ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ
ಮೈಸೂರು

ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗ್ರಾಮ ವಾಸ್ತವ್ಯ ಮತ್ತೆ ಆರಂಭ

June 3, 2019

ಬೆಂಗಳೂರು: ಹಿಂದಿನ 20 ತಿಂಗಳ ತಮ್ಮ ಆಡಳಿತಾವಧಿಯಲ್ಲಿ ಗ್ರಾಮ ವಾಸ್ತವ್ಯದ ಮೂಲಕ ಜನಪ್ರಿಯರಾಗಿದ್ದ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಪಕ್ಷ ಸೋಲುಂಡ ಹಿನ್ನೆಲೆಯಲ್ಲಿ ಅದನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿಗಳು, ಜನರಿಗೆ ಹತ್ತಿರವಾಗಲು ಮತ್ತೆ ಗ್ರಾಮ ವಾಸ್ತವ್ಯ ಆರಂಭಿಸಲಿದ್ದಾರೆ.

ಈ ಬಾರಿ ಗ್ರಾಮ ವಾಸ್ತವ್ಯದಲ್ಲಿ ಸರ್ಕಾರಿ ಶಾಲೆಗಳಲ್ಲೇ ವಾಸ್ತವ್ಯ ಹೂಡಲು ನಿರ್ಧರಿಸಿರುವ ಅವರು, ಮುಂದಿನ ತಿಂಗಳು 2ನೇ ವಾರದಲ್ಲೇ ಕಳೆದ ವರ್ಷ ಪ್ರಕೃತಿ ವಿಕೋಪದಿಂದ ನಲುಗಿದ್ದ ಕೊಡಗಿನ ಶಾಲೆಯಲ್ಲಿ ವಾಸ್ತವ್ಯ ಹೂಡುವ ಮೂಲಕ ತಮ್ಮ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡಲಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, `ಜನರ ಜೊತೆ ಬೆರೆಯಲು, ಸಮಸ್ಯೆ ಅರಿಯಲು ಗ್ರಾಮ ವಾಸ್ತವ್ಯ ಮಾಡುತ್ತೇನೆ. ಜನರ ಸಮಸ್ಯೆಗಳನ್ನು ತಿಳಿಯು ತ್ತೇನೆ’ ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯಕ್ಕೆ ಇಲಾಖಾ ಸಿಬ್ಬಂದಿ ರೂಪು-ರೇಷೆಗಳನ್ನು ಸಿದ್ಧ ಪಡಿಸುತ್ತಿದ್ದಾರೆ. ಈ ಸಂಬಂಧ ಮಡಿಕೇರಿ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ಅಧ್ಯಕ್ಷತೆಯಲ್ಲಿ ಸಂತ್ರಸ್ತರ ಸಭೆ ಏರ್ಪಡಿಸಲಾಗಿದ್ದು, ಸಭೆ ಬಳಿಕ ಮುಖ್ಯಮಂತ್ರಿಗಳ ಗ್ರಾಮ ವಾಸ್ತವ್ಯದ ದಿನಾಂಕದ ಬಗ್ಗೆ ಸಚಿವರು ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ.

ಹೆಚ್ಚು ಸಮಸ್ಯೆ ಇರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿರುವ ಮುಖ್ಯಮಂತ್ರಿಗಳು, ಅಂದು ಬೆಳಿಗ್ಗೆಯೇ ವಾಸ್ತವ್ಯಕ್ಕಾಗಿ ಶಾಲೆಗೆ ತೆರಳುವರು. ದಿನವಿಡೀ ಜನರ ಸಮಸ್ಯೆಗಳನ್ನು ಆಲಿಸಿ ಅದಕ್ಕೆ ಪರಿಹಾರ ನೀಡುವರು. ರಾತ್ರಿ ಶಾಲೆಯಲ್ಲೇ ವಾಸ್ತವ್ಯ ಹೂಡಿ ಮರು ದಿನ ಬೆಳಿಗ್ಗೆ ಬೆಂಗಳೂರಿಗೆ ವಾಪಸ್ಸಾಗುವರು ಎಂದು ಮೂಲಗಳು ತಿಳಿಸಿವೆ. ಒಂದು ತಿಂಗಳಲ್ಲಿ ಕನಿಷ್ಠ 2 ಗ್ರಾಮಗಳಲ್ಲಿ ವಾಸ್ತವ್ಯ ಹೂಡಲು ಮುಖ್ಯಮಂತ್ರಿಗಳು ನಿರ್ಧರಿಸಿದ್ದಾರೆ. ಅಲ್ಲದೇ ಬೆಂಗಳೂರಿನಲ್ಲಿ ಮತ್ತೆ ಜನತಾ ದರ್ಶನ ಕಾರ್ಯಕ್ರಮಕ್ಕೆ ಕೂಡ ಚಾಲನೆ ನೀಡಲಿದ್ದಾರೆ ಎಂದು ಹೇಳಲಾಗಿದ್ದು, ಮುಖ್ಯಮಂತ್ರಿಗಳ ಈ ಕಾರ್ಯಕ್ರಮಗಳಿಗೆ ಅವರ ಕಚೇರಿ ಅಧಿಕಾರಿಗಳು ಯೋಜನೆ ತಯಾರು ಮಾಡುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿಂದಿನ 20 ತಿಂಗಳ ಆಡಳಿತಾವಧಿಯಲ್ಲಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ಗ್ರಾಮ ವಾಸ್ತವ್ಯದ ಮೂಲಕ ಸಮಸ್ಯೆಗಳನ್ನು ಪರಿಹರಿ ಸುತ್ತಿದ್ದರು. ನಾನು ಈಗಲೂ ಕೂಡ ಅವರ ಗ್ರಾಮ ವಾಸ್ತವ್ಯ ಪರಿಕಲ್ಪನೆ ಅನುಸರಿಸುತ್ತಿದ್ದು, ಸಚಿವನಾದ ನಂತರ 7ನೇ ಗ್ರಾಮ ವಾಸ್ತವ್ಯವನ್ನು ಪೂರೈಸಿದ್ದೇನೆ. ಈ ಬಾರಿ ಸಿಎಂ ಕುಮಾರಸ್ವಾಮಿ ಅವರು, ನಾನು ಉಸ್ತುವಾರಿ ವಹಿಸಿರುವ ಕೊಡಗಿನಲ್ಲಿ ಗ್ರಾಮ ವಾಸ್ತವ್ಯಕ್ಕೆ ಚಾಲನೆ ನೀಡುತ್ತಿರುವುದು ಸಂತೋಷ ತಂದಿದೆ. ಅವರ ಗ್ರಾಮ ವಾಸ್ತವ್ಯಕ್ಕೆ ಸರ್ಕಾರಿ ಶಾಲೆ ಗುರುತಿಸು ವಂತೆ ಅಧಿಕಾರಿಗಳಿಗೆ ಈಗಾಗಲೇ ತಿಳಿಸಲಾಗಿದೆ. ಜಿಲ್ಲಾ ಧಿಕಾರಿ ಆ ದಿಕ್ಕಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ. ಕಳೆದ ವರ್ಷ ಪ್ರಕೃತಿ ವಿಕೋಪದಿಂದ ತೀವ್ರ ಹಾನಿಗೊಳ ಗಾಗಿದ್ದ ಕೊಡಗಿನಲ್ಲಿ ಮುಖ್ಯಮಂತ್ರಿಗಳು ಗ್ರಾಮ ವಾಸ್ತವ್ಯ ಹೂಡಿ ಇಲ್ಲಿನ ಸಮಸ್ಯೆಗಳ ಬಗ್ಗೆ ಮತ್ತಷ್ಟು ವಿವರಗಳನ್ನು ಪಡೆದು ಸಂತ್ರಸ್ತ ಜನರಿಗೆ ಇನ್ನೂ ಹೆಚ್ಚಿನ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳುವ ಸಾಧ್ಯತೆ ಇದೆ.  – ಸಾ.ರಾ.ಮಹೇಶ್,  ಕೊಡಗು ಜಿಲ್ಲಾ ಉಸ್ತುವಾರಿ ಸಚಿವ

Translate »