ಸ್ವಚ್ಛ ಭಾರತ್ ಮಿಷನ್ ಜಾಗೃತಿ ಬೀದಿ ನಾಟಕ
ಹಾಸನ

ಸ್ವಚ್ಛ ಭಾರತ್ ಮಿಷನ್ ಜಾಗೃತಿ ಬೀದಿ ನಾಟಕ

February 7, 2019

ಹಾಸನ: ಜಿಲ್ಲಾ ಪಂಚಾಯಿತಿ, ಸ್ವಚ್ಛ ಭಾರತ್ ಮಿಷನ್ ಗ್ರಾಮೀಣ ಯೋಜನೆ ಯಡಿ ಘನ, ದ್ರವ, ತ್ಯಾಜ್ಯ ನಿರ್ವಹಣೆ ಕುರಿತಂತೆ ಜಿಲ್ಲಾ ಪಂಚಾಯಿತಿ ಆವರಣ ದಲ್ಲಿ ಹಮ್ಮಿಕೊಳ್ಳಲಾಗಿದ್ದ ಬೀದಿನಾಟಕ ಕಾರ್ಯಕ್ರಮಕ್ಕೆÀ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶ್ವೇತಾ ದೇವರಾಜು ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು, ಕಸ ವಿಂಗಡಣೆ ಮತ್ತು ವಿಲೇವಾರಿಯು ನಗರ ಪ್ರದೇಶಗಳಿಗೆ ಮಾತ್ರ ಸೀಮಿತವಾಗಿರದೆ ಗ್ರಾಮೀಣ ಪ್ರದೇಶದ ಜನರಿಗೂ ಇದರ ಬಗ್ಗೆ ತಿಳುವಳಿಕೆ ಅಗತ್ಯ. ಗ್ರಾಮ ಪಂಚಾ ಯಿತಿಗಳಿಂದ ಸಂಗ್ರಹವಾಗುವ ಕಸ, ಪ್ಲಾಸ್ಟಿಕ್ ಇತರೆ ಮರು ಬಳಕೆ ವಸ್ತುಗಳನ್ನು ಮಾರಾಟ ಮಾಡಿ ಗ್ರಾಮ ಪಂಚಾಯಿತಿ ಆದಾಯ ಗಳಿಸುವ ಉದ್ದೇಶ ಹೊಂದಿದ್ದು, ಈ ಬಗ್ಗೆ ಉಡುಪಿ ಜಿಲ್ಲೆಗೆ ಅಧ್ಯಯನ ಪ್ರವಾಸ ಕೈಗೊಳ್ಳಲಾಗುವುದು ಎಂದು ಹೇಳಿದರು.

ಈ ಹಿನ್ನೆಲೆಯಲ್ಲಿ ಜನರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಬೀದಿ ನಾಟಕ ನಡೆಸಲಾಗುತ್ತಿದೆ. ಮತ್ತು ಗ್ರಾಮ ಪಂಚಾಯಿತಿ ಹಂತದಲ್ಲಿ ತರಬೇತಿ ಕಾರ್ಯ ಕ್ರಮಗಳನ್ನು ಈ ಯೋಜನೆಯಲ್ಲಿ ಹಮ್ಮಿ ಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲೆಯು ಬಯಲು ಬಹಿರ್ದೆಸೆ ಮುಕ್ತ ಗೊಂಡಿದ್ದು, ಜಿಲ್ಲೆಯ ಗ್ರಾಮೀಣ ಪ್ರದೇಶ ದಲ್ಲಿ ಘನ, ದ್ರವ ತ್ಯಾಜ್ಯ ವಿಲೇವಾರಿಗೆ ಸಂಬಂಧಿಸಿದಂತೆ ಕಾರ್ಯಚಟುವಟಿಕೆ ಗಳನ್ನು ಹಮ್ಮಿಕೊಳ್ಳಬೇಕಾಗಿರುತ್ತದೆ. ಓಡಿಎಫ್ ಸುಸ್ಥಿರತೆ ಕಾರ್ಯಕ್ರಮದ ಅಂಗವಾಗಿ ಜಿಲ್ಲೆಯ ಗ್ರಾಮ ಪಂಚಾ ಯಿತಿಗಳಲ್ಲಿ ವೈಜ್ಞಾನಿಕವಾಗಿ ಕಸ ವಿಲೇ ವಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ. ಉಡುಪಿ ಜಿಲ್ಲೆಯಲ್ಲಿ ಸರ್ಕಾರದ ಯಾವ ನೆರವಿ ಲ್ಲದೆ ಗ್ರಾಮ ಪಂಚಾಯಿತಿಗಳ ಮೂಲಕ ಕಸ ವಿಲೇವಾರಿಗೆ ಕ್ರಮ ಕೈಗೊಳ್ಳುತ್ತಿದೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಯ ಮುಖ್ಯ ಲೆಕ್ಕಾಧಿಕಾರಿ ಶ್ರೀನಿವಾಸ್‍ಗೌಡ, ಯೋಜನಾಧಿಕಾರಿ ಅರುಣ್‍ಕುಮಾರ್, ಚಿನ್ನಸ್ವಾಮಿ ಹಾಗೂ ಇನ್ನಿತರ ಅಧಿಕಾರಿ ಗಳು ಉಪಸ್ಥಿತರಿದ್ದರು. ಬೀದಿನಾಟಕ ಕಾರ್ಯ ಕ್ರಮವು ಬಿ.ಟಿ ಮಾನವ ಮತ್ತು ಕಲಾ ತಂಡದ ವತಿಯಿಂದ ಮೂಡಿ ಬಂದಿತು.

Translate »