ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್
ಹಾಸನ

ಸಿಎಂ ರಾಜೀನಾಮೆ ಕೊಡುವುದಾದರೆ ಕೊಡಲಿ ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್

February 1, 2019

ಹಾಸನ: ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿಯವರು ಪದೇ ಪದೆ ರಾಜೀನಾಮೆ ಕೊಡುವುದಾಗಿ ಹೇಳಿಕೆ ಕೊಡಲಾಗುತ್ತಿದ್ದು, ಈ ರೀತಿ ಹೇಳಿಕೆ ಕೊಡುವ ಬದಲು ರಾಜೀನಾಮೆ ಯನ್ನೇ ಕೊಟ್ಟು ಬಿಡಲಿ ಎಂದು ರೈತ ಸಂಘದ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರ ಶೇಖರ್ ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಗುರುವಾರ ಮಾತನಾಡಿ, ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರು ಮೈತ್ರಿ ಸರ್ಕಾರದ ಸಮಸ್ಯೆ ಗಳ ಕುರಿತು ಸಮನ್ವಯ ಸಮಿತಿ ಅಥವಾ ಪಕ್ಷದ ವೇದಿಕೆಯಲ್ಲಿ ಚರ್ಚೆ ನಡೆಸಿ ಪರಿ ಹಾರ ಕಂಡುಕೊಳ್ಳಬೇಕು. ಅದನ್ನು ಬಿಟ್ಟು ಪದೇ ಪದೇ ರಾಜೀನಾಮೆ ಕೊಡುತ್ತೇನೆ ಎಂದು ಹೇಳುವುದರಿಂದ ಆಡಳಿತ ವರ್ಗ ಕೈಮೀರಿ ಹೋಗುವ ಸಾಧ್ಯತೆಗಳಿರುತ್ತವೆ. ಆದ್ದರಿಂದ ಮುಂದಿನ ದಿನಗಳಲ್ಲಿ ಈ ರೀತಿಯ ಹೇಳಿಕೆ ನೀಡಬಾರದು ಎಂದು ಸಲಹೆ ನೀಡಿದರು. ಕೇಂದ್ರ ಮತ್ತು ರಾಜ್ಯ ಸರ್ಕಾರ ಗಳು ರೈತರ ಸಮಸ್ಯೆಗೆ ಸ್ಪಂದಿಸಿ ಕೆಲಸ ಮಾಡಬೇಕು. ಮುಂಬರುವ ಬಜೆಟ್‍ನಲ್ಲಿ ರೈತರಿಗೆ ಉಪಯುಕ್ತವಾಗುವಂತಹ ಯೋಜನೆಗಳನ್ನು ಜಾರಿಗೊಳಿಸಬೇಕು ಎಂದು ಮನವಿ ಮಾಡಿದರು.

ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಾಳೆ ಕೊನೆಯ ಬಜೆಟ್ ಮಂಡನೆ ಮಾಡುತ್ತಿದೆ. ಕೊನೆಯ ಬಜೆಟ್‍ನಲ್ಲಾದರೂ ಉಳ್ಳವರು ಮತ್ತು ಶ್ರೀಮಂತರ ಪರವಾಗಿರುವುದನ್ನು ಬಿಟ್ಟು ರೈತರಿಗೆ ನೆರವಾಗುವಂತಹ ಉಪ ಯುಕ್ತ ಯೋಜನೆಗಳನ್ನು ಜಾರಿಗೊಳಿಸ ಬೇಕು ಎಂದು ಒತ್ತಾಯಿಸಿದರು. ನಾಲ್ಕೂ ವರೆ ವರ್ಷದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಗ್ರಾಮಾಂತರ ಭಾಗದ ಜನ ಸಾಮಾನ್ಯರಿಗೆ ಯಾವುದೇ ರೀತಿಯ ಅನು ಕೂಲಗಳನ್ನು ಮಾಡಿ ಕೊಡಲಿಲ್ಲ. ಕೇವಲ ಅಂಬಾನಿ, ಅದಾನಿ ಸೇರಿದಂತೆ ಇನ್ನಿತರೆ ಶ್ರೀಮಂತ ವರ್ಗಕ್ಕೆ ಅನುಕೂಲ ಮಾಡಿ ಕೊಡುವಂತಹ ಕಾರ್ಯಗಳನ್ನು ಮಾಡಿ ಕೊಂಡು ಬಂದಿದ್ದಾರೆ. ಜನಸಾಮಾನ್ಯರು, ರೈತರು ಪ್ರತಿನಿತ್ಯ ನರಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಈಗಲಾದರೂ ಅವರು ಬಡ ವರ್ಗದ ಜನರ ಕಷ್ಟಗಳಿಗೆ ಸ್ಪಂದಿಸಬೇಕು ಎಂದರು.

ಇನ್ನುಳಿದಂತೆ ರಾಜ್ಯ ಸರ್ಕಾರವೂ ಕೂಡ ಬಜೆಟ್ ಮಂಡನೆಗೆ ಸಕಲ ಸಿದ್ಧತೆಗಳನ್ನು ಮಾಡಿ ಕೊಂಡಿದೆ. ರೈತರ ಸಾಲ ಮನ್ನಾ ಸೇರಿ ದಂತೆ ರೈತರಿಗೆ ಬೆಂಬಲ ಬೆಲೆ ನೀಡುವ ವಾಗ್ದಾನವನ್ನು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೀಡಿದ್ದಾರೆ. ಅವರು ಇದಕ್ಕೆ ಕಟಿ ಬದ್ಧರಾಗಬೇಕು ಎಂದು ಹೇಳಿದರು.

ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಬಳಿ ಫೆಬ್ರವರಿ 2ರ ಶನಿವಾರ ಬೆಳಿಗ್ಗೆ 11ಕ್ಕೆ ನಡೆದಾಡುವ ದೇವರು, ಸಿದ್ದಗಂಗಾ ಮಠದ ಮಠಾಧೀ ಶರು ಡಾ.ಶ್ರೀ ಶಿವಕುಮಾರ ಸ್ವಾಮೀಜಿ ಅವರ ಪುಣ್ಯಸ್ಮರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ರೈತ ಸಂಘದ ರಾಜ್ಯ ಕಾರ್ಯದರ್ಶಿ ಆನೆಕೆರೆ ರವಿ, ಜಿಲ್ಲಾ ಧ್ಯಕ್ಷ ಬಾಬು, ಜಿಲ್ಲಾ ಸಂಚಾಲಕ ಮೀಸೆ ಮಂಜಣ್ಣ ಸೇರಿದಂತೆ ವಿವಿಧ ರೈತ ಮುಖಂಡರು ಉಪಸ್ಥಿತರಿದ್ದರು.

Translate »