ಇಂದು ಸಿಎಂ ಬಿಎಸ್‍ವೈ ಸಭೆ
ಮೈಸೂರು

ಇಂದು ಸಿಎಂ ಬಿಎಸ್‍ವೈ ಸಭೆ

October 16, 2020

ಬೆಂಗಳೂರು, ಅ.15(ಕೆಎಂಶಿ)- ಮೈಸೂರು ನಗರ ಹಾಗೂ ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಮಾಡುವ ಸಂಬಂಧ ಮುಖ್ಯ ಮಂತ್ರಿ ಬಿ.ಎಸ್.ಯಡಿ ಯೂರಪ್ಪ ನಾಳೆ (ಶುಕ್ರವಾರ) ಸಂಜೆ ಸಭೆ ನಡೆಸಲಿದ್ದಾರೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗಾಗಿ ನಾಳೆ ವಿಶೇಷ ವಿಮಾನದಲ್ಲಿ ಸಾಂಸ್ಕøತಿಕ ನಗರಕ್ಕೆ ತೆರಳುತ್ತಿರುವ ಮುಖ್ಯಮಂತ್ರಿಯವರು, ಸಂಜೆ ಸರ್ಕಾರಿ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿ ವರು, ಸ್ಥಳೀಯ ಶಾಸಕರು ಮತ್ತು ಅಧಿಕಾರಿಗಳ ಸಭೆ ಕರೆದಿದ್ದಾರೆ. ಬೆಂಗಳೂರು ನಂತರ ಮೈಸೂ ರಲ್ಲಿ ಕೋವಿಡ್-19 ಸಾಂಕ್ರಾಮಿಕ ಸೋಂಕು ಬಹಳ ವೇಗವಾಗಿ ಹಬ್ಬುತ್ತಿದೆ. ಇದಕ್ಕೆ ತಡೆಯೊಡ್ಡುವುದು ಮತ್ತು ಅಧಿಕಾರಿಗಳಿಂದ ಮಾಹಿತಿ ಪಡೆದು, ಸರ್ಕಾ ರದ ವತಿಯಿಂದ ನಿಯಂತ್ರಣಕ್ಕೆ ಅಗತ್ಯವಾದ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಿದ್ದಾರೆ. ಇದೇ ಸಂದÀರ್ಭದಲ್ಲಿ ದಸರಾ ಆಚರಣೆಗೆ ಸಂಬಂಧಿಸಿ ದಂತೆ ಸ್ಥಳೀಯ ಆಡಳಿತ ಕೈಗೊಂಡಿರುವ ಕ್ರಮಗಳ ಪರಿಶೀಲನೆ ನಡೆಸಿ, ಅಗತ್ಯ ಕಂಡು ಬಂದರೆ ಸಲಹೆ ಸೂಚನೆಗಳನ್ನು ನೀಡಲಿದ್ದಾರೆ. ಸಭೆಯ ನಂತರ ಅಲ್ಲೇ ವಾಸ್ತವ್ಯ ಹೂಡುವ ಮುಖ್ಯಮಂತ್ರಿಯವರು ಶನಿವಾರ ಬೆಳಗ್ಗೆ 7.45ಕ್ಕೆ ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದರ್ಶನ ಹಾಗೂ ಅಗ್ರ ಪೂಜೆಯೊಡನೆ ಪ್ರಸಕ್ತ ಸಾಲಿನ ಮಹೋತ್ಸವಕ್ಕೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದ ನಂತರ ವಿಶೇಷ ವಿಮಾನದ ಮೂಲಕ ನಗರಕ್ಕೆ ಹಿಂತಿರುಗಲಿದ್ದಾರೆ. ಕೋವಿಡ್-19 ಸಾಂಕ್ರಾಮಿಕ ರೋಗ ಹರಡುತ್ತಿರುವ ಹಿನ್ನೆಲೆಯಲ್ಲಿ ಸಚಿವರು, ಶಾಸಕರು, ಸಂಸತ್ ಸದಸ್ಯರು ಮತ್ತು ಅಧಿಕಾರಿಗಳು ಅತೀ ಕಡಿಮೆ ಸಂಖ್ಯೆಯಲ್ಲಿರುವಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಕಾರ್ಯಾಲಯ ಜಿಲ್ಲಾಡಳಿತಕ್ಕೆ ಆದೇಶಿಸಿದೆ. ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವವರು ಕಡ್ಡಾಯ ವಾಗಿ ಮಾಸ್ಕ್‍ಗಳನ್ನು ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆಯು ಸಲಹೆ ಮಾಡಿದ್ದಾರೆ. ಈಗಾಗಲೇ ರಾಜ್ಯದ ಮುಖ್ಯಕಾರ್ಯದರ್ಶಿಗಳು ದಸರಾ ಆಚರಣೆ ಕುರಿತು ಜಿಲ್ಲಾಡಳಿತ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ನಿನ್ನೆ ಸರ್ಕಾರಿ ಆದೇಶವನ್ನು ಹೊರಡಿಸಿದ್ದಾರೆ. ಆದೇಶದ ನಿಯಮಾವಳಿಗಳನ್ನು ಜಿಲ್ಲಾಡಳಿತ ಚಾಚೂ ತಪ್ಪದೇ ಮಾಡಬೇಕು. ಸರ್ಕಾರದ ಆದೇಶ ಗಳನ್ನು ಉಲ್ಲಂಘಿಸಿದವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳುವಂತೆಯು ಸೂಚಿಸಿದ್ದಾರೆ.