ಬೆಂಗಳೂರು: ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಮತ್ತು ತಂಬಾಕು ಸೇವನೆ ಸಂಪೂರ್ಣವಾಗಿ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರದ ಆಜ್ಞೆ ಉಲ್ಲಂಘಿಸಿದಲ್ಲಿ ದಂಡ ತೆರಬೇಕಾಗುತ್ತದೆ. ಕರ್ನಾಟಕ ಧೂಮಪಾನ ನಿಷೇಧ ಹಾಗೂ ಧೂಮಪಾನಿಗಳಲ್ಲದವರ ಆರೋಗ್ಯ ರಕ್ಷಣೆ ಕಾ0iÉ್ದು ಪ್ರಕಾರ ಹೋಟೆಲ್, ಬಾರ್, ರೆಸ್ಟೋರೆಂಟ್, ಕ್ಲಬ್‍ಗಳಲ್ಲಿ, ದರ್ಶಿನಿ, ಪಬ್, ಕ್ಲಬ್‍ಗಳಲ್ಲಿ ಧೂಮಪಾನ ನಿಷೇಧಿಸಿ ಆದೇಶ ಹೊರಡಿಸಲಾಗಿದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ನಗರಾಭಿವೃದ್ಧಿ, ವಸತಿ ಸಚಿವ ಯು.ಟಿ.ಖಾದರ್, ಆದೇಶ ಇಂದಿನಿಂದಲೇ ಕಾರ್ಯರೂಪಕ್ಕೆ ಬರಲಿದೆ ಎಂದರು. ಆದೇಶ ಪಾಲಿಸದ ಹೋಟೆಲ್, ಬಾರ್, ಕ್ಲಬ್‍ಗಳ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು.
