ಮುಷ್ಕರ ಕೈಬಿಡಲು ಸಿಎಂ ಬಿಎಸ್‍ವೈ ಕರೆ
ಮೈಸೂರು

ಮುಷ್ಕರ ಕೈಬಿಡಲು ಸಿಎಂ ಬಿಎಸ್‍ವೈ ಕರೆ

December 14, 2020

ಬೆಂಗಳೂರು,ಡಿ.13-ಮುಷ್ಕರ ನಿರತ ರಾಜ್ಯ ಸಾರಿಗೆ ಸಂಸ್ಥೆ ನೌಕ ರರು ಮುಷ್ಕರವನ್ನು ಕೈ ಬಿಡಬೇಕೆಂದು ಮುಖ್ಯ ಮಂತ್ರಿ ಯಡಿಯೂರಪ್ಪ ಕರೆ ನೀಡಿದ್ದಾರೆ.
ಸಾರಿಗೆ ಸಚಿವ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಡೆಸಿದ ಚರ್ಚೆ ಯಲ್ಲಿ ನೌಕರರ ಸಮಸ್ಯೆಗಳನ್ನು ಪರಿಹರಿ ಸಲು ಪ್ರಾಮಾಣಿಕ ಪ್ರಯತ್ನ ಮಾಡಲಾ ಯಿತು. ಸಾರಿಗೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆನ್ನುವ ಬೇಡಿಕೆ ಹೊರತುಪಡಿಸಿ ವೇತನ ತಾರತಮ್ಯ, ಕೋವಿಡ್-19ರಿಂದ ಮೃತರಾದ ನೌಕರರ ಕುಟುಂಬಗಳಿಗೆ 30 ಲಕ್ಷ ರೂ.ಗಳ ಪರಿಹಾರ, ಮೇಲಧಿಕಾರಿಗಳ ಕಿರುಕುಳ ತಪ್ಪಿಸಲು ಕ್ರಮ ಮುಂತಾದ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಲಾಗಿತ್ತು. ಇವುಗಳಿಗೆ ಸಭೆಯಲ್ಲಿ ಒಪ್ಪಿಕೊಂಡು ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರಕಟಿಸುವುದಾಗಿ ಹೇಳಿದ ಸಾರಿಗೆ ನೌಕರ ಸಂಘದ ಮುಖಂಡರು, ಕೋಡಿಹಳ್ಳಿ ಚಂದ್ರಶೇಖರ್ ಜೊತೆಗೂಡಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದ್ದಾರೆ. ಚಂದ್ರಶೇಖರ್ ಅನಗತ್ಯವಾಗಿ ನೌಕರರ ದಾರಿತಪ್ಪಿಸುತ್ತಿರುವುದು ಸರಿಯಲ್ಲ. ಅವರ ದುರುದ್ದೇಶಪೂರಿತ ನಡೆ ಖಂಡನೀಯ. ಮುಷ್ಕರದಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ, ಸಾರಿಗೆ ಸಂಸ್ಥೆಗೆ ನಷ್ಟ ಹಾಗೂ ನೌಕರರಿಗೂ ತೊಂದರೆಯಾಗುತ್ತದೆ. ನೌಕರರು ಮುಷ್ಕರ ಕೈಬಿಟ್ಟು ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಿಎಂ ಕರೆ ನೀಡಿದ್ದಾರೆ.

Translate »