ಕೆಲ ಶಾಲೆಗಳಿಗೆ ಸಿಎಂ,  ಶಿಕ್ಷಣ ಸಚಿವರ ಭೇಟಿ
News

ಕೆಲ ಶಾಲೆಗಳಿಗೆ ಸಿಎಂ, ಶಿಕ್ಷಣ ಸಚಿವರ ಭೇಟಿ

August 23, 2021

ಬೆಂಗಳೂರು: ಕೊರೊನಾ ಮುಂಜಾಗ್ರತಾ ಕ್ರಮಗಳೊಂದಿಗೆ ಸೋಮವಾರದಿಂದ ಶಾಲೆಗಳು ಆರಂಭವಾಗುತ್ತಿದ್ದು, ಈ ಸಂದರ್ಭ ದಲ್ಲಿ ಬೆಂಗಳೂರಿನ ಕೆಲವು ಶಾಲೆಗಳಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.

ಕೊರೊನಾ 3ನೇ ಅಲೆ ಆತಂಕದ ನಡು ವೆಯೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲು ರಾಜ್ಯ ಸರ್ಕಾರ ಮುಂದಾಗಿದೆ. ನಾಳೆಯಿಂದ ಶಾಲೆಗಳು ಆರಂಭವಾಗುತ್ತಿದ್ದು, ಮೊದಲ ಹಂತದಲ್ಲಿ 9ರಿಂದ 12ನೇ ತರಗತಿವರೆಗೆ ಆರಂಭವಾಗಲಿದೆ. ಶಾಲೆಗಳ ಆರಂಭಿಸಲು ಮುಂದಾಗಿರುವ ರಾಜ್ಯ ಸರ್ಕಾರ ಈಗಾಗಲೇ ಇದಕ್ಕಾಗಿ ಪ್ರತ್ಯೇಕ ಮಾರ್ಗಸೂಚಿಯನ್ನೂ ಹೊರಡಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಯವರು ನಾನೂ ಶಾಲೆಗೆ ಹೋಗುತ್ತೇನೆಂದು ಹೇಳುವ ಮೂಲಕ ಮಕ್ಕಳು ಹಾಗೂ ಪೆÇೀಷಕರಲ್ಲಿರುವ ಆತಂಕವನ್ನು ಹೋಗಲಾಡಿಸುವ ಪ್ರಯತ್ನವನ್ನು ಮಾಡಿದ್ದಾರೆ.
ಶಾಲೆಗಳ ಆರಂಭ ಕುರಿತು ನಾವು ಎಷ್ಟು ಗಂಭೀರವಾಗಿದ್ದೇವೆಂಬುದನ್ನು ವಿದ್ಯಾರ್ಥಿಗಳಿಗೆ ತಿಳಿಸಬೇಕು. ಹೀಗಾಗಿ ಸ್ವತಃ ಮುಖ್ಯಮಂತ್ರಿಗಳೇ ಶಾಲೆಗಳಿಗೆ ಭೇಟಿ ನೀಡುತ್ತಿದ್ದಾರೆಂದು ಶಿಕ್ಷಣ ಸಚಿವ ನಾಗೇಶ್ ಹೇಳಿದ್ದಾರೆ. ಈ ನಡುವೆ ಸಿಎಂ ಕೂಡ ವಿದ್ಯಾರ್ಥಿಗಳು ಯಾವುದೇ ಆತಂಕವಿಲ್ಲದೆ ಶಾಲೆಗೆ ಬರುವಂತೆ ಮನವಿ ಮಾಡಿಕೊಂಡಿದ್ದಾರೆ. ಸರ್ಕಾರ ಎಲ್ಲಾ ರೀತಿಯ ವ್ಯವಸ್ಥೆಗಳನ್ನು ಮಾಡಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಂಡಿದೆ. ಶಾಲಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಲಾಗಿದೆ. ಶಿಕ್ಷಕರು ಹಾಗೂ ಇತರೆ ಬೋಧಕೇತರ ಸಿಬ್ಬಂದಿಗಳಿಗೆ ಲಸಿಕೆಗಳನ್ನು ನೀಡಲಾಗಿದೆ. ಶಾಲೆಗಳಲ್ಲಿ ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲನೆ ಮಾಡಲಾಗುತ್ತಿದೆ. ಬ್ಯಾಚ್‍ಗಳಂತೆ ತರಗತಿಗಳನ್ನು ನಡೆಸಲಾಗುತ್ತದೆ. ಪೆÇೀಷಕರೂ ಕೂಡ ಲಸಿಕೆ ಹಾಕಿಸಿಕೊಳ್ಳಬೇಕು ಹಾಗೂ ಮಕ್ಕಳ ಆರೋಗ್ಯದ ಮೇಲೆ ಗಮನ ಹರಿಸುವಂತೆ ಮನವಿ ಮಾಡಿಕೊಳ್ಳುತ್ತೇನೆಂದು ತಿಳಿಸಿದ್ದಾರೆ.

Translate »