ಯುವ ದಕ್ಷಿಣ ಭಾರತದ ಮೊದಲ ಜಾತ್ರೆ… ರೈತರ ಅಭಿಮಾನ ಮತ್ತು ಪ್ರೀತಿಗೆ ಸಾಕ್ಷಿ ಯಾಗಿರುವ ಜೋಡೆತ್ತುಗಳು ಕಾರಿನ ಬೆಲೆ ಗಿಂತಲೂ ದುಬಾರಿ… ಇಲ್ಲಿ ಎಲ್ಲಿ ನೋಡಿ ದರೂ ದೇಶಿ ತಳಿಯ ಗೋಸಂಪತ್ತಿನ ದರ್ಬಾರ್ … ಶ್ರೀಮಂತ ರೈತರ ವೈಭೋಗಕ್ಕೆ ರಾಸು ಗಳಿಗೆ ಶೃಂಗಾರಗೊಂಡ ಚಪ್ಪರ…. ಜಾನುವಾರುಗಳನ್ನು ಕೊಳ್ಳುವ ಮಾರಾಟ ಮಾಡುವ ಭರಾಟೆ… ಜಾತ್ರೆ ನೋಡಲು ಹರಿದು ಬರುತ್ತಿರುವ ಜನಸಾಗರ… ಆದರೆ ಜಾತ್ರೆಯಲ್ಲಿ ಎಲ್ಲೆಲ್ಲೂ ಸಮಸ್ಯೆಗಳ ತೋರಣ.
ಇವು ಮೈಸೂರು ಜಿಲ್ಲೆಯಲ್ಲಿ ಭತ್ತದ ಕಣಜ ಎಂದೇ ಹೆಸರು ಪಡೆದಿರುವ ಕೆ.ಆರ್. ನಗರ ತಾಲೂಕು ಚುಂಚನಕಟ್ಟೆಯಲ್ಲಿ ಕಂಡು ಬರುತ್ತಿರುವ ಗ್ರಾಮೀಣ ಸಂಸ್ಕೃತಿ, ಸೊಗಡು ಬಿಂಬಿಸುವ ಜಾನುವಾರು ಜಾತ್ರೆಯ ದೃಶ್ಯ ವೈಭವಗಳು.
ಭರ್ಜರಿಯಾಗಿ ಆರಂಭಗೊಂಡಿರುವ ಚುಂಚನಕಟ್ಟೆ ಜಾನುವಾರು ಜಾತ್ರೆಯಲ್ಲಿ ಸಿಂಗಾರಗೊಂಡ ಜಾನುವಾರುಗಳ ಮೇಳ ಕಿ.ಮೀ. ಗಟ್ಟಲೆ ಕಂಡು ಬರುತ್ತಿದ್ದು, ಸುಗ್ಗಿಯ ದಣಿವನ್ನು ತಣಿಸಿಕೊಳ್ಳಲು ರೈತರು ಜಾನುವಾರು ಜಾತ್ರೆಯತ್ತ ಮುಗಿ ಬೀಳುತ್ತಿದ್ದು 30 ಸಾವಿರ ರೂ.ಗಳಿಂದ ಆರಂಭಿಸಿ ಲಕ್ಷಕ್ಕೂ ಅಧಿಕ ಬೆಲೆಬಾಳುವ ದುಬಾರಿ ಎತ್ತುಗಳು ಜಾತ್ರೆಯಲ್ಲಿ ಜನಾ ಕರ್ಷಣೆಯ ಕೇಂದ್ರಬಿಂದುವಾಗಿವೆ.
ಸುಗ್ಗಿಯ ನಂತರ ನಡೆಯವ ಮತ್ತು ದಕ್ಷಿಣ ಭಾರತದಲ್ಲಿ ಅತ್ಯಂತ ಹೆಸರುವಾಸಿಯಾದ ಚುಂಚನಕಟ್ಟೆ ಜಾತ್ರೆಯಲ್ಲಿ ಈಗ ಮೈಸೂರು ಜಿಲ್ಲೆ ಮಾತ್ರವಲ್ಲದೇ ಮಂಡ್ಯ, ಹಾಸನ, ಚಾಮರಾಜನಗರ, ರಾಮನಗರ, ತುಮ ಕೂರು ಸೇರಿದಂತೆ ಇನ್ನಿತರ ಜಿಲ್ಲೆಗಳ ರೈತರು ಪ್ರತಿಷ್ಠೆಗೆ ಬಿದ್ದವರಂತೆ ಜಾನುವಾರು ಗಳನ್ನು ಇಲ್ಲಿಗೆ ವಾದ್ಯಗೋಷ್ಠಿಯ ಮೂಲಕ ಕರೆತಂದಿರುವುದರಿಂದ ಇಲ್ಲಿ ಜಾನು ವಾರುಗಳನ್ನು ಕೊಳ್ಳುವುದು, ಮಾರಾಟ ಮಾಡುವುದು ಪ್ರತಿಷ್ಠೆಯೂ ಆಗಿದೆ.
ಚುಂಚನಕಟ್ಟೆಯ ಜಾನುವಾರು ಜಾತ್ರೆ ಯಲ್ಲಿ ಸದ್ಯ ಸುಮಾರು 2 ಸಾವಿರಕ್ಕೂ ಅಧಿಕ ಎತ್ತುಗಳು ಬಂದಿದ್ದು, ಇನ್ನೆರಡು ದಿನಗಳೊ ಳಗೆ ಜಾತ್ರಾಮಾಳ ತುಂಬಲಿದೆ. ರೈತರು ತಮ್ಮ ಪ್ರತಿಷ್ಠೆಯನ್ನು ಹೆಚ್ಚಿಸಿಕೊಳ್ಳಲು ತಮ್ಮ ರಾಸುಗಳಿಗೆ ಬೃಹತ್ ಶಾಮಿಯಾನ, ವಿದ್ಯುತ್ ಅಲಂಕಾರಿಕ ಚಪ್ಪರಗಳನ್ನು ಹಾಕಿಸಿ ದೇಶಿ ತಳಿಯ ಗೋಸಂಪತ್ತಿನ ರಾಜ ದರ್ಬಾರ್ ನಡೆಸುತ್ತಿರುವುದು ಅಕರ್ಷಣೀಯವಾಗಿದೆ.
ಚುಂಚನಕಟ್ಟೆ ಜಾತ್ರೆಯ ರಾಸುಗಳಿಗೆ ರಾಜ್ಯದಲ್ಲಿಯೇ ಉತ್ತಮ ಹೆಸರಿದ್ದು ಅಲ್ಲದೇ `ಗಂಡು ಜಾತ್ರೆ’ ಎಂದೇ ಹೆಸರು ಪಡೆದಿರುವ ಈ ಜಾತ್ರೆಯ ವಿಶೇಷವೆಂದರೆ ಭಾಗಶಃ ಎತ್ತುಗಳೇ ಭಾಗವಹಿಸುವುದು ಮಾತ್ರ ವಲ್ಲದೇ ಬೀಜದ ಹೋರಿಗಳು ಮತ್ತು ಹೆಚ್ಚು ದುಡಿಮೆಗೆ ಒಗ್ಗುವ ಹಳ್ಳಿ ಕಾರ್ ತಳಿಯ ಎತ್ತುಗಳು ಜಾತ್ರೆಯ ಪ್ರಮುಖ ಆಕರ್ಷಣೆಯಾಗಿರುವುದು.
ಚುಂಚನಕಟ್ಟೆಯು ರಾಜ್ಯ ಮತ್ತು ಹೊರ ರಾಜ್ಯದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಹೆಸರು ವಾಸಿಯಾಗಿದ್ದು, ಇಲ್ಲಿಗೆ ರಾಸುಗಳನ್ನು ಕೊಳ್ಳಲು ದೂರದ ಗದಗ, ಹುಬ್ಬಳ್ಳಿ, ಧಾರವಾಡ, ಕಲಬರುಗಿ, ವಿಜಯಪುರ ದಾವಣಗೆರೆ, ಸೇರಿ ದಂತೆ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಿಂದ ಮತ್ತು ಆಂಧ್ರ, ಮಹಾರಾಷ್ಟ್ರ, ತಮಿಳುನಾಡು ಸೇರಿದಂತೆ ಇನ್ನಿತರ ಕಡೆ ಯಿಂದ ರೈತರು ಬರುತ್ತಿದ್ದು, ಇದು ಭಾಗವಹಿಸುವವರಲ್ಲಿ ಉತ್ತಮ ವ್ಯವಹಾರದ ನಿರೀಕ್ಷೆ ಮೂಡಿಸಿದೆ.
ಈ ಬಾರಿ ಬಿದ್ದ ಮಳೆ ಮತ್ತು ನಾಲೆಯಲ್ಲಿ ನೀರು ದೊರೆತ ಹಿನ್ನೆಲೆ ಯಲ್ಲಿ ಉತ್ತಮ ಪ್ರಮಾಣದಲ್ಲಿ ಭತ್ತ ಸೇರಿದಂತೆ ಇನ್ನಿತರ ಬೆಳೆಗಳನ್ನು ಬೆಳೆದಿರುವ ರೈತರು ವ್ಯವಸಾಯದಲ್ಲಿ ಲಾಭ ಗಳಿಸುವು ದರ ಜತೆಗೆ ರಾಸುಗಳ ಕೊಳ್ಳುವುದು ಮತ್ತು ಮಾರುವುದರಲ್ಲೂ ಸಾಕಷ್ಟು ಲಾಭ ದೊರೆಯುವುದರಿಂದ ಮತ್ತು ಉತ್ತಮ ರಾಸುಗಳ ಕೊಳ್ಳುವಿಕೆಗೆ ಈ ಜಾತ್ರೆ ಉತ್ತಮ ವೇದಿಕೆಯಾಗಲಿದೆ. ಈಗಾಗಲೇ ಸಾವಿರಾರು ರೈತರು ತಮ್ಮ ಎತ್ತುಗಳನ್ನು ಜಾತ್ರಾ ಮಾಳಕ್ಕೆ ಕರೆತರುವಾಗ ಸಾವಿರಾರು ರೂ ಖರ್ಚು ಮಾಡಿ ನೂರಾರು ಮಂದಿಗೆ ಔತಣಕೂಟವನ್ನು ಏರ್ಪಡಿಸಿ ವಾದ್ಯ ಗೋಷ್ಠಿ ಮತ್ತು ಅದ್ಧೂರಿ ಮೆರವಣಿಗೆ ಮೂಲಕ ತಂದಿದ್ದು, ಇದು ರೈತರು ಜಾನು ವಾರುಗಳ ಮೇಲಿಟ್ಟಿರುವ ಪ್ರೀತಿಗೆ ಸಾಕ್ಷಿಯಾಗಿದೆ.
ಜಾತ್ರೆಗೆ ಉತ್ತಮ ಆರಂಭ ದೊರೆಯುತ್ತಿದ್ದಂತೆಯೇ ಇಲ್ಲಿ ಹಾಕಲಾಗಿರುವ ಅಂಗಡಿ ಮತ್ತು ಹೋಟೆಲ್‍ಗಳಿಗೆ ಭರ್ಜರಿ ವ್ಯಾಪಾರ ಶುರುವಾಗಿದೆ. ಒಟ್ಟಿನಲ್ಲಿ ಇತ್ತೀಚಿನ ಸ್ಪರ್ಧಾತ್ಮಕ ಪ್ರಪಂಚದಲ್ಲಿ ಆಧುನಿಕ ಜೀವನ ಶೈಲಿಯಿಂದ ಮರೆಯಾಗುತ್ತಿರುವ ಗ್ರಾಮೀಣ ಪರಂಪರೆಯ ನಡುವೆಯೂ ಇಲ್ಲಿನ ಜಾನು ವಾರು ಜಾತ್ರೆಯ ಸೊಬಗನ್ನು ಕಣ್ತುಂಬಿ ಕೊಳ್ಳಲು ಮತ್ತು ಶ್ರೀರಾಮದೇವರ ದೇವಾ ಲಯ, ಕಾವೇರಿ ನದಿಯ ಜಲಪಾತ, ಜಾತ್ರೆಯ ತಿಂಡಿತಿನಿಸುಗಳನ್ನು ಸವಿಯಲು ಇಲ್ಲಿಗೆ ನೀವೂ ಒಮ್ಮೆ ಬರಬೇಕು. ಅದ ಕ್ಕಾಗಿ ಕೈಬೀಸಿ ಕರೆಯುತ್ತಿದೆ ಚುಂಚನಕಟ್ಟೆ ಜಾನುವಾರು ಜಾತ್ರೆ.