ಬೆಂಗಳೂರು, ಮೇ ೯- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ಮತ್ತೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಸಂಪುಟ ವಿಸ್ತರಣೆ ಇಲ್ಲವೇ ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ. ಹೀಗಾಗಿ ಸಚಿವಾ ಕಾಂಕ್ಷಿಗಳು ಮತ್ತೆ ಕಣ್ಣರಳಿಸಿ ಕೂಡುವಂತೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನವೆಂ ಬರ್‌ನಲ್ಲಿ ನಡೆಯುವ ಇನ್ವೆಸ್ಟ್ ಕರ್ನಾಟಕ ಸಮಾವೇಶದ ಹಿನ್ನೆಲೆ ಯಲ್ಲಿ ಮಂಗಳವಾರ ವಿವಿಧ ದೇಶಗಳ ಹೈಕಮಿಷನರ್‌ಗಳು ಹಾಗೂ ಅಂಬಾಸಿಡರ್‌ಗಳ ಜೊತೆ ಸಭೆ ನಡೆಸಲು ದೆಹಲಿಗೆ ತೆರಳುತ್ತಿದ್ದಾರೆ. ಅಂಬಾಸಿಡರ್‌ಗಳು ಹಾಗೂ ಹೈಕಮಿಷನರ್‌ಗಳ ಜೊತೆಗಿನ ಸಭೆಯ ನಂತರ ಸಂಜೆ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡುವ ಸಾಧ್ಯತೆ ಇದೆ. ಭೇಟಿಗೆ ಅವಕಾಶ ದೊರೆತರೆ ಸಂಪುಟ ಪುನಾರಚನೆ ಕುರಿತು ಚರ್ಚಿಸುವ ಸಾಧ್ಯತೆ ಇದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಅದೇ ಕಾರಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಂಗಳವಾರ ರಾತ್ರಿಯೇ ದೆಹಲಿಯಿಂದ ವಾಪಸ್ ಆಗುವುದನ್ನು ಮುಂದೂಡಿ ಬುಧವಾರ ಬೆಳಗ್ಗೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ ಎಂದು ತಿಳಿದು ಬಂದಿದೆ.
ಮತ್ತೆ ನಿರೀಕ್ಷೆ: ಮೇ ೩ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ರಾಜ್ಯಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ದೆಹಲಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಪಕ್ಷದ ರಾಷ್ಟಿçÃಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೊಂದಿಗೆ ಚರ್ಚಿಸಿ ಸಚಿವ ಸಂಪುಟ ಪುನಾರಚನೆ ಕುರಿತು ಮಾಹಿತಿ ನೀಡುವುದಾಗಿ ಮುಖ್ಯಮಂತ್ರಿ ಅವರಿಗೆ ತಿಳಿಸಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು. ಇದರ ನಡುವೆಯೇ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರು ಮೂರ್ನಾಲ್ಕು
ದಿನಗಳಲ್ಲಿ ಸಂಪುಟ ಪುನಾರಚನೆಯಾಗುವ ವಿಶ್ವಾಸ ಇದೆ ಎಂಬ ಮಾತುಗಳನ್ನು ಆಡಿದ್ದಾರೆ. ಇದು ಸಂಪುಟ ಪುನಾರಚನೆಗೆ ಮತ್ತಷ್ಟು ಪುಷ್ಠಿ ನೀಡಿದ್ದು, ಈ ಬಾರಿ ಸಂಪುಟ ವಿಸ್ತರಣೆ, ಪುನಾರಚನೆಯ ಅನಿಶ್ಚಿತತೆಗೆ ತೆರೆ ಬೀಳುವ ಸಾಧ್ಯತೆ ಇದೆ.
ಒಂದು ವೇಳೆ ಸಚಿವ ಸಂಪುಟ ಪುನಾರಚನೆಗೆ ಹೈಕಮಾಂಡ್ ಒಪ್ಪಿಗೆ ನೀಡಿದರೆ ಎರಡು ಮೂರು ದಿನಗಳಲ್ಲಿ ವಿಸ್ತರಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹೀಗಾಗಿ ಈ ಬಾರಿಯ ಸಿಎಂ ದೆಹಲಿ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಪಕ್ಷ ಸೇರ್ಪಡೆ ಚರ್ಚೆ ಸಾಧ್ಯತೆ: ದೆಹಲಿಯಲ್ಲಿ ಪಕ್ಷದ ರಾಷ್ಟಿçÃಯ ಅಧ್ಯಕ್ಷರ ಭೇಟಿ ಯಾದರೆ, ರಾಜ್ಯದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಸೇರ್ಪಡೆ ಯಾಗಲು ಅನೇಕ ನಾಯಕರು ಸಂಪರ್ಕ ಮಾಡುತ್ತಿದ್ದು, ಅಂತಹ ನಾಯಕರ ಸೇರ್ಪಡೆ ಮಾಡಿಕೊಳ್ಳುವ ಕುರಿತಂತೆ ಮುಖ್ಯಮಂತ್ರಿ ಚರ್ಚೆ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಶನಿವಾರ ಬಿಜೆಪಿ ಸೇರ್ಪಡೆಯಾಗಿದ್ದ ವರ್ತೂರು ಪ್ರಕಾಶ ಸೇರಿದಂತೆ ಕೆಲವು ನಾಯಕರ ಸೇರ್ಪಡೆಗೆ ಪಕ್ಷದ ಹೈಕಮಾಂಡ್ ತಡೆಯೊಡ್ಡಿತ್ತು ಎನ್ನಲಾಗಿದೆ. ಅದೇ ಕಾರಣಕ್ಕೆ ಶನಿವಾರ ಕೇಂದ್ರ ಕಲ್ಲಿದ್ದಲು ಮತ್ತು ಗಣ ಸಚಿವ ಪ್ರಹ್ಲಾದ್ ಜೋಷಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿ ಬೆಂಗಳೂರು ಅಂತಾರಾಷ್ಟಿçÃಯ ವಿಮಾನ ನಿಲ್ದಾಣ ದಲ್ಲಿ ಪ್ರತ್ಯೇಕ ಮಾತುಕತೆ ನಡೆಸಿ, ಅವರ ಸೇರ್ಪಡೆ ಕುರಿತು ಹೈಕಮಾಂಡ್ ನಾಯಕರಿಗೆ ಮನವರಿಕೆ ಮಾಡಿಕೊಡುವ ಪ್ರಯತ್ನ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.
ಐ ಯಾಮ್ ಸೀರಿಯಸ್…!
ಜಿಪಂ ಸಿಇಓಗಳಿಗೆ ಸಿಎಂ ಬೊಮ್ಮಾಯಿ ಎಚ್ಚರಿಕೆ
ಪಿಡಿಓಗಳಿಗೆ ಲಂಗು-ಲಗಾಮಿಲ್ಲ: ಸಿಎಂ ಗರಂ
ಸರ್ಕಾರದ ಕಾರ್ಯಕ್ರಮ ಜನರಿಗೆ ತಲುಪುತ್ತಿಲ್ಲ
ಬೆಂಗಳೂರು ಮೇ ೯ (ಕೆಎಂಶಿ)-ನನ್ನ ಸ್ಟೆöÊಲೇ ಬೇರೆ, ಐ ಯಾಮ್ ಸೀರಿಯಸ್, ಹೇಳೋರು, ಕೇಳೋರು ಯಾರೂ ಇಲ್ಲ ಅಂದುಕೊAಡಿ ದ್ದೀರಾ… ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತರಾಟೆಗೆ ತೆಗೆದುಕೊಂಡ ಪರಿ ಇದು.
ವಿಧಾನಸೌಧದ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ನಡೆಸಿದ ಮುಖ್ಯಮಂತ್ರಿಯವರು, ಐ ಯಾಮ್ ಸೀರಿ ಯಸ್, ನೀವು ಸರ್ಕಾರದ ಕಾರ್ಯಕ್ರಮಗಳನ್ನು ಸಮರ್ಪಕ ವಾಗಿ ಜನರಿಗೆ ತಲುಪಿಸುವಲ್ಲಿ ವಿಫಲರಾಗುತ್ತಿದ್ದೀರಿ. ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಬೇಕಾದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಲಂಗು ಲಗಾಮು ಇಲ್ಲದಂತಾಗಿದ್ದಾರೆ. ಮೊದಲು ಅವರನ್ನು ಹದ್ದುಬಸ್ತಿನಲ್ಲಿಡಿ ಎಂದಿದ್ದಾರೆ. ಮೊದಲು ಜನರಿಗೆ ಸರ್ಕಾರದ ಯೋಜನೆಗಳು ತಲುಪುವಂತೆ ನೋಡಿ ಕೊಳ್ಳಿ. ಬಜೆಟ್‌ನ ಕಾರ್ಯಕ್ರಮಗಳು ಈ ಮಾಸಾಂತ್ಯದ ವೇಳೆಗೆ ಅನುಷ್ಠಾನಗೊಳ್ಳಬೇಕು. ಭ್ರಷ್ಟಾಚಾರ ಮತ್ತು ನಿರ್ಲಕ್ಷ÷್ಯದಿಂದಾಗಿ ಸರ್ಕಾರದ ಯಾವುದೇ ಯೋಜನೆಗಳು ಜನಸಾಮಾನ್ಯರನ್ನು ತಲುಪುತ್ತಿಲ್ಲ. ಹೀಗೆ ಮುಂದುವರೆದಲ್ಲಿಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕಾಗುತ್ತದೆ. ನಿಮ್ಮ ಬಗ್ಗೆ ನನಗೆ ತಿಳಿದಿದೆ. ನಿಮ್ಮನ್ನು ಯಾರೂ ಲೆಕ್ಕಕ್ಕೆ ಇಟ್ಟುಕೊಂಡಿಲ್ಲ. ನಿಮ್ಮ ಮಾತನ್ನು ಯಾವ ಪಂಚಾಯಿತಿಯಲ್ಲಿ, ಯಾವ ಪಿಡಿಓಗಳು ಕೇಳುತ್ತಾರೆ, ನೀವೇ ಹೇಳಿ. ಸಿಇಓಗಳು ಎಂದರೆ ಪಿಡಿಓಗಳಿಗೆ ಭಯವಿಲ್ಲ ದಂತಾಗಿದೆ. ಜನಸಾಮಾನ್ಯರ ಸಮಸ್ಯೆಗಳಿಗೆ ಯಾವ ಒಬ್ಬ ಪಿಡಿಓಗಳು ಸ್ಪಂದಿಸುತ್ತಿಲ್ಲ. ಜನಸಾಮಾನ್ಯರ ಅರ್ಜಿಗಳನ್ನು ಒಂದು ವರ್ಷವಾದರೂ ಪರಿಹರಿಸುತ್ತಿಲ್ಲ. ಫಲಾನುಭವಿ ಗಳ ಪಟ್ಟಿ ಮಾಡುವುದರಲ್ಲೇ ವಿಳಂಬ ಮಾಡುತ್ತಾರೆ. ಇನ್ನು ಕಾರ್ಯಕ್ರಮಗಳು ಎಲ್ಲಿ ತಲುಪುತ್ತವೆ ಎಂದು ಪ್ರಶ್ನಿಸಿದರು. ನಿಮ್ಮ ಕೆಳ ಹಂತದ ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿಡಿ. ಇಲ್ಲವಾದಲ್ಲಿ ಅದರ ಹೊಣೆಗಾರಿಕೆಯನ್ನು ನೀವೇ ಹೊರಬೇಕಾಗುತ್ತದೆ. ಮೊದಲು ಗ್ರಾಮಗಳಿಗೆ ತೆರಳಿ ಪಿಡಿಒಗಳ ಮೇಲೆ ಹಿಡಿತ ಸಾಧಿಸಿ, ಜನರ ಸಮಸ್ಯೆಗಳಿಗೆ ಸ್ಪಂದಿಸಿ ಎಂದರು.