ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ  ಹಿಂದೂ ಸ್ಮಶಾನ ಭೂಮಿ ಒತ್ತುವರಿ ತೆರವು
ಕೊಡಗು

ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಹಿಂದೂ ಸ್ಮಶಾನ ಭೂಮಿ ಒತ್ತುವರಿ ತೆರವು

February 7, 2019

ಸಿದ್ದಾಪುರ: ಹಿಂದೂ ಸ್ಮಶಾನ ಭೂಮಿಯನ್ನು ವ್ಯಕ್ತಿಯೋರ್ವ ಒತ್ತುವರಿ ಮಾಡಿಕೊಂಡಿದ್ದನ್ನು ಬಿಗಿ ಪೊಲೀಸ್ ಬಂದೋಬಸ್ತ್ ನಡುವೆ ಕಂದಾಯ ಇಲಾಖೆ ಅಧಿಕಾರಿಗಳು ತೆರವುಗೊಳಿಸಿ ಗ್ರಾಮ ಪಂಚಾಯಿತಿ ಸುರ್ಪದಿಗೆ ಒಪ್ಪಿಸು ವಲ್ಲಿ ಯಶಸ್ವಿಯಾಗಿದ್ದಾರೆ.

ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬರಡಿ ಗ್ರಾಮದಲ್ಲಿ ಕಳೆದ ಕೆಲ ವರ್ಷಗಳಿಂದ 20ಕ್ಕೂ ಹೆಚ್ಚು ಸೆಂಟ್ ಸಾರ್ವ ಜನಿಕ ಸ್ಮಶಾನ ಭೂಮಿಯನ್ನು ಸ್ಥಳೀಯ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ನರ್ಸರಿ ಕೃಷಿ ಮಾಡುತ್ತಿದ್ದರೆನ್ನಲಾಗಿದೆ. ಇದ ರಿಂದ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಇಲ್ಲದೇ ಶವಸಂಸ್ಕಾರಕ್ಕೆ ಪರ ದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು.

ಕೆಲ ದಿನಗಳ ಹಿಂದೆ ಗ್ರಾಮದ ವ್ಯಕ್ತಿ ಯೊಬ್ಬರು ಮೃತಪಟ್ಟ ಸಂದರ್ಭದಲ್ಲಿ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಸ್ಥಳೀಯರು ಸ್ಮಶಾನ ಭೂಮಿಯನ್ನು ಬಿಡಿಸಿಕೊಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿದ್ದರು.

ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿ ಗಳು ಭೇಟಿ ನೀಡಿ ಪರಿಶೀಲಿಸಿ ಮೇಲಾ ಧಿಕಾರಿಗಳಿಗೆ ಮಾಹಿತಿ ನೀಡಿದ ನಂತರ ಇದೀಗ ತಹಸೀಲ್ದಾರ್ ನೇತೃತ್ವದಲ್ಲಿ ಸ್ಮಶಾನ ಭೂಮಿ ಒತ್ತುವರಿ ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಗ್ರಾಮ ಪಂಚಾಯಿತಿ ವಾರ್ಡ್ ಸದಸ್ಯ ಯೋಗೇಶ್ ಮಾತನಾಡಿ, ಕಳೆದ ಕೆಲ ವರ್ಷಗಳಿಂದ ಸಾರ್ವಜನಿಕ ಸ್ಮಶಾನ ಭೂಮಿ ಯನ್ನು ಸ್ಥಳೀಯ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ನರ್ಸರಿ ಕೃಷಿ ಮಾಡುತ್ತಿದ್ದರು.

ಇದರಿಂದ ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ಸೂಕ್ತ ಜಾಗದ ವ್ಯವಸ್ಥೆ ಇಲ್ಲದೆ ಪರ ದಾಡುವಂತಹ ಪರಿಸ್ಥಿತಿ ನಿರ್ಮಾಣವಾ ಗಿತ್ತು ಗ್ರಾಮ ಪಂಚಾಯಿತಿಯಲ್ಲಿ ನಿರ್ಣಯ ಕೈಗೊಂಡು ಒತ್ತುವರಿ ಸ್ಮಶಾನ ಭೂಮಿ ಯನ್ನು ತೆರವುಗೊಳಿಸಲು ಸಂಬಂಧಪಟ್ಟ ಕಂದಾಯ ಇಲಾಖೆಗೆ ದೂರು ನೀಡಲಾ ಗಿತ್ತು. ಇದರನ್ವಯ ಕಂದಾಯ ಇಲಾಖೆ ಅಧಿಕಾರಿಗಳು ಪೊಲೀಸರ ಸಹಕಾರ ದೊಂದಿಗೆ ತೆರವುಗೊಳಿಸಿದ್ದು, ಗ್ರಾಮ ಪಂಚಾ ಯಿತಿ ತಡೆಗೋಡೆ ಹಾಗೂ ಮೂಲ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ.

ಕಂದಾಯ ಇಲಾಖೆ ಅಧಿಕಾರಿ ಮಧು ಸೂದನ್ ಮಾತನಾಡಿ, ಬರಡಿ ಗ್ರಾಮದಲ್ಲಿ ಸಾರ್ವಜನಿಕ ಸ್ಮಶಾನ ಭೂಮಿ ಒತ್ತುವರಿ ಯಾಗಿರುವ ಬಗ್ಗೆ ದೂರು ಬಂದಿದ್ದ ಹಿನ್ನೆ ಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶದಂತೆ ತಹಸೀಲ್ದಾರವರ ನೇತೃತ್ವದಲ್ಲಿ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯಿತಿ ಸುರ್ಪದಿಗೆ ನೀಡಲಾಗಿದೆ.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ ಮಾತನಾಡಿ ಸಾರ್ವ ಜನಿಕ ಸ್ಮಶಾನವನ್ನು ಸ್ಥಳೀಯ ವ್ಯಕ್ತಿಯೊ ಬ್ಬರು ಒತ್ತುವರಿ ಮಾಡಿಕೊಂಡಿದ್ದರು. ಸಾರ್ವ ಜನಿಕರ ದೂರಿನ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಒತ್ತುವರಿ ತೆರವು ಗೊಳಿಸಿ ಪಂಚಾಯಿತಿಗೆ ನೀಡಿದ್ದಾರೆ. ಗ್ರಾಪಂ ಮೂಲಕ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದರು. ಸರ್ಕಲ್ ಇನ್ಸ್‍ಪೆಕ್ಟರ್ ಅನೂಪ್ ಮಾದಪ್ಪ ನೇತೃತ್ವದಲ್ಲಿ ಸಿದ್ದಾಪುರ ಠಾಣಾಧಿಕಾರಿ ದಯಾನಂದ್ ಬಿಗಿ ಪೊಲೀಸ್ ಬಂದೋ ಬಸ್ತ್ ಕೈಗೊಂಡಿದ್ದರು.

ಈ ಸಂದರ್ಭ ಕಂದಾಯ ಇಲಾಖೆ ಅಧಿಕಾರಿ ಅನುಷಾ, ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಸಫಿಯಾ ಮೊಹಮ್ಮದ್ ಗ್ರಾಪಂ ಸದಸ್ಯರುಗಳಾದ ಸಂಶೀರ್, ಶೈಲಾ, ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಶಂಶು, ಗ್ರಾಮಸ್ಥರಾದ ಪ್ರಕಾಶ್, ಮಣಿ, ಮನೋಜ್, ಸುದೇಶ್, ಪ್ರದೀಶ್, ಚಂದ್ರ, ಮಣಿಯ, ಮಿಥುನ್, ಪುತ್ತನ್, ಅಜಿತ್, ಪದ್ಮನಾಭ, ಸುನೀಲ್, ಸತ್ಯ ಸೇರಿದಂತೆ ಮತ್ತಿತರರು ಇದ್ದರು.

Translate »