ಚಾಮುಂಡೇಶ್ವರಿಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಬಿರುಸಿನ ಪ್ರಚಾರ
ಮೈಸೂರು

ಚಾಮುಂಡೇಶ್ವರಿಯಲ್ಲಿ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಬಿರುಸಿನ ಪ್ರಚಾರ

April 14, 2019

ಮೈಸೂರು: ಮೈಸೂರು ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಹೆಚ್.ವಿಜಯಶಂಕರ್ ಶನಿವಾರ ಚಾಮುಂಡೇಶ್ವರಿ ಕ್ಷೇತ್ರದ ವಿವಿಧ ಗ್ರಾಮಗಳಲ್ಲಿ ರೋಡ್ ಶೋ ನಡೆಸಿ ಮತ ಯಾಚಿಸಿದರು. ಜೆಡಿಎಸ್ ಭದ್ರಕೋಟೆ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಜಿ.ಟಿ.ದೇವೇಗೌಡ ಪ್ರತಿನಿಧಿಸುತ್ತಿರುವ ಚಾಮುಂಡೇಶ್ವರಿ ಕ್ಷೇತ್ರದ ಬೋಗಾದಿ, ದಾಸನಕೊಪ್ಪಲು, ಮರಟಿಕ್ಯಾತನಹಳ್ಳಿ, ಗಣಗರಹುಂಡಿ, ಸಾಹುಕಾರ್ ಹುಂಡಿ, ಬಸವನಪುರ, ಬೆಳವಾಡಿ ಸೇರಿದಂತೆ 18 ಗ್ರಾಮಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಮುಖಂಡರೊಂ ದಿಗೆ ರೋಡ್ ಶೋ ನಡೆಸಿ, ತಮಗೆ ಬೆಂಬಲ ನೀಡುವಂತೆ ಮನವಿ ಮಾಡಿದರು.

ಮೈತ್ರಿ ಅಭ್ಯರ್ಥಿ ವಿಜಯಶಂಕರ್ ಮಾತ ನಾಡಿ, ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉಳಿಯಬೇಕಾದರೆ ರಾಜ್ಯದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಬೇಕು. ಮೈಸೂರು, ಮಂಡ್ಯ, ಹಾಸನ ಹಾಗೂ ತುಮಕೂರು ಕ್ಷೇತ್ರದಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಸೋಲಿ ಸಲು ಬಿಜೆಪಿ ಕುತಂತ್ರ ನಡೆಸುತ್ತಿದೆ. ಮಂಡ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವ ರನ್ನು ಸೋಲಿಸುವಂತೆ ಪ್ರಧಾನಿ ನರೇಂದ್ರ ಮೋದಿ ಮೈಸೂರಿನ ಸಮಾವೇಶದಲ್ಲಿ ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಮುಖ್ಯ ಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ರಾಜ ಕೀಯ ಭವಿಷ್ಯವನ್ನು ಮುಗಿಸಲೇಬೇಕೆಂದು ಬಿಜೆಪಿ ನಾಯಕರು ಹವಣಿಸುತ್ತಿದ್ದಾರೆ. ಮೈತ್ರಿ ಅಭ್ಯರ್ಥಿಗಳಿಗೆ ಹಿನ್ನಡೆಯಾದರೆ

ಹೆಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದ ರಾಜೀನಾಮೆಗೆ ಬಿಜೆಪಿ ಆಗ್ರಹಿ ಸುತ್ತದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಕಾರ್ಯಕರ್ತರು ಸಮ್ಮಿಶ್ರ ಸರ್ಕಾ ರದ ಉಳಿವಿಗಾಗಿ ಮೈತ್ರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿ, ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೈ ಬಲಪಡಿಸುವಂತೆ ಮನವಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಡಾ. ಯತೀಂದ್ರÀ ಸಿದ್ದರಾಮಯ್ಯ, ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಎಪಿಎಂಸಿ ಅಧ್ಯಕ್ಷ ಕೆ.ಪ್ರಭುಸ್ವಾಮಿ ಜಿಪಂ ಸದಸ್ಯರಾದ ರಾಕೇಶ್ ಪಾಪಣ್ಣ, ಅರುಣ್ ಕುಮಾರ್, ಮುಖಂಡರಾದ ಡಾ.ಪ್ರಕಾಶ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ನಂದಿನಿ ಚಂದ್ರ ಶೇಖರ್, ಮಂಜುಳಾ ಮಾನಸ, ಕೃಷ್ಣ ಕುಮಾರ್ ಸಾಗರ್, ಜಿಲ್ಲಾ ಕಾಂಗ್ರೆಸ್ ಸೇವಾದಳದ ಮಾಜಿ ಅಧ್ಯಕ್ಷ ಜಯರಾಮೇ ಗೌಡ, ಸಿ.ಎಂ.ಸಿದ್ದರಾಮೇಗೌಡ, ಬೋಗಾದಿ ನಾಗರಾಜು, ಕೃಷ್ಣ ಮಾದೇಗೌಡ, ಕಮಲಾ ಆನಂದ್, ಸಾಹುಕಾರ್‍ಹುಂಡಿ ರಮೇಶ್, ಇಲವಾಲ ಸೂರಿ, ಕರೀಗೌಡ, ಆನಂ ದೂರು ರಾಮೇಗೌಡ, ಮೈದನಹಳ್ಳಿ ಶಿವಣ್ಣ, ಹೂಟಗಳ್ಳಿ ಮಹೇಶ ಚಿಕ್ಕಣ್ಣೇಗೌಡ ಇನ್ನಿತರರು ಉಪಸ್ಥಿತರಿದ್ದರು.

Translate »