ಬೆಂಗಳೂರು,ಡಿ.5-ಉಪ ಚುನಾವಣೆ ನಡೆಯುತ್ತಿರುವ 15 ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ ನಡೆದಿದ್ದು, ಡಿ.9 ರಂದು ಫಲಿತಾಂಶ ಹೊರಬೀಳಲಿದೆ. ಬಿಜೆಪಿ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲು ಹಠಕ್ಕೆ ಬಿದ್ದಿರುವ ಸಿಎಂ ಯಡಿಯೂರಪ್ಪ ಡಿ.8ರಂದು ಧರ್ಮಸ್ಥಳಕ್ಕೆ ತೆರಳಿ ಪ್ರಾರ್ಥನೆ ಸಲ್ಲಿಸಲಿದ್ದಾರೆ. ಉಪ ಚುನಾವಣೆಯ ಫಲಿತಾಂಶಕ್ಕೂ ಮೊದಲೇ ಸಿಎಂ ಧರ್ಮಸ್ಥಳದ ಮಂಜುನಾಥನ ಮೊರೆ ಹೋಗಲಿದ್ದು, ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಉಪಚುನಾವಣೆ ಪೈಕಿ ಬಿಜೆಪಿ 5 ಕ್ಷೇತ್ರಗಳಲ್ಲಿ ಗೆಲ್ಲಲೇಬೇಕಾದ ಅನಿವಾರ್ಯತೆ ಇದ್ದು, ಉಳಿದಂತೆ ಪಕ್ಷೇತರ ಅಭ್ಯರ್ಥಿಗಳ ಬೆಂಬಲ ದೊರಕಿ ಸರ್ಕಾರ ಸೇಫ್ ಆಗಲಿದೆ.